Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:7 - ಕನ್ನಡ ಸಮಕಾಲಿಕ ಅನುವಾದ

7 ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಸೋಲಿಸಿ, ಯುದ್ಧದಲ್ಲಿ ಸೆಲ ದುರ್ಗವನ್ನು ವಶಪಡಿಸಿಕೊಂಡು, ಅದಕ್ಕೆ ಯೊಕ್ತೆಯೇಲ್ ಎಂದು ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದಲ್ಲದೆ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು, ಅವರಿಂದ ಸೆಲ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇದಲ್ಲದೆ, ಉಪ್ಪಿನ ಕಣಿವೆಯಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು ಅವರಿಂದ ‘ಸೆಲ’ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇದಲ್ಲದೆ ಉಪ್ಪಿನತಗ್ಗಿನಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಹೊಡೆದು ಅವರಿಂದ ಸೆಲ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಮಚ್ಯನು ಉಪ್ಪಿನ ಕಣಿವೆಯಲ್ಲಿ ಹತ್ತುಸಾವಿರ ಎದೋಮ್ಯರನ್ನು ಕೊಂದುಹಾಕಿ ಅವರಿಂದ ಸೆಲ ದುರ್ಗವನ್ನು ವಶಪಡಿಸಿಕೊಂಡು ಅದನ್ನು “ಯೊಕ್ತೆಯೇಲ್” ಎಂದು ಕರೆದನು. ಆ ಸ್ಥಳಕ್ಕೆ ಇಂದಿಗೂ ಅದೇ ಹೆಸರಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:7
11 ತಿಳಿವುಗಳ ಹೋಲಿಕೆ  

ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂದಿರುಗಿದಾಗ ಪ್ರಖ್ಯಾತಿ ಹೊಂದಿದನು.


ಇದಲ್ಲದೆ ಚೆರೂಯಳ ಮಗ ಅಬೀಷೈಯನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಎದೋಮ್ಯರ ಸೈನಿಕರನ್ನು ಕೊಂದನು.


ದಿಲಾನ್, ಮಿಚ್ಪೆ, ಯೊಕ್ತೇಲ್,


ದೇವರೇ, ನನ್ನನ್ನು ಕೈಬಿಟ್ಟಿದ್ದೀರಾ? ನನ್ನನ್ನು ಚದರಿಸಿದ್ದೀರಾ? ನಮ್ಮ ಕಡೆಗೆ ಬೇಸರಗೊಂಡರೂ ನಮ್ಮನ್ನು ಪುನಃ ಸ್ಥಾಪಿಸಿರಿ.


ದೇಶವನ್ನು ಆಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಮರಿಯನ್ನು ಸೆಲ ಬಂಡೆಯಿಂದ ಮರುಭೂಮಿಯ ಕಡೆಗೆ, ಚೀಯೋನ್ ಪುತ್ರಿಯರ ಪರ್ವತಕ್ಕೆ ಕಳುಹಿಸಿರಿ.


ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಗರ್ವಪಡುತ್ತಿರುವೆ, ನಿನ್ನ ಜಯದಲ್ಲಿ ಘನಪಡುತ್ತಾ, ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದು ಹೇಳಿ ಕಳುಹಿಸಿದನು.


ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ನಿನ್ನ ಭಯಂಕರವೂ ನಿನ್ನ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಸ್ಥಳದಲ್ಲಿ ಕಟ್ಟಿದರೂ, ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ‘ಯಾರು ನನ್ನನ್ನು ನೆಲಕ್ಕೆ ಇಳಿಸಬಲ್ಲವರು?’ ಎಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.


ಸಮಸ್ತ ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು