Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:28 - ಕನ್ನಡ ಸಮಕಾಲಿಕ ಅನುವಾದ

28 ಯಾರೊಬ್ಬಾಮನ ಇತರ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ, ಅವನ ಪರಾಕ್ರಮವೂ, ಅವನ ಯುದ್ಧಗಳೂ, ಯೆಹೂದಕ್ಕೆ ಸೇರಿದ ದಮಸ್ಕವನ್ನೂ, ಹಮಾತನ್ನೂ ಇಸ್ರಾಯೇಲಿಗೋಸ್ಕರ ಹಿಂದಿರುಗಿ ತೆಗೆದುಕೊಂಡದ್ದೂ, ಇಸ್ರಾಯೇಲಿನ ಅರಸುಗಳ ದಿನಚರ್ಯೆಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ, ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರಗಳೆಲ್ಲವೂ ಇಸ್ರಾಯೇಲರ ರಾಜಕಾಲವೃತ್ತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯಾರೊಬ್ಬಾಮನ ಉಳಿದ ಚರಿತ್ರೆ, ಅವನು ಯುದ್ಧದಲ್ಲಿ ನಡೆಸಿದ ಶೂರಕಾರ್ಯ ಮತ್ತು ಮೊದಲು ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಇವನಿಂದ ಇಸ್ರಯೇಲ್ ರಾಜ್ಯಕ್ಕೆ ವಶವಾದ ವಿವರ, ಇವೆಲ್ಲವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯಾರೊಬ್ಬಾಮನ ಉಳಿದ ಚರಿತ್ರೆಯೂ ಅವನು ಯುದ್ಧದಲ್ಲಿ ನಡಿಸಿದ ಶೂರಕೃತ್ಯಗಳೂ ಮೊದಲು ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ ಹಮಾತ್ ಎಂಬ ಪಟ್ಟಣಗಳು ಅವನಿಂದ ಇಸ್ರಾಯೇಲ್ ರಾಜ್ಯಕ್ಕೆ ಸೇರಿಸಲ್ಪಟ್ಟ ವಿವರವೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯಾರೊಬ್ಬಾಮನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ. ಯಾರೊಬ್ಬಾಮನು ಇಸ್ರೇಲಿಗಾಗಿ ದಮಸ್ಕವನ್ನು ಮತ್ತು ಹಮಾತನ್ನು ವಶಪಡಿಸಿಕೊಂಡದ್ದನ್ನು ಇದು ಒಳಗೊಂಡಿದೆ. (ಈ ನಗರಗಳು ಯೆಹೂದಕ್ಕೆ ಸೇರಿದ್ದವು.)

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:28
10 ತಿಳಿವುಗಳ ಹೋಲಿಕೆ  

ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಜನರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾಗಿ ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ, ಅರಸನಾದನು.


ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.


ಯಾರೊಬ್ಬಾಮನು ಮೃತನಾಗಿ ಇಸ್ರಾಯೇಲಿನ ಅರಸುಗಳಾದ ತನ್ನ ಪಿತೃಗಳ ಜೊತೆ ಸೇರಿದನು. ಅವನ ಮಗ ಜೆಕರ್ಯನು ಅವನಿಗೆ ಬದಲಾಗಿ ಅರಸನಾದನು.


ಇವರೆಲ್ಲರು ಯೆಹೂದದ ಅರಸನಾದ ಯೋತಾಮನ ದಿವಸಗಳಲ್ಲಿಯೂ, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ಲಿಖಿತರಾದರು.


ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ, ಅವನು ಯುದ್ಧ ಮಾಡಿದ್ದೂ, ಆಳಿದ್ದೂ, ಇವು ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಯೋವಾಷನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನನ್ನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸುಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನ ಮಗ ಯಾರೊಬ್ಬಾಮನು ಅವನ ಬದಲಿಗೆ ಅರಸನಾದನು.


ನಾನು ದಮಸ್ಕದ ಹೆಬ್ಬಾಗಿಲನ್ನು ಸಹ ಮುರಿಯುವೆನು. ಆವೆನಿನ ಕಣಿವೆಯಿಂದ ನಿವಾಸಿಯನ್ನು ಮತ್ತು ಬೇತ್ ಏದೆನಿನ ಮನೆಯಿಂದ ರಾಜದಂಡ ಹಿಡಿಯುವವನನ್ನೂ ಕಡಿದುಬಿಡುವೆನು. ಅರಾಮ್ ಜನರು ಸೆರೆಯಾಗಿ ಕೀರಿಗೆ ಹೋಗುವರು, ಇದು ಯೆಹೋವ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು