Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:25 - ಕನ್ನಡ ಸಮಕಾಲಿಕ ಅನುವಾದ

25 ಆದರೆ ಅವನ ಅಧಿಪತಿಯಾದಂಥ ರೆಮಲ್ಯನ ಮಗ ಪೆಕಹನು ಗಿಲ್ಯಾದಿನ ಐವತ್ತು ಮಂದಿಯನ್ನು ತನ್ನ ಸಂಗಡ ಕೂಡಿಸಿಕೊಂಡು ಪೆಕಹ್ಯನ ವಿರುದ್ಧ ಒಳಸಂಚುಮಾಡಿ, ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಪೆಕಹ್ಯನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದುಹಾಕಿದನು. ಅನಂತರ, ಪೆಕಹ್ಯನಿಗೆ ಬದಲಾಗಿ ಪೆಕಹನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇವನ ಸರದಾರನೂ, ರೆಮಲ್ಯನ ಮಗನೂ ಆಗಿದ್ದ ಪೆಕಹನು, ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇವನ ಸರದಾರನೂ ರೆಮಲ್ಯನ ಮಗನೂ ಆಗಿದ್ದ ಪೆಕಹ್ಯನು ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧ ಒಳಸಂಚುಮಾಡಿ ಸಮಾರಿಯದಲ್ಲಿರುವ ಅರಮನೆಯ ಗರ್ಭಗೃಹದಲ್ಲೇ ಇವನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದು ಇವನಿಗೆ ಬದಲಾಗಿ ತಾನೇ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇವನ ಸರದಾರನೂ ರೆಮಲ್ಯನ ಮಗನೂ ಆಗಿದ್ದ ಪೆಕಹನು ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರೋಧವಾಗಿ ಒಳಸಂಚುಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಪೆಕಹ್ಯನ ಸೇನೆಗೆ ರೆಮಲ್ಯನ ಮಗನಾದ ಪೆಕಹನು ಸೇನಾಧಿಪತಿಯಾಗಿದ್ದನು. ಅವನು ಪೆಕಹ್ಯನನ್ನು ಕೊಂದುಹಾಕಿದನು. ಅವನು ಸಮಾರ್ಯದಲ್ಲಿರುವ ರಾಜನ ಅರಮನೆಯಲ್ಲಿ ಪೆಕಹ್ಯನು ಅರ್ಗೋಬ್ ಮತ್ತು ಅರ್ಯೇ ಎಂಬವರನ್ನು ಸಹ ಕೊಂದುಹಾಕಿದನು. ಪೆಕಹ್ಯನನ್ನು ಪೆಕಹನು ಕೊಂದುಹಾಕಿದಾಗ ಅವನ ಸಂಗಡ ಗಿಲ್ಯಾದಿನ ಐವತ್ತು ಜನರಿದ್ದರು. ಪೆಕಹ್ಯನ ನಂತರ ಪೆಕಹನು ಹೊಸ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:25
10 ತಿಳಿವುಗಳ ಹೋಲಿಕೆ  

ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ರೆಮಲ್ಯನ ಮಗ ಪೆಕಹನು ಒಂದೇ ದಿವಸದೊಳಗೆ ಅವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.


ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರುಷದಲ್ಲಿ ರೆಮಲ್ಯನ ಮಗ ಪೆಕಹನು ಸಮಾರ್ಯದಲ್ಲಿ ಇಸ್ರಾಯೇಲರ ಅರಸನಾಗಿ, ಇಪ್ಪತ್ತು ವರ್ಷ ಆಳಿದನು.


ಯಾಬೇಷನ ಮಗ ಶಲ್ಲೂಮನು ಜೆಕರ್ಯನ ಮೇಲೆ ಒಳಸಂಚುಮಾಡಿ, ಜನರ ಮುಂದೆ ಅವನನ್ನು ಹೊಡೆದು, ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.


ಹೀಗೆಯೇ ನಿಂಷಿಯ ಮಗ ಯೆಹೋಷಾಫಾಟನ ಮಗ ಯೇಹುವು ಯೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೋರಾಮನೂ, ಸಮಸ್ತ ಇಸ್ರಾಯೇಲರೂ ಗಿಲ್ಯಾದಿನ ರಾಮೋತಿನಲ್ಲಿ ಕಾಯುತ್ತಿದ್ದರು.


ಅವನು ಅಲ್ಲಿ ಸೇರಿದಾಗ, ಅಲ್ಲಿ ಯೇಹುವು ಮತ್ತು ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು, “ಅಧಿಪತಿಯೇ, ನಿನಗೊಂದು ಮಾತು ಹೇಳುವುದಿದೆ,” ಎಂದನು. ಯೇಹುವು, “ನಮ್ಮಲ್ಲಿ ಯಾರಿಗೆ?” ಎಂದು ಕೇಳಿದನು. ಅವನು, “ಅಧಿಪತಿಯಾದ ನಿಮಗೇ ಹೇಳಬೇಕಾಗಿದೆ,” ಎಂದು ಉತ್ತರಕೊಟ್ಟನು.


ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿರುವಾಗ, ಅರ್ಧ ರಥಗಳಿಗೆ ಅಧಿಪತಿಯಾಗಿರುವ ಅವನ ಸೇವಕನಾದ ಜಿಮ್ರಿಯನು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದನು.


ಪಟ್ಟಣವು ವಶವಾದದ್ದನ್ನು ಕಂಡಾಗ, ಜಿಮ್ರಿಯು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ, ತನ್ನ ಅರಮನೆಯನ್ನು ಬೆಂಕಿಯಿಂದ ಸುಟ್ಟು ತಾನೂ ಸತ್ತನು.


ಪೆಕಹ್ಯನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆಯಲಿಲ್ಲ.


ಪೆಕಹ್ಯನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಯೋತಾಮನ ಮಗನೂ, ಉಜ್ಜೀಯನ ಮೊಮ್ಮಗನೂ, ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ, ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ, ಇಸ್ರಾಯೇಲರ ಅರಸನೂ ಆದ ಪೆಕಹ ಎಂಬುವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು