2 ಅರಸುಗಳು 14:10 - ಕನ್ನಡ ಸಮಕಾಲಿಕ ಅನುವಾದ10 ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಗರ್ವಪಡುತ್ತಿರುವೆ, ನಿನ್ನ ಜಯದಲ್ಲಿ ಘನಪಡುತ್ತಾ, ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀನು ಎದೋಮ್ಯರನ್ನು ಸೋಲಿಸಿದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನದು ಸುಮ್ಮನೆ ಮನೆಯಲ್ಲಿ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ, ನಿನ್ನ ರಾಜ್ಯವಾದ ಯೆಹೂದದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ?” ಎಂದು ಉತ್ತರ ಕೊಟ್ಟುಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಬಹಳವಾಗಿ ಉಬ್ಬಿಕೊಂಡಿರುವೆ; ಆ ಕೀರ್ತಿ ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲೇ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಏಕೆ ಕೇಡನ್ನು ಬರಮಾಡಿಕೊಳ್ಳುವೆ?” ಎಂದು ಉತ್ತರಕೊಟ್ಟು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನು ಎದೋಮ್ಯರನ್ನು ಸೋಲಿಸಿದದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲಿ ಕೂತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ ಎಂದು ಉತ್ತರಕೊಟ್ಟು ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀನು ಎದೋಮ್ಯರನ್ನು ಸೋಲಿಸಿದೆಯೆಂಬುದು ನಿಜ. ಆದರೆ ನೀನು ಎದೋಮ್ಯರ ಮೇಲೆ ಜಯಗಳಿಸಿದ್ದರಿಂದ ಗರ್ವಿತನಾಗಿರುವೆ. ನೀನು ನಿನ್ನ ಮನೆಯಲ್ಲೇ ಕುಳಿತು ಬಡಾಯಿಕೊಚ್ಚಿಕೋ. ನಿನಗೆ ತೊಂದರೆಯನ್ನು ತಂದುಕೊಳ್ಳಬೇಡ. ಇಲ್ಲವಾದರೆ ನೀನೂ ಬೀಳುವುದಲ್ಲದೆ, ಯೆಹೂದವೂ ನಿನ್ನೊಂದಿಗೆ ಬಿದ್ದುಹೋಗುವುದು!” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |