Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:20 - ಕನ್ನಡ ಸಮಕಾಲಿಕ ಅನುವಾದ

20 ಅನಂತರ ಎಲೀಷನು ಮೃತನಾದನು. ಅವನ ಶವವನ್ನು ಸಮಾಧಿಮಾಡಿದರು. ವರ್ಷದ ಆರಂಭದಲ್ಲಿ ಮೋವಾಬ್ಯರ ದಂಡುಗಳು ದೇಶದಲ್ಲಿ ಪ್ರವೇಶಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಎಲೀಷನು ಮರಣ ಹೊಂದಲು, ಅವನ ಶವವನ್ನು ಅವರು ಸಮಾಧಿಮಾಡಿದರು. ಮೋವಾಬ್ಯರು ಪ್ರತಿ ವರ್ಷದ ಪ್ರಾರಂಭದಲ್ಲಿ ಸುಲಿಗೆ ಮಾಡುವುದಕ್ಕೋಸ್ಕರ ಗುಂಪು ಗುಂಪಾಗಿ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಎಲೀಷನು ಮೃತನಾದನು. ಅವನ ಶವವನ್ನು ಸಮಾಧಿಮಾಡಿದರು. ಮೋವಾಬ್ಯರು ಪ್ರತಿವರ್ಷದ ಪ್ರಾರಂಭದಲ್ಲಿ ಸುಲಿಗೆಮಾಡುವುದಕ್ಕಾಗಿ ಗುಂಪುಗುಂಪಾಗಿ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಎಲೀಷನು ಮೃತಿಹೊಂದಲು ಅವನ ಶವವನ್ನು ಸಮಾಧಿಮಾಡಿದರು. ಮೋವಾಬ್ಯರು ಪ್ರತಿವರುಷದ ಪ್ರಾರಂಭದಲ್ಲಿ ಸುಲಿಗೆ ಮಾಡುವದಕ್ಕೋಸ್ಕರ ಗುಂಪು ಗುಂಪಾಗಿ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಎಲೀಷನು ತೀರಿಕೊಂಡಾಗ ಜನರು ಅವನನ್ನು ಸಮಾಧಿಮಾಡಿದರು. ವಸಂತಮಾಸದ ಒಂದು ದಿನ, ಮೋವಾಬ್ಯ ಸೈನಿಕರ ಒಂದು ಗುಂಪು ಇಸ್ರೇಲಿಗೆ ಸುಲಿಗೆ ಮಾಡಲು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:20
13 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಬಾಬಿಲೋನಿಯರನ್ನೂ, ಅರಾಮ್ಯರನ್ನೂ, ಮೋವಾಬ್ಯರನ್ನೂ, ಅಮ್ಮೋನಿಯರನ್ನೂ ಅವನ ಮೇಲೆ ಕಳುಹಿಸಿದನು. ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ, ಯೆಹೂದವನ್ನು ನಾಶಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.


ಇದಲ್ಲದೆ ಅವನು ಹೋಗಿ, “ಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿಬಿದ್ದನು. ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವೆಯೋ?” ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿದನು. ಅದಕ್ಕವನು, “ನಾನು ಬರುವೆನು, ನಾನು ನಿನ್ನವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳೇ,” ಎಂದನು.


ದೇವಭಕ್ತರು ಸ್ತೆಫನನ ಶವಸಂಸ್ಕಾರ ಮಾಡಿ, ಅವನಿಗಾಗಿ ಬಹಳ ಗೋಳಾಡಿದರು.


ಅವನು ದೇವರಿಗೋಸ್ಕರವಾಗಿಯೂ, ಆತನ ಆಲಯಕ್ಕೋಸ್ಕರವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೆಯದನ್ನು ಮಾಡಿದ್ದರಿಂದ, ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅರಸರ ಬಳಿಯಲ್ಲಿ ಹೂಳಿಟ್ಟರು.


ಆಗ ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದ ಮೇಲೆ ಮತ್ತೆ ದಾಳಿಮಾಡಲಿಲ್ಲ.


ಅರಾಮಿನವರು ಗುಂಪುಗುಂಪಾಗಿ ಹೊರಟು, ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡಿದುಕೊಂಡು ಬಂದರು. ಅವಳು ನಾಮಾನನ ಹೆಂಡತಿಗೆ ಸೇವಕಿಯಾದಳು.


ಅಹಾಬನು ಮರಣ ಹೊಂದಿದ ತರುವಾಯ, ಮೋವಾಬಿನ ಅರಸನು ಇಸ್ರಾಯೇಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.


ಇಸ್ರಾಯೇಲರು ಯೆಹೋವ ದೇವರ ಮುಂದೆ ತಿರುಗಿ ಕೆಟ್ಟದ್ದನ್ನೇ ಮಾಡಿದರು. ಅವರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನೇ ಮಾಡಿದ್ದರಿಂದ, ಯೆಹೋವ ದೇವರು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲಪಡಿಸಿದರು.


ಕೆಲವು ಕಾಲದ ನಂತರ ಯೋಸೇಫನಿಗೆ, “ನಿನ್ನ ತಂದೆ ಅಸ್ವಸ್ಥನಾಗಿದ್ದಾನೆ,” ಎಂಬ ಸುದ್ದಿ ಬಂದಿತು. ಆಗ ಅವನು ತನ್ನ ಇಬ್ಬರು ಪುತ್ರರಾದ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಕರೆದುಕೊಂಡು ತಂದೆಯ ಬಳಿಗೆ ಬಂದನು.


ಯಾಕೋಬನು ತನ್ನ ಪುತ್ರರಿಗೆ ಆಜ್ಞಾಪಿಸಿದ ತರುವಾಯ, ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಪಿತೃಗಳೊಂದಿಗೆ ಸೇರಿದನು.


ನಿಮ್ಮ ಪಿತೃಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು