Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:23 - ಕನ್ನಡ ಸಮಕಾಲಿಕ ಅನುವಾದ

23 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗ ಪೆಕಹ್ಯನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸನಾಗಿ, ಎರಡು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಜುದೇಯದ ಅರಸ ಅಜರ್ಯನ ಆಳ್ವಿಕೆಯ ಐವತ್ತೆಂಟನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬವನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಎರಡು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೂದದ ಅರಸನಾದ ಅಜರ್ಯನ ಆಳಿಕೆಯ ಐವತ್ತನೆಯ ವರುಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬವನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಎರಡು ವರುಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅಜರ್ಯನು ಯೆಹೂದದ ರಾಜನಾಗಿದ್ದ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯನು ಸಮಾರ್ಯದಲ್ಲಿ ಇಸ್ರೇಲಿನ ರಾಜನಾದನು. ಪೆಕಹ್ಯನು ಎರಡು ವರ್ಷ ಆಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:23
10 ತಿಳಿವುಗಳ ಹೋಲಿಕೆ  

ದುಷ್ಟರ ಜಯವು ಅಲ್ಪ ಕಾಲ, ಭಕ್ತಿಹೀನರ ಸಂತೋಷವು ಕ್ಷಣ ಮಾತ್ರ.


ಆಮೋನನು ಅರಸನಾದಾಗ ಇಪ್ಪತ್ತೆರಡು ವರ್ಷದವನಾಗಿದ್ದನು, ಅವನು ಯೆರೂಸಲೇಮಿನಲ್ಲಿ ಎರಡು ವರ್ಷ ಆಳಿದನು. ಅವನ ತಾಯಿಯು ಯೋತ್ಬಾ ಊರಿನ ಹಾರೂಚನ ಮಗಳಾದ ಮೆಷುಲ್ಲೇಮೆತಳು.


ಅಹಾಬನ ಮಗ ಅಹಜ್ಯನು ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೇಳನೆಯ ವರ್ಷದಲ್ಲಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲಾರಂಭಿಸಿ, ಎರಡು ವರ್ಷ ಇಸ್ರಾಯೇಲನ್ನು ಆಳಿದನು.


ಯೆಹೂದದ ಅರಸನಾದ ಆಸನ ಇಪ್ಪತ್ತಾರನೆಯ ವರುಷದಲ್ಲಿ ಬಾಷನ ಮಗ ಏಲನು ಇಸ್ರಾಯೇಲಿನ ಮೇಲೆ ತಿರ್ಚದಲ್ಲಿ ಎರಡು ವರ್ಷ ಆಳಿದನು.


ಯೆಹೂದದ ಅರಸನಾದ ಆಸನ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ನಾದಾಬನು ಅರಸನಾಗಿ ಎರಡು ವರುಷ ಇಸ್ರಾಯೇಲಿನ ಮೇಲೆ ಆಳಿದನು.


ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ, ಯೆಹೂದದ ಅರಸನಾಗಿರುವ ಅಮಚ್ಯನ ಮಗ ಅಜರ್ಯನು ಆಳಲು ಆರಂಭಿಸಿದನು.


ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯನು ಸಮಾರ್ಯದಲ್ಲಿ ಇಸ್ರಾಯೇಲರ ಅರಸನಾದನು. ಅವನು ಆರು ತಿಂಗಳು ಆಳಿದನು.


ಮೆನಹೇಮನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಮಗ ಪೆಕಹ್ಯನು ಅವನಿಗೆ ಬದಲಾಗಿ ಅರಸನಾದನು.


ಪೆಕಹ್ಯನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆಯಲಿಲ್ಲ.


ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರುಷದಲ್ಲಿ ರೆಮಲ್ಯನ ಮಗ ಪೆಕಹನು ಸಮಾರ್ಯದಲ್ಲಿ ಇಸ್ರಾಯೇಲರ ಅರಸನಾಗಿ, ಇಪ್ಪತ್ತು ವರ್ಷ ಆಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು