Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:9 - ಕನ್ನಡ ಸಮಕಾಲಿಕ ಅನುವಾದ

9 ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ, “ಲೆಬನೋನಿನಲ್ಲಿದ್ದ ಮುಳ್ಳುಗಿಡವು ಲೆಬನೋನಿನಲ್ಲಿರುವ ದೇವದಾರು ಮರಕ್ಕೆ, ‘ನನ್ನ ಮಗನಿಗೆ ಹೆಂಡತಿಯಾಗಿರಲು ನೀನು ನಿನ್ನ ಮಗಳನ್ನು ಕೊಡು,’ ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಇಸ್ರಾಯೇಲರ ಅರಸನಾದ ಯೆಹೋವಾಷನು ಯೆಹೂದದ ಅರಸನಾದ ಅಮಚ್ಯನಿಗೆ, “ಲೆಬನೋನಿನ ಮುಳ್ಳು ಗಿಡವು ಅಲ್ಲಿನ ದೇವದಾರುಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿ ಕಳುಹಿಸಿತು. ಸ್ವಲ್ಪ ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡು ಮೃಗವು ಅಲ್ಲಿಂದ ಹಾದುಹೋಗುತ್ತಿರುವಾಗ ಅದನ್ನು ತುಳಿದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಇಸ್ರಯೇಲರ ಅರಸನಾದ ಯೋವಾಷ ಜುದೇಯದ ಅರಸನಾದ ಅಮಚ್ಯನಿಗೆ, “ಲೆಬನೋನಿನ ಮುಳ್ಳುಗಿಡವು ಅಲ್ಲಿನ ದೇವದಾರು ಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು,’ ಎಂದು ಹೇಳಿಕಳುಹಿಸಿತು. ತುಸು ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡುಮೃಗ ಅಲ್ಲಿಂದ ಹಾದುಹೋಗುತ್ತಿರುವಾಗ ಆ ಮುಳ್ಳುಗಿಡವನ್ನು ತುಳಿದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಯೆಹೂದದ ಅರಸನಾದ ಅಮಚ್ಯನಿಗೆ - ಲೆಬನೋನಿನ ಮುಳ್ಳುಗಿಡವು ಅಲ್ಲಿನ ದೇವದಾರುಮರಕ್ಕೆ - ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು ಎಂದು ಹೇಳಿಕಳುಹಿಸಿತು. ತುಸುಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡು ಮೃಗವು ಅಲ್ಲಿಂದ ಹಾದುಹೋಗುತ್ತಿರುವಾಗ ಅದನ್ನು ತುಳಿದು ಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಸ್ರೇಲಿನ ರಾಜನಾದ ಯೋವಾಷನು ಯೆಹೂದದ ರಾಜನಾದ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡವು ಲೆಬನೋನಿನ ದೇವದಾರುಮರಕ್ಕೆ ಒಂದು ಸಂದೇಶವನ್ನು ಕಳುಹಿಸಿತು. ಅದು, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಟ್ಟು ಮದುವೆ ಮಾಡು’ ಎಂದಿತು. ಆದರೆ ಲೆಬನೋನಿನ ಒಂದು ಕಾಡುಮೃಗವು ಆ ದಾರಿಯಲ್ಲಿ ಹೋಗುವಾಗ, ಮುಳ್ಳುಗಿಡದ ಮೇಲೆ ಹಾದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:9
15 ತಿಳಿವುಗಳ ಹೋಲಿಕೆ  

ಇಗೋ, ನಾಶನದಿಂದ ಅವರು ತಪ್ಪಿಸಿಕೊಂಡರೂ ಈಜಿಪ್ಟ್ ಅವರನ್ನು ಕೂಡಿಸುವುದು. ಮೋಫ್ ಪಟ್ಟಣವು ಅವರನ್ನು ಹೂಳುವುದು. ಅವರ ಬೆಳ್ಳಿಯ ಬೊಕ್ಕಸಗಳು ಮುಳ್ಳು ಪೊದೆಗಳ ಪಾಲಾಗುವುವು. ಮುಳ್ಳುಗಿಡಗಳು ಅವರ ಗುಡಾರಗಳನ್ನು ಆವರಿಸಿಕೊಂಡಿರುವುದು.


ಆಗ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ‘ಅವನು ಸಾಮ್ಯಗಳನ್ನು ಹೇಳುವುದಿಲ್ಲವೇ?’ ಎಂದು ನನ್ನ ವಿಷಯದಲ್ಲಿ ಅವರು ಹೇಳುತ್ತಾರೆ,” ಎಂದೆನು.


ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವುವು, ಅದರ ಕೋಟೆಗಳಲ್ಲಿ ಮುಳ್ಳುಪೊದೆಗಳು ಇರುವುವು. ಅದು ನರಿಗಳ ನಿವಾಸವೂ, ಗೂಬೆಗಳಿಗೆ ಸ್ಥಾನವೂ ಆಗುವುದು.


ಮುಳ್ಳುಪೊದರಿನ ನಡುವೆ ತಾವರೆಯಂತೆ ನನ್ನ ಪ್ರಿಯಳು ಕನ್ಯಾಮಣಿಗಳಲ್ಲಿ ಶ್ರೇಷ್ಠಳು.


ಕುಡುಕನ ಕೈಯಲ್ಲಿ ಮುಳ್ಳು ಕೋಲಿನಂತೆ ಬುದ್ಧಿಹೀನರ ಬಾಯಲ್ಲಿ ಜ್ಞಾನೋಕ್ತಿಯು ಇರುವುದು.


ಇಲ್ಲಾ, ನನ್ನ ಯೌವನಕಾಲದಿಂದ ನಾನು ಅನಾಥರನ್ನು ತಂದೆಯಂತೆ ಬೆಳೆಸಿದೆನು. ಹುಟ್ಟಿದಂದಿನಿಂದ ವಿಧವೆಯರಿಗೆ ಮಾರ್ಗದರ್ಶಿಯಾಗಿದ್ದೆನು.


ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.


ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ, “ಲೆಬನೋನಿನಲ್ಲಿದ್ದ ಮುಳ್ಳುಗಿಡವು ಲೆಬನೋನಿನಲ್ಲಿರುವ ದೇವದಾರು ಮರಕ್ಕೆ, ‘ನನ್ನ ಮಗನಿಗೆ ಹೆಂಡತಿಯಾಗಿರಲು ನೀನು ನಿನ್ನ ಮಗಳನ್ನು ಕೊಡು,’ ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿಯಿತು.


ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನವರೆಗೂ ಹೇಳಿದನು. ಇದಲ್ಲದೆ ಮೃಗಗಳನ್ನು ಕುರಿತೂ, ಪಕ್ಷಿಗಳನ್ನು ಕುರಿತೂ, ಕ್ರಿಮಿಗಳನ್ನು ಕುರಿತೂ, ಮೀನುಗಳನ್ನು ಕುರಿತೂ ಪ್ರಸ್ತಾಪಿಸಬಲ್ಲವನಾಗಿದ್ದನು.


ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದದ್ದರಿಂದ ತಾವು ಇಕ್ಕಟ್ಟಿನಲ್ಲಿ ಇರುವುದನ್ನು ಕಂಡು, ಗವಿಗಳಲ್ಲಿಯೂ, ಮುಳ್ಳಿನ ಪೊದೆಗಳಲ್ಲಿಯೂ, ಗುಡ್ಡಗಳಲ್ಲಿಯೂ, ಕುಣಿಗಳಲ್ಲಿಯೂ ಬಾವಿಗಳಲ್ಲಿಯೂ ಅಡಗಿಕೊಂಡರು.


ಆಗ ಯೆಹೋವ ದೇವರ ದೂತನು ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ನೋಡಿದಾಗ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು ಆದಾಗ್ಯೂ ಪೊದೆಯು ಸುಟ್ಟು ಹೋಗಲಿಲ್ಲ.


ಒಂದು ವೇಳೆ ಕಾಲು, “ನಾನು ಕೈಯಲ್ಲದ ಕಾರಣ, ದೇಹಕ್ಕೆ ಸೇರಿಲ್ಲ,” ಎಂದು ಹೇಳಿದರೂ, ಅದು ದೇಹಕ್ಕೆ ಅಂಗವಾಗಿ ಸೇರದಿರುವುದೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು