Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:4 - ಕನ್ನಡ ಸಮಕಾಲಿಕ ಅನುವಾದ

4 ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ, ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ತೆಗೆಯಲ್ಪಡಲಿಲ್ಲವಾದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ಹಾಗೆಯೇ ಉಳಿದಿದ್ದವು. ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೆ ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ತೆಗೆಯಲ್ಪಡಲಿಲ್ಲವಾದದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಅವನು ಉನ್ನತಸ್ಥಳಗಳನ್ನು ನಾಶಗೊಳಿಸಲಿಲ್ಲ. ಈ ಪೂಜಾಸ್ಥಳಗಳಲ್ಲಿ ಜನರು ಇನ್ನೂ ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪವನ್ನು ಸುಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:4
12 ತಿಳಿವುಗಳ ಹೋಲಿಕೆ  

ಅವನು ಇನ್ನೂ ಬಾಲಕನಾಗಿರುವಾಗ, ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪೂರ್ವಜನಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ ತೆಗೆದುಹಾಕಿ, ಯೆಹೂದ ಮತ್ತು ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.


ಈ ಹಿಜ್ಕೀಯನು ಅವನ ಪೂಜಾಸ್ಥಳಗಳನ್ನೂ, ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ, ‘ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು, ಅದರ ಮೇಲೆ ಧೂಪವನ್ನರ್ಪಿಸಬೇಕು,’ ಎಂದು ಹೇಳಿದ್ದಾನಲ್ಲವೇ?


ಅವನ ಹೃದಯವು ಯೆಹೋವ ದೇವರ ಮಾರ್ಗಗಳಲ್ಲಿ ಸಮರ್ಪಿತವಾಗಿತ್ತು. ಇದಲ್ಲದೆ ಅವನು ಯೆಹೂದದಲ್ಲಿದ್ದ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದುಹಾಕಿದನು.


ಹಿಜ್ಕೀಯನು ಉನ್ನತ ಪೂಜಾಸ್ಥಳಗಳನ್ನು ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅಶೇರ ಸ್ತಂಭಗಳನ್ನು ಕಡಿದುಹಾಕಿದನು. ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಮುರಿದುಬಿಟ್ಟನು. ಏಕೆಂದರೆ ಆ ದಿವಸಗಳವರೆಗೂ ಇಸ್ರಾಯೇಲರು ಅದಕ್ಕೆ ಧೂಪ ಸುಡುತ್ತಿದ್ದರು. ಅದನ್ನು ನೆಹುಷ್ಟಾನ್ ಎಂದು ಕರೆಯುತ್ತಿದ್ದರು.


ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು. ಯೋತಾಮನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿದನು.


ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.


ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.


ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು. ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.


ಅವನು ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.


ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.


ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.


ಯೋವಾಷನು ಯಾಜಕರಿಗೆ, “ಯೆಹೋವ ದೇವರ ಆಲಯಕ್ಕೆ ಪವಿತ್ರ ಅರ್ಪಣೆಗಳಾಗಿ ತರಲಾದ ಜನಗಣತಿಯಲ್ಲಿ ಸಂಗ್ರಹಿಸಿದ ಹಣ, ವೈಯಕ್ತಿಕ ಪ್ರತಿಜ್ಞೆಗಳಿಂದ ಪಡೆದ ಹಣ ಮತ್ತು ದೇವಾಲಯಕ್ಕೆ ಸ್ವಯಂಪ್ರೇರಣೆಯಿಂದ ತಂದ ಹಣವನ್ನು ಸಂಗ್ರಹಿಸಿರಿ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು