2 ಅರಸುಗಳು 15:20 - ಕನ್ನಡ ಸಮಕಾಲಿಕ ಅನುವಾದ20 ಮೆನಹೇಮನು ಈ ಹಣವನ್ನು ಇಸ್ರಾಯೇಲಿನಿಂದ ವಸೂಲಿ ಮಾಡಿದನು. ಪ್ರತಿಯೊಬ್ಬ ಶ್ರೀಮಂತನು ಅಸ್ಸೀರಿಯದ ಅರಸನಿಗೆ ಕೊಡಬೇಕಾದ ಅರ್ಧ ಕಿಲೋಗ್ರಾಂ ಬೆಳ್ಳಿಯನ್ನು ನೀಡಬೇಕಾಗಿತ್ತು. ಆದ್ದರಿಂದ ಅಸ್ಸೀರಿಯದ ಅರಸನು ದೇಶದಲ್ಲಿ ನಿಲ್ಲದೆ ತನ್ನ ಸೈನ್ಯದೊಂದಿಗೆ ಹಿಂದಿರುಗಿ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮೆನಹೇಮನು ಅಶ್ಶೂರದ ಅರಸನಿಗೆ ಆ ಹಣವನ್ನು ಕೊಡುವುದಕ್ಕಾಗಿ ಇಸ್ರಾಯೇಲರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ರೂಪಾಯಿಗಳನ್ನು ವಸೂಲಿಮಾಡಿಕೊಂಡನು. ಆ ಹಣವು ಸಿಕ್ಕಿದ ನಂತರ ಅಶ್ಶೂರದ ಅರಸನು ಅಲ್ಲಿ ನಿಲ್ಲದೆ ಹಿಂತಿರುಗಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅಸ್ಸೀರಿಯದ ಅರಸನಿಗೆ ಆ ಹಣವನ್ನು ಕೊಡುವುದಕ್ಕಾಗಿ ಇಸ್ರಯೇಲರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡನು. ಆ ಹಣ ಸಿಕ್ಕಿದ ನಂತರ ಅಸ್ಸೀರಿಯದ ಅರಸನು ಅಲ್ಲಿ ನಿಲ್ಲದೆ ಹಿಂದಿರುಗಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಶ್ಶೂರದ ಅರಸನಿಗೆ ಆ ಹಣವನ್ನು ಕೊಡುವದಕ್ಕಾಗಿ ಇಸ್ರಾಯೇಲ್ಯರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ರೂಪಾಯಿಗಳನ್ನು ತೆಗೆದುಕೊಂಡನು. ಆ ಹಣವು ಸಿಕ್ಕಿದನಂತರ ಅಶ್ಶೂರದ ಅರಸನು ಅಲ್ಲಿ ನಿಲ್ಲದೆ ಹಿಂದಿರುಗಿ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಶ್ರೀಮಂತರು ಮತ್ತು ಅಧಿಕಾರವುಳ್ಳ ಜನರು ತೆರಿಗೆಯನ್ನು ನೀಡುವಂತೆ ಮಾಡಿ, ಮೆನಹೇಮನು ಈ ಹಣವನ್ನು ಸಂಗ್ರಹಿಸಿದನು. ಮೆನಹೇಮನು ಪ್ರತಿಯೊಬ್ಬ ಮನುಷ್ಯನಿಗೂ ಆರುನೂರು ಗ್ರಾಂ ಬೆಳ್ಳಿಯ ತೆರಿಗೆಯನ್ನು ವಿಧಿಸಿದನು. ನಂತರ ಮೆನಹೇಮನು ಅಶ್ಶೂರದ ರಾಜನಿಗೆ ಹಣವನ್ನು ಕೊಟ್ಟನು. ಆದ್ದರಿಂದ ಅಶ್ಶೂರದ ರಾಜನು ಬಿಟ್ಟುಹೋದನು; ಅವನು ಇಸ್ರೇಲಿನಲ್ಲೇ ನೆಲೆಸಲಿಲ್ಲ. ಅಧ್ಯಾಯವನ್ನು ನೋಡಿ |