Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:18 - ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರ ಆಲಯದ ಪ್ರಾಕಾರದ ಒಳಗೆ ಸಬ್ಬತ್ ದಿನದ ಆರಾಧನೆಗಾಗಿ, ರಾಜರಿಗಾಗಿ ಕಟ್ಟಲಾಗಿದ್ದ ಮಂಟಪವನ್ನು ಹಾಗು ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದನು, ಇವುಗಳನ್ನೆಲ್ಲ ಅಸ್ಸೀರಿಯದ ಅರಸನ ನಿಮಿತ್ತವಾಗಿ ಆಹಾಜನೇ ಬದಲಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲ್ಪಟ್ಟಿದ್ದ ಮಂಟಪವನ್ನು ಹಾಗೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಅಶ್ಶೂರದ ಅರಸನಾದ ಈ ಆಹಾಜನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲಾಗಿದ್ದ ಮಂಟಪವನ್ನು ಹಾಗು ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಈ ಆಹಾಜನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್‍ದಿನದ ಆರಾಧನೆಗಾಗಿ ರಾಜರಿಗೆ ಕಟ್ಟಲ್ಪಟ್ಟಿದ್ದ ಮಂಟಪವನ್ನೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಲನ್ನೂ ಬದಲಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಹಾಜನು ಸಬ್ಬತ್ ದಿನಕ್ಕಾಗಿ ಕಟ್ಟಿದ ಮಂಟಪವನ್ನು ಬದಲಾಯಿಸಿದನು. ಕೆಲಸಗಾರರು ಆಲಯದ ಒಳಗೆ ಇದನ್ನು ನಿರ್ಮಿಸಿದ್ದರು. ಅಹಾಜನು ರಾಜನಿಗಾಗಿ ಇದ್ದ ಹೊರಭಾಗದ ಬಾಗಿಲನ್ನು ಬದಲಾಯಿಸಿದನು. ಅಹಾಜನು ದೇವಾಲಯದಿಂದ ಇವುಗಳನ್ನೆಲ್ಲಾ ಅಶ್ಶೂರದ ರಾಜನ ದೆಸೆಯಿಂದ ಬದಲಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:18
7 ತಿಳಿವುಗಳ ಹೋಲಿಕೆ  

ರಾಜಕುಮಾರನು ಆ ಬಾಗಿಲಿನ ದ್ವಾರಮಂಟಪ ಮಾರ್ಗವಾಗಿ ಹೊರಗಿನಿಂದ ಪ್ರವೇಶಿಸಿ ಬಾಗಿಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು. ಆಗ ಯಾಜಕರು ಅವನ ದಹನಬಲಿಯನ್ನು ಅವನ ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು. ಬಾಗಿಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಿಲು ಸಂಜೆಯವರೆಗೂ ಮುಚ್ಚದಿರಬೇಕು.


ಅವರಿಗೆ, “ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ಅರಮನೆಯ ಕಾವಲುಗಾರರಾಗಿರಬೇಕು.


ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.


ಅರಸನಾದ ಆಹಾಜನು ಪೀಠದ ಅಂಚುಗಳನ್ನು ಕೊಯ್ದು, ಕಂಚಿನ ಕಡಲೆಂಬ ದೊಡ್ಡ ಪಾತ್ರೆಯನ್ನು ಅದರ ಮೇಲಿನಿಂದ ಇಳಿಸಿ, ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು.


ಆಹಾಜನ ಆಳ್ವಿಕೆಯಲ್ಲಿಯ ಇತರ ಕ್ರಿಯೆಗಳು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಇವರು ಈವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲಲ್ಲಿ ಕಾದುಕೊಂಡಿದ್ದರು. ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.


ಇದು ಪ್ರಭುವಿಗಾಗಿ ಇದೆ; ಪ್ರಭುವು ಅವರೊಳಗೆ ಕುಳಿತುಕೊಂಡು, ಯೆಹೋವ ದೇವರ ಮುಂದೆ ರೊಟ್ಟಿಯನ್ನು ತಿನ್ನಬೇಕು. ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು