2 ಅರಸುಗಳು 14:11 - ಕನ್ನಡ ಸಮಕಾಲಿಕ ಅನುವಾದ11 ಆದರೆ ಅಮಚ್ಯನು ಕೇಳದೆ ಹೋದನು. ಆದ್ದರಿಂದ ಇಸ್ರಾಯೇಲಿನ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು. ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ ಷೆಮೆಷ್ ಊರಿನ ಬಳಿಯಲ್ಲಿ ಒಬ್ಬರನ್ನೊಬ್ಬರು ಎದುರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಮಚ್ಯನು ಇದನ್ನು ಗಮನಕ್ಕೆ ತೆಗೆದುಕೊಳ್ಳದೆ ಇದ್ದುದರಿಂದ ಇಸ್ರಾಯೇಲರ ಅರಸನಾದ ಯೆಹೋವಾಷನು ಯುದ್ಧಕ್ಕೆ ಹೊರಟನು. ಅವರು ಯೆಹೂದ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅಮಚ್ಯನು ಇದನ್ನು ಲಕ್ಷಿಸಲಿಲ್ಲವಾದುದರಿಂದ ಇಸ್ರಯೇಲರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವರು ಜುದೇಯ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಮಚ್ಯನು ಇದನ್ನು ಲಕ್ಷಿಸಲಿಲ್ಲವಾದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವರು ಯೆಹೂದಪ್ರಾಂತದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದರೆ ಯೋವಾಷನ ಎಚ್ಚರಿಕೆಯನ್ನು ಅಮಚ್ಯನು ಆಲಿಸಲೇ ಇಲ್ಲ. ಆದ್ದರಿಂದ ಇಸ್ರೇಲಿನ ರಾಜನಾದ ಯೋವಾಷನು ಯೆಹೂದದ ರಾಜನಾದ ಅಮಚ್ಯನ ವಿರುದ್ಧ ಹೋರಾಟ ಮಾಡಲು ಯೆಹೂದದ ಬೇತ್ಷೆಮೆಷಿಗೆ ಹೋದನು. ಅಧ್ಯಾಯವನ್ನು ನೋಡಿ |