29 ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.
29 ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.
29 ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.
29 ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.
ಆದಕಾರಣ ಇಸ್ರಾಯೇಲಿನ ದೇವರು ಅಸ್ಸೀರಿಯದ ಅರಸನಾದ ಪೂಲನ ಆತ್ಮವನ್ನೂ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ, ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ, ಗಾದ್ಯರನ್ನೂ, ಮನಸ್ಸೆಯ ಅರ್ಧ ಗೋತ್ರದವರನ್ನೂ ಹಲಹ, ಹಾಬೋರ್, ಹಾರ, ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ತೆಗೆದುಕೊಂಡು ಹೋದರು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.
ಆಹಾಜನು ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನಿಗೆ, “ನಾನು ನಿನ್ನ ಸೇವಕನೂ, ನಿನ್ನ ಮಗನೂ ಆಗಿದ್ದೇನೆ. ನನಗೆ ವಿರೋಧವಾಗಿ ಎದ್ದ ಅರಾಮಿನ ಅರಸನ ಕೈಗೂ, ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ, ರಕ್ಷಿಸುವುದಕ್ಕೆ ಬರಬೇಕು,” ಎಂದು ಹೇಳಿ ಸೇವಕರನ್ನು ಕಳುಹಿಸಿದನು.
ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಇಯ್ಯೋನ್, ದಾನ್, ಆಬೇಲ್ ಬೇತ್ ಮಾಕಾ ಹಾಗೂ ಸಮಸ್ತ ಕಿನ್ನೆರೆತ್, ಸಮಸ್ತ ನಫ್ತಾಲಿ ಪ್ರಾಂತ ಇವುಗಳನ್ನು ಹಾಳುಮಾಡಿದರು.
ಆದ್ದರಿಂದ ಯೆಹೋವ ದೇವರು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟರು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತ್ ಹಗ್ಗೊಯಿಮ್‌ನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.
ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ, ಸಮೀಪ ರಾಜ್ಯಗಳ ಅರಸರಿಗೆ ಒಂದು ಸಂದೇಶವನ್ನು ಕಳುಹಿಸಿದನು: ಎಂದರೆ ಮಾದೋನಿನ ಅರಸನಾದ ಯೋಬಾಬನಿಗೂ ಶಿಮ್ರೋನಿನ ಅರಸನಿಗೂ ಅಕ್ಷಾಫಿನ ಅರಸನಿಗೂ
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅಮ್ಮೋನಿನ ಮಕ್ಕಳು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ತಮ್ಮ ಮೇರೆಯನ್ನು ವಿಸ್ತಾರ ಮಾಡುವುದಕ್ಕಾಗಿ, ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿಬಿಟ್ಟಿದ್ದಾರೆ.
ಯೆಹೋವ ದೇವರು ಹೀಗೆ ಹೇಳುತ್ತಾರೆ: ದಮಸ್ಕದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ, ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.
ಅದೇ ದಿನದಲ್ಲಿ ಯೆಹೋವ ದೇವರು ಯೂಫ್ರೇಟೀಸ್ ನದಿಯ ಆಚೆಗಿರುವ ಅಸ್ಸೀರಿಯದ ರಾಜನೆಂಬುವನಿಂದ ಬಾಡಿಗೆ ಕ್ಷೌರದ ಕತ್ತಿಯಿಂದ ಯೆಹೂದದ ತಲೆ ಮತ್ತು ಕಾಲಿನ ಕೂದಲನ್ನು ಬೋಳಿಸುವರು ಹಾಗೂ ಗಡ್ಡವನ್ನು ತೆಗೆದುಬಿಡುವರು.
ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ. ನಿಮ್ಮ ಹೊಲಗಳನ್ನು ಪರರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಇತರ ಜನರಿಂದ ಕೆಡವಿಬಿದ್ದು ಹಾಳಾಗಿದೆ.
ಯೆಹೋವ ದೇವರು ಪ್ರವಾದಿಗಳಾದ ತಮ್ಮ ಸೇವಕರ ಮುಖಾಂತರ ಎಚ್ಚರಿಸಿದ ಹಾಗೆ, ಇಸ್ರಾಯೇಲನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಹೀಗೆ ಇಸ್ರಾಯೇಲರು ಬಹು ಕಾಲದವರೆಗೂ ತಮ್ಮ ದೇಶದಿಂದ ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಇರಬೇಕಾಯಿತು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.
ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು.
ಈಗಲೇ ಏನು ಆಗುವುದು? ನೀರಿನಲ್ಲಿರುವ ಆಪು ಹುಲ್ಲು ಅಲ್ಲಾಡುವ ಹಾಗೆ ಯೆಹೋವ ದೇವರು ಇಸ್ರಾಯೇಲನ್ನು ಹೊಡೆಯುವರು. ಇಸ್ರಾಯೇಲರು ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಲು, ತಮ್ಮ ವಿಗ್ರಹಾರಾಧನೆಗೋಸ್ಕರ ಅಶೇರ ಸ್ತಂಭಗಳನ್ನು ನಿಲ್ಲಿಸಿಕೊಂಡದ್ದರಿಂದ, ಯೆಹೋವ ದೇವರು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವರು.
ಅಸ್ಸೀರಿಯಾ ದೇಶದ ಅರಸನಾದ ಪೂಲನು ಇಸ್ರಾಯೇಲ್ ದೇಶದ ಮೇಲೆ ಯುದ್ಧಕ್ಕೆ ಬಂದನು. ಆಗ ಮೆನಹೇಮನು ಅವನ ಬೆಂಬಲವನ್ನು ಪಡೆಯಲು ಮತ್ತು ರಾಜ್ಯವನ್ನು ದೃಢಪಡಿಸಲು ಪೂಲನಿಗೆ ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.
ಅರಸನಾದ ಆಹಾಜನು ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ, ದಮಸ್ಕದಲ್ಲಿ ಒಂದು ಬಲಿಪೀಠವನ್ನು ಕಂಡನು. ಅರಸನಾದ ಆಹಾಜನು ಆ ಬಲಿಪೀಠದ ರೂಪವನ್ನೂ, ಅದರ ಎಲ್ಲಾ ಕೈಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.
ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಸಂತತಿಯನ್ನೆಲ್ಲಾ ಅಲಕ್ಷ್ಯಮಾಡಿ, ಅವರನ್ನು ಕುಂದಿಸಿ, ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಡುವವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು.
“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.
ಮೆನಹೇಮನು ಈ ಹಣವನ್ನು ಇಸ್ರಾಯೇಲಿನಿಂದ ವಸೂಲಿ ಮಾಡಿದನು. ಪ್ರತಿಯೊಬ್ಬ ಶ್ರೀಮಂತನು ಅಸ್ಸೀರಿಯದ ಅರಸನಿಗೆ ಕೊಡಬೇಕಾದ ಅರ್ಧ ಕಿಲೋಗ್ರಾಂ ಬೆಳ್ಳಿಯನ್ನು ನೀಡಬೇಕಾಗಿತ್ತು. ಆದ್ದರಿಂದ ಅಸ್ಸೀರಿಯದ ಅರಸನು ದೇಶದಲ್ಲಿ ನಿಲ್ಲದೆ ತನ್ನ ಸೈನ್ಯದೊಂದಿಗೆ ಹಿಂದಿರುಗಿ ಹೋದನು.
ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುವೆನು. ಲೆಬೊ ಹಮಾತಿನ ಪ್ರದೇಶದಿಂದ ಅರಾಬಾ ತಗ್ಗಿನ ನದಿಯವರೆಗೂ ನಿಮ್ಮನ್ನು ಹಿಂಸಿಸುವರು.