Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:2 - ಕನ್ನಡ ಸಮಕಾಲಿಕ ಅನುವಾದ

2 ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ, ಅವುಗಳನ್ನು ಹಿಂಬಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಕೈಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಯೆಹೋವಾಹಾಜನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನೂ ಯೆಹೋವಾಹಾಜನು ಅನುಸರಿಸುತ್ತಲೇ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:2
8 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು.


ಎಫ್ರಾಯೀಮು, ವಿಗ್ರಹಗಳನ್ನು ಅನುಸರಿಸಲು ಮನಸ್ಸು ಮಾಡಿದ ಕಾರಣ, ಅವನು ನ್ಯಾಯತೀರ್ಪಿಗೆ ಗುರಿಯಾಗಿ, ಹಿಂಸೆಗೆ ಒಳಗಾದನು.


ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಸಮಸ್ತ ಪಾಪಗಳನ್ನು ತೊರೆದುಬಿಡದೆ, ಅವುಗಳಲ್ಲಿ ಮುಂದುವರೆದನು.


ಆದರೆ ಬೇತೇಲಿನಲ್ಲಿಯೂ, ದಾನಿನಲ್ಲಿಯೂ ಇರುವ ಬಂಗಾರದ ಕರುಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.


ಯೆಹೂದದ ಅರಸನಾದ ಅಹಜ್ಯನ ಮಗ ಯೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದಲ್ಲಿ, ಯೇಹುವಿನ ಮಗ ಯೆಹೋವಾಹಾಜನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸನಾದನು. ಅವನು ಹದಿನೇಳು ವರ್ಷ ಆಳಿದನು.


ಆದರೆ ಅವರು ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪಗಳನ್ನು ಬಿಟ್ಟುಬಿಡದೆ ಅವುಗಳಲ್ಲಿ ಮುಂದುವರಿದರು. ಇದಲ್ಲದೆ ಸಮಾರ್ಯದಲ್ಲಿ ಅಶೇರ ಸ್ತಂಭ ಇನ್ನೂ ಉಳಿದಿತ್ತು.


ಆದರೂ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಟ್ಟು ತೊಲಗದೆ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು