Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯದಲ್ಲಿ ದಹನಬಲಿಯನ್ನೂ, ಸಾಯಂಕಾಲದ ಧಾನ್ಯ ಸಮರ್ಪಣೆಯನ್ನೂ, ಪಾನದ್ರವ್ಯವನ್ನೂ ದೊಡ್ಡ ಹೊಸ ಬಲಿಪೀಠದ ಮೇಲೆ ಅರ್ಪಿಸಿ, ದಹನಬಲಿಯ ರಕ್ತವೆಲ್ಲವನ್ನೂ ಚಿಮುಕಿಸಿದನು. ಆದರೆ ಕಂಚಿನ ಬಲಿಪೀಠವನ್ನು ನಾನು ಮಾರ್ಗದರ್ಶನಕ್ಕಾಗಿ ಉಪಯೋಗಿಸುವೆನು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯಾಜಕ ಊರೀಯನಿಗೆ, “ಪ್ರಾತಃಕಾಲದ ದಹನಬಲಿಯನ್ನು, ಸಾಯಂಕಾಲದ ನೈವೇದ್ಯವನ್ನು ಅರಸನು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಇವುಗಳನ್ನು ಮತ್ತು ಜನರು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಈ ಮಹಾ ಪೂಜಾಪೀಠದ ಮೇಲೆ ಸಮರ್ಪಿಸಬೇಕು; ಮತ್ತು ದಹನಬಲಿ ಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವುದಕ್ಕಾಗಿ ತಾಮ್ರಪೀಠವನ್ನು ಉಪಯೋಗಿಸುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾಜಕನಾದ ಊರೀಯನಿಗೆ - ಪ್ರಾತಃಕಾಲದ ಸರ್ವಾಂಗಹೋಮವನ್ನೂ ಸಾಯಂಕಾಲದ ನೈವೇದ್ಯವನ್ನೂ ಅರಸನು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಇವುಗಳನ್ನೂ ಜನರು ತರುವ ಸರ್ವಾಂಗಹೋಮದ್ರವ್ಯ ಧಾನ್ಯನೈವೇದ್ಯ ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು; ಮತ್ತು ಸರ್ವಾಂಗ ಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿವಿುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವದಕ್ಕಾಗಿ ತಾಮ್ರವೇದಿಯನ್ನು ಉಪಯೋಗಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅಹಾಜನು ಯಾಜಕನಾದ ಊರೀಯನಿಗೆ, “ಈ ದೇಶದ ಜನರೆಲ್ಲರೂ ಪ್ರಾತಃಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ ಮತ್ತು ಪಾನದ್ರವ್ಯಗಳನ್ನೂ ಸಮರ್ಪಿಸಲು ಮಹಾವೇದಿಕೆಯನ್ನು ಬಳಸಬೇಕು; ಸರ್ವಾಂಗಹೋಮಕ್ಕಾಗಿ ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸುವ ಪಶುಗಳ ರಕ್ತವನ್ನು ಈ ಮಹಾವೇದಿಕೆಯ ಮೇಲೆ ಚಿಮುಕಿಸಿ. ಆದರೆ ನಾನು ದೇವರಿಂದ ದೈವೋತ್ತರಗಳನ್ನು ಕೇಳಲು ತಾಮ್ರವೇದಿಕೆಯನ್ನು ಉಪಯೋಗಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:15
25 ತಿಳಿವುಗಳ ಹೋಲಿಕೆ  

ಹಿಜ್ಕೀಯನು ಉನ್ನತ ಪೂಜಾಸ್ಥಳಗಳನ್ನು ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅಶೇರ ಸ್ತಂಭಗಳನ್ನು ಕಡಿದುಹಾಕಿದನು. ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಮುರಿದುಬಿಟ್ಟನು. ಏಕೆಂದರೆ ಆ ದಿವಸಗಳವರೆಗೂ ಇಸ್ರಾಯೇಲರು ಅದಕ್ಕೆ ಧೂಪ ಸುಡುತ್ತಿದ್ದರು. ಅದನ್ನು ನೆಹುಷ್ಟಾನ್ ಎಂದು ಕರೆಯುತ್ತಿದ್ದರು.


ಆ ದಿನ ಅರಸನು ಯೆಹೋವ ದೇವರ ಆಲಯದ ಮುಂದಿರುವ ಮಧ್ಯದ ಅಂಗಳವನ್ನು ಪ್ರತಿಷ್ಠೆ ಮಾಡಿದನು. ಯೆಹೋವ ದೇವರ ಮುಂದಿರುವ ಕಂಚಿನ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ದಹನಬಲಿಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.


ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ.


“ಪ್ರತಿದಿನದ ಯಜ್ಞವು ಸಕಾಲಕ್ಕೆ ನಿಂತುಹೋಗುವುದು. ಆ ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ, 1,290 ದಿನಗಳು ಕಳೆಯಬೇಕು.


ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲಸುಮಾಡಿ, ನಿತ್ಯ ಯಜ್ಞವನ್ನು ನಿಲ್ಲಿಸುವುದು. ಹಾಳುಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವುದು.


ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಅರ್ಧದಲ್ಲಿ ಯಜ್ಞವನ್ನೂ, ಅರ್ಪಣೆಯನ್ನೂ ನಿಲ್ಲಿಸುವನು. ದೇವಾಲಯದಲ್ಲಿ ಹಾಳುಮಾಡುವ ಅಸಹ್ಯ ವಸ್ತುವನ್ನು ಅವನು ಸ್ಥಾಪಿಸುವನು. ಇದು ಅವನ ಮೇಲೆ ನಿರ್ಣಯವಾದದ್ದು, ಸುರಿಯುವ ತನಕ ಇರುವುದು,” ಎಂದು ಹೇಳಿದನು.


ನಾನು ಇನ್ನೂ ಪ್ರಾರ್ಥಿಸುತ್ತಿದ್ದಾಗ, ನಾನು ಮೊದಲ ದರ್ಶನದಲ್ಲಿ ಕಂಡಿದ್ದ ಸುಮಾರು ಸಾಯಂಕಾಲದ ನೈವೇದ್ಯವನ್ನು ಅರ್ಪಿಸುವ ಹೊತ್ತಿನಲ್ಲಿ, ನನ್ನ ಬಳಿ ಗಬ್ರಿಯೇಲನು ಬೇಗನೆ ಹಾರಿ ಬಂದು,


ಯಾಕೋಬಿನ ಮನೆತನದವರು ಪೂರ್ವದೇಶಗಳ ಮಂತ್ರತಂತ್ರಗಳಲ್ಲಿ ಮಗ್ನರಾಗಿ, ಫಿಲಿಷ್ಟಿಯರಂತೆ ಕಣಿ ಹೇಳುವವರಾಗಿಯೂ, ಬೇರೆ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆಯುಳ್ಳವರಾಗಿಯೂ ಇರುವುದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀರಿ.


ಇದಲ್ಲದೆ ಮನಸ್ಸೆಯು ಬೆನ್ ಹಿನ್ನೋಮ್ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನೂ ಮಾಟವನ್ನೂ ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.


ಇದಲ್ಲದೆ ದಹನಬಲಿಗಳೂ, ಸಮಾಧಾನದ ಬಲಿಗಳ ಕೊಬ್ಬೂ, ದಹನಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳವಾಗಿದ್ದವು. ಹೀಗೆ ಯೆಹೋವ ದೇವರ ಆಲಯದ ಸೇವೆಯು ಸಿದ್ಧವಾಯಿತು.


ಸಭೆಯು ತಂದ ದಹನಬಲಿಗಳ ಲೆಕ್ಕವೇನೆಂದರೆ: ಎಪ್ಪತ್ತು ಹೋರಿಗಳು, ನೂರು ಟಗರುಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಯೆಹೋವ ದೇವರಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.


ಯೆಹೋವ ದೇವರ ಸಮ್ಮುಖದಲ್ಲಿ ಕಂಚಿನ ಬಲಿಪೀಠವನ್ನು ದೇವಾಲಯದ ಮುಂಭಾಗದಿಂದ ಅಂದರೆ ಯೆಹೋವ ದೇವರ ಆಲಯಕ್ಕೂ, ಬಲಿಪೀಠಕ್ಕೂ ಮಧ್ಯದಿಂದಲೂ ತಂದು, ಅದನ್ನು ಹೊಸ ಬಲಿಪೀಠಕ್ಕೆ ಉತ್ತರ ಕಡೆಯಲ್ಲಿ ಇಟ್ಟನು.


ಉದಯದಲ್ಲಿ ಕಾಣಿಕೆಗಳನ್ನು ಅರ್ಪಿಸುತ್ತಿರುವಾಗ, ನೀರು ಎದೋಮಿನ ಮಾರ್ಗವಾಗಿ ಬಂದದ್ದರಿಂದ ದೇಶವು ನೀರಿನಿಂದ ತುಂಬಿಕೊಂಡಿತು.


ಗಿಬ್ಯೋನಿನ ಅತಿಮುಖ್ಯವಾದ ಉನ್ನತ ಸ್ಥಳಕ್ಕೆ ಅರಸನಾದ ಸೊಲೊಮೋನನು ಬಲಿಗಳನ್ನರ್ಪಿಸಲು ಹೋಗಿ, ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.


ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ,’ ಎಂದು ಅವರಿಗೆ ಹೇಳು,” ಎಂದನು.


ಅರಸನಾದ ಆಹಾಜನು ಆಜ್ಞಾಪಿಸಿದ ಪ್ರಕಾರವೇ ಯಾಜಕನಾದ ಊರೀಯನು ಮಾಡಿದನು.


ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್. ಅದರ ಎತ್ತರ ಸುಮಾರು ಎರಡು ಮೀಟರ್. ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು