Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:13 - ಕನ್ನಡ ಸಮಕಾಲಿಕ ಅನುವಾದ

13 ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗ ಶಲ್ಲೂಮನು ಅರಸನಾಗಿ, ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜುದೇಯದ ಅರಸ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗ ಶಲ್ಲೂಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಒಂದು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೂದದ ಅರಸನಾದ ಉಜ್ಜೀಯನ ಆಳಿಕೆಯ ಮೂವತ್ತೊಂಭತ್ತನೆಯ ವರುಷದಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೂದದ ರಾಜನಾದ ಉಜ್ಜೀಯನ ಮೂವತ್ತೊಂಭತ್ತನೆಯ ವರ್ಷದ ಆಳ್ವಿಕೆಯಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರೇಲಿನ ರಾಜನಾದನು. ಶಲ್ಲೂಮನು ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:13
12 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ, ಯೆಹೂದದ ಅರಸನಾಗಿರುವ ಅಮಚ್ಯನ ಮಗ ಅಜರ್ಯನು ಆಳಲು ಆರಂಭಿಸಿದನು.


ನರಹತ್ಯದ ಅಪರಾಧ ಭಾವನೆಯಿಂದ ಇರುವವನು, ಮರಣದೆಡೆಗೆ ಓಡುತ್ತಿರುವನು, ಅವನನ್ನು ಯಾರೂ ತಡೆಯದಿರಲಿ.


ದೇಶದ ದಂಗೆಯಿಂದ ಅನೇಕರು ನಾಯಕರಾಗುತ್ತಾರೆ. ಆದರೆ ಒಳನೋಟ ಹಾಗು ತಿಳುವಳಿಕೆಯ ನಾಯಕನಿಂದಲೇ ದೇಶವು ಸುಸ್ಥಿರವಾಗುವುದು.


ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.


ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡಿಸಿ ಬಿಡುವನು.


ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯನು ಸಮಾರ್ಯದಲ್ಲಿ ಇಸ್ರಾಯೇಲರ ಅರಸನಾದನು. ಅವನು ಆರು ತಿಂಗಳು ಆಳಿದನು.


ಅವನು ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟು ಸಮಾರಿಯ ಎಂಬ ಬೆಟ್ಟವನ್ನು ಕೊಂಡುಕೊಂಡನು. ಆ ಬೆಟ್ಟದ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಜಮೀನಿನ ಯಜಮಾನನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ಎಂದು ಹೆಸರಿಟ್ಟನು.


ಯೆಹೂದದ ಅರಸನಾದ ಆಸನ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಏಳು ದಿನ ಆಳಿದನು. ಆಗ ಇಸ್ರಾಯೇಲರು ಫಿಲಿಷ್ಟಿಯರಿಗೆ ಸಂಬಂಧಪಟ್ಟ ಗಿಬ್ಬೆತೋನಿನ ಬಳಿಯಲ್ಲಿ ದಂಡಿಳಿಸಿದ್ದರು.


ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.


ಅವರು ಅರಸರನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ. ಅವರು ನನ್ನ ಅನುಮತಿಯಿಲ್ಲದೆ ರಾಜಕುಮಾರರನ್ನು ಆಯ್ಕೆ ಮಾಡಿದ್ದಾರೆ. ಅವರು ತಾವು ನಾಶವಾಗುವಂತೆ ತಮ್ಮ ಬೆಳ್ಳಿಯಿಂದಲೂ, ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.


ಆಗ ಅವರು, “ನಮಗೆ ಅರಸನಿಲ್ಲ, ಏಕೆಂದರೆ ನಾವು ಯೆಹೋವ ದೇವರಲ್ಲಿ ಭಯಭಕ್ತಿ ಇಟ್ಟವರಲ್ಲ. ಅರಸನು ನಮಗಿದ್ದರೂ ಏನು ಮಾಡುವನು?” ಎಂದುಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು