Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:6 - ಕನ್ನಡ ಸಮಕಾಲಿಕ ಅನುವಾದ

6 ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು,” ಎಂದು ಯೆಹೋವ ದೇವರು ಆಜ್ಞಾಪಿಸಿದ ಮೋಶೆಯ ನಿಯಮ ಗ್ರಂಥದಲ್ಲಿ ಬರೆದಿರುವ ಪ್ರಕಾರ, ಅವನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೋಶೆಯ ಧರ್ಮನಿಯಮಗ್ರಂಥದಲ್ಲಿರುವ ಯೆಹೋವನ ಅಪ್ಪಣೆಯಂತೆ, “ಮಕ್ಕಳ ಪಾಪದ ದೆಸೆಯಿಂದ ತಂದೆಗೂ, ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು” ಎಂಬುದನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆ ಮಾಡಿದ ಪಾಪದ ನಿಮಿತ್ತ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು,” ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಸರ್ವೇಶ್ವರನ ಆಜ್ಞೆಯನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಮಕ್ಕಳ ಪಾಪದ ದೆಸೆಯಿಂದ ತಂದೆಗೂ ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು ಎಂಬದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಯೆಹೋವನ ಅಪ್ಪಣೆಯನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿನ ನಿಯಮಗಳಿಗನುಸಾರವಾಗಿ ಅವನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಯೆಹೋವನು, “ಮಕ್ಕಳು ಮಾಡಿದ ತಪ್ಪಿಗೆ ತಂದೆತಾಯಿಗಳನ್ನು ಸಾವಿಗೆ ಗುರಿಪಡಿಸಬಾರದು. ತಂದೆತಾಯಿಗಳು ಮಾಡಿದ ತಪ್ಪಿಗೆ ಅವರ ಮಕ್ಕಳನ್ನು ಸಾವಿಗೆ ಗುರಿಪಡಿಸಬಾರದು. ಒಬ್ಬ ವ್ಯಕ್ತಿಯನ್ನು ಅವನು ಮಾಡಿದ ಕೆಟ್ಟಕಾರ್ಯಕ್ಕಾಗಿ ಮಾತ್ರ ಸಾವಿಗೆ ಗುರಿಪಡಿಸಬೇಕು” ಎಂದು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:6
5 ತಿಳಿವುಗಳ ಹೋಲಿಕೆ  

ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು.


ಪಾಪ ಮಾಡುವವನೇ ಸಾಯುವನು. ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲ; ನೀತಿವಂತನ ನೀತಿಯು ಅವನ ಮೇಲೆಯೇ ಇರುವುದು; ದುಷ್ಟನ ದುಷ್ಟತನವು ಅವನ ಮೇಲೆಯೇ ಇರುವುದು.


ಎಲ್ಲಾ ಪ್ರಾಣಗಳು ನನ್ನವೇ, ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ. ಪಾಪ ಮಾಡುವವನೇ ಸಾಯುವನು.


ಆದರೆ ಒಬ್ಬೊಬ್ಬನು ಸ್ವಂತ ಪಾಪಕ್ಕಾಗಿ ಸಾಯುವನು. ಹುಳಿ ದ್ರಾಕ್ಷಿಯನ್ನು ತಿಂದ ಮನುಷ್ಯನು ಯಾವನೋ, ಅವನ ಹಲ್ಲುಗಳು ಚಳಿತು ಹೋಗುವುವು.”


ಆಗ ಅರಸನು ಆಜ್ಞಾಪಿಸಲಾಗಿ, ದಾನಿಯೇಲನ ಮೇಲೆ ತಪ್ಪು ಹೊರಿಸಿದ್ದ ಮನುಷ್ಯರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗುಹೆಯಲ್ಲಿ ಹಾಕಿದರು. ಅವರು ಗುಹೆಯ ತಳವನ್ನು ಮುಟ್ಟುವುದಕ್ಕೆ ಮೊದಲೇ ಸಿಂಹಗಳು ಅವರ ಮೇಲೆ ಹಾರಿ ಬಂದು, ಅವರ ಎಲುಬುಗಳನ್ನೆಲ್ಲಾ ತುಂಡುತುಂಡಾಗಿ ಮುರಿದುಹಾಕಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು