Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:20 - ಕನ್ನಡ ಸಮಕಾಲಿಕ ಅನುವಾದ

20 ಅವರು ಅವನ ಶವವನ್ನು ಕುದುರೆಗಳ ಮೇಲೆ ತೆಗೆದುಕೊಂಡು ಬಂದು, ದಾವೀದನ ಪಟ್ಟಣವಾದ ಯೆರೂಸಲೇಮಿನಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನ ಜನರು ಅವನ ಶವವನ್ನು ಕುದುರೆಗಳ ಮೇಲೆ ಯೆರೂಸಲೇಮಿಗೆ ತಂದು ದಾವೀದನಗರದೊಳಗೆ ಅವನ ಪೂರ್ವಿಕರ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವನ ಜನರು ಅವನ ಶವವನ್ನು ಕುದುರೆಗಳ ಮೇಲೆ ಜೆರುಸಲೇಮಿಗೆ ತಂದು ದಾವೀದ ನಗರದೊಳಗೆ ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನ ಜನರು ಅವನ ಶವವನ್ನು ಕುದುರೆಗಳಿಂದ ಯೆರೂಸಲೇವಿುಗೆ ತಂದು ದಾವೀದನಗರದೊಳಗೆ ಅವನ ಕುಟುಂಬ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಮಚ್ಯನ ದೇಹವನ್ನು ಜನರು ಕುದುರೆಗಳ ಮೇಲೆ ತೆಗೆದುಕೊಂಡು ಬಂದರು. ಅಮಚ್ಯನನ್ನು ಜೆರುಸಲೇಮಿನಲ್ಲಿರುವ ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:20
10 ತಿಳಿವುಗಳ ಹೋಲಿಕೆ  

ಅವನ ಸೇವಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತೆಗೆದುಕೊಂಡುಹೋಗಿ, ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು.


ಮನಸ್ಸೆಯು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನನ್ನು ಅವನ ಅರಮನೆಯಲ್ಲಿ ಹೂಳಿಟ್ಟರು. ಅವನ ಮಗ ಆಮೋನನು ಅವನಿಗೆ ಬದಲಾಗಿ ಅರಸನಾದನು.


ಉಜ್ಜೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನು ಕುಷ್ಠರೋಗಿಯಾಗಿದ್ದರಿಂದ, ಅವರು ಅವನ ಶವವನ್ನು ರಾಜಕುಟುಂಬದ ಸ್ಮಶಾನ ಭೂಮಿಯ ಹತ್ತಿರದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.


ಯೆಹೋರಾಮ್ ಆಳಲಾರಂಭಿಸಿದಾಗ ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಗಳಲ್ಲಿ ಅಲ್ಲ.


ಅವನ ಸೇವಕರಾದ ಶಿಮೆಯಾತನ ಮಗ ಯೋಜಾಬಾದ್ ಮತ್ತು ಶೋಮೇರನ ಮಗ ಯೆಹೋಜಾಬಾದ್ ಎಂಬವರು ಅರಸನನ್ನು ಕೊಂದರು. ಯೋವಾಷನ ಜನರು ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.


ಯೆಹೋರಾಮನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.


ಸೊಲೊಮೋನನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ತಂದೆ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ರೆಹಬ್ಬಾಮನು ಅವನಿಗೆ ಬದಲಾಗಿ ಅರಸನಾದನು.


ಹೀಗೆಯೇ ದಾವೀದನು ಮರಣಹೊಂದಿ ತನ್ನ ಪಿತೃಗಳ ಜೊತೆ ಸೇರಿದನು. ದಾವೀದನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು.


ಯೆರೂಸಲೇಮಿನವರು ಅಮಚ್ಯನ ವಿರೋಧವಾಗಿ ಒಳಸಂಚು ಮಾಡಿದ್ದರಿಂದ, ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ, ಅಲ್ಲಿ ಅವನನ್ನು ಕೊಂದುಹಾಕಿದರು.


ಆಗ ಯೆಹೂದದ ಎಲ್ಲಾ ಜನರು ಹದಿನಾರು ವರ್ಷದವನಾದ ಅಜರ್ಯನನ್ನು ತೆಗೆದುಕೊಂಡು, ಅವನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು