2 ಅರಸುಗಳು 14:26 - ಕನ್ನಡ ಸಮಕಾಲಿಕ ಅನುವಾದ26 ಇಸ್ರಾಯೇಲಿನಲ್ಲಿ ಪ್ರತಿಯೊಬ್ಬರೂ ಸ್ವತಂತ್ರನಾಗಿರಲಿ, ಗುಲಾಮನಾಗಿರಲಿ, ಎಲ್ಲರು ಎಷ್ಟು ಕಷ್ಟದಲ್ಲಿದ್ದಾರೆಂಬುದನ್ನು ಯೆಹೋವ ದೇವರು ನೋಡಿದರು. ಅವರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇಸ್ರಾಯೇಲರು ಯೆಹೋವನಿಗೆ ಅವಿಧೇಯರಾಗಿ ಘೋರಕಷ್ಟವನ್ನು ಅನುಭವಿಸುತ್ತಿದ್ದರು. ಅವರಲ್ಲಿ ಸ್ವತಂತ್ರರೂ, ಪರತಂತ್ರರೂ ನಾಶವಾಗುತ್ತಿದ್ದರೆ, ಅವರನ್ನು ರಕ್ಷಿಸುವವನು ಒಬ್ಬನೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 “ಇಸ್ರಯೇಲರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ. ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ,” ಎಂಬುದನ್ನು ಸರ್ವೇಶ್ವರ ನೋಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇಸ್ರಾಯೇಲ್ಯರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ, ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ ಎಂಬದನ್ನು ಯೆಹೋವನು ನೋಡಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಇಸ್ರೇಲಿನ ಸ್ವತಂತ್ರರಾದ ಜನರೂ ಗುಲಾಮರೂ ಬಾಧೆಪಡುತ್ತಿರುವುದನ್ನು ಯೆಹೋವನು ನೋಡಿದನು. ಇಸ್ರೇಲರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ. ಅಧ್ಯಾಯವನ್ನು ನೋಡಿ |