Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:3 - ಕನ್ನಡ ಸಮಕಾಲಿಕ ಅನುವಾದ

3 ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ. ತನ್ನ ತಂದೆ ಯೋವಾಷನು ಮಾಡಿದ ಹಾಗೆ ಸಮಸ್ತವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇವನು ತನ್ನ ತಂದೆಯಾದ ಯೆಹೋವಾಷನ ಮಾರ್ಗದಲ್ಲಿ ತಪ್ಪದೆ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು, ಆದರೂ ತನ್ನ ಪೂರ್ವಿಕನಾದ ದಾವೀದನಷ್ಟು ಉತ್ತಮನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇವನು ತನ್ನ ತಂದೆ ಯೆಹೋವಾಷನ ಸನ್ಮಾರ್ಗದಲ್ಲಿ ತಪ್ಪದೆ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾದನು. ಆದರೂ ತನ್ನ ಪೂರ್ವಜ ದಾವೀದನಷ್ಟು ಉತ್ತಮನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇವನು ತನ್ನ ತಂದೆಯಾದ ಯೆಹೋವಾಷನ ಮಾರ್ಗದಲ್ಲಿ ತಪ್ಪದೆ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು; ಆದರೂ ತನ್ನ ಪೂರ್ವಿಕನಾದ ದಾವೀದನಷ್ಟು ಉತ್ತಮನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಸರಿಯೆಂದು ಹೇಳಿದ ಕಾರ್ಯಗಳನ್ನು ಅಮಚ್ಯನು ಮಾಡಿದನು. ಆದರೆ ಅವನು ತನ್ನ ಪೂರ್ವಿಕನಾದ ದಾವೀದನು ಅನುಸರಿಸಿದಂತೆ ಸಂಪೂರ್ಣವಾಗಿ ಯೆಹೋವನನ್ನು ಅನುಸರಿಸಲಿಲ್ಲ. ಅಮಚ್ಯನು ತನ್ನ ತಂದೆಯಾದ ಯೆಹೋವಾಷನು ಮಾಡಿದ ಕಾರ್ಯಗಳನ್ನೆಲ್ಲ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:3
16 ತಿಳಿವುಗಳ ಹೋಲಿಕೆ  

ನಿಮ್ಮ ಪೂರ್ವಿಕರಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿ, ಬಂಗಾರದಿಂದಲ್ಲ.


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


ಯೆಹೋಯಾದಾವನ ಮರಣದ ತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.


ಯೋವಾಷನು ಯಾಜಕನಾದ ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.


ಯಾಜಕನಾದ ಯೆಹೋಯಾದಾವನು ಯೋವಾಷನಿಗೆ ಬೋಧಿಸಿದ ಎಲ್ಲಾ ವರ್ಷಗಳಲ್ಲಿ ಯೋವಾಷನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.


ಅಬಿಯಾಮನು, ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ, ಅವನ ಹೃದಯವು ತನ್ನ ದೇವರಾದ ಯೆಹೋವ ದೇವರ ಮುಂದೆ ಪೂರ್ಣವಾಗಿರದೆ, ತನಗೆ ಮುಂಚೆ ಇದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.


ಸೊಲೊಮೋನನು ಮುದುಕನಾದ ಕಾಲದಲ್ಲಿ ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗಿಸಿದರು. ಅವನ ಹೃದಯವು ತನ್ನ ತಂದೆ ದಾವೀದನ ಹೃದಯದ ಹಾಗೆ ತನ್ನ ದೇವರಾದ ಯೆಹೋವ ದೇವರ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.


ಅವನು ಆಳಲು ಆರಂಭಿಸಿದಾಗ, ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನ್, ಅವಳು ಯೆರೂಸಲೇಮಿನವಳು.


ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.


ಸೊಲೊಮೋನನು ಯೆಹೋವ ದೇವರನ್ನು ಪ್ರೀತಿಸಿ, ತನ್ನ ತಂದೆ ದಾವೀದನ ಕಟ್ಟಳೆಯಲ್ಲಿ ನಡೆಯುತ್ತಾ ಇದ್ದನು. ಆದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ, ಧೂಪವನ್ನೂ ಅರ್ಪಿಸುತ್ತಾ ಇದ್ದನು.


ಆಸನು ತನ್ನ ತಂದೆಯಾದ ದಾವೀದನ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿದನು.


ಹಿಜ್ಕೀಯನು ತನ್ನ ತಂದೆ ದಾವೀದನು ಮಾಡಿದ ಪ್ರಕಾರ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.


ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು