Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:2 - ಕನ್ನಡ ಸಮಕಾಲಿಕ ಅನುವಾದ

2 ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಆದರೆ ಅವನು ತನ್ನ ತಂದೆಯಾದ ದಾವೀದನ ಹಾಗೆ ನಡೆಯದೆ, ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಲಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲರ ಮಾರ್ಗವನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪಟ್ಟಕ್ಕೆ ಬಂದಾಗ ಇವನಿಗೆ ಇಪ್ಪತ್ತು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಜ ದಾವೀದನ ಮಾರ್ಗವನ್ನು ಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಹದಿನಾರು ವರುಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಹಾಜನು ರಾಜನಾದಾಗ ಅವನಿಗೆ ಇಪ್ಪತ್ತು ವರ್ಷ ವಯಸ್ಸಾಗಿತ್ತು. ಅಹಾಜನು ಜೆರುಸಲೇಮನ್ನು ಹದಿನಾರು ವರ್ಷ ಆಳಿದನು. ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿದ್ದ ಕಾರ್ಯಗಳನ್ನು ಅಹಾಜನು ಮಾಡಲಿಲ್ಲ. ಅವನ ಪೂರ್ವಿಕನಾದ ದಾವೀದನು ದೇವರಿಗೆ ವಿಧೇಯನಾಗಿದ್ದನು; ಆದರೆ ಅಹಾಜನು ವಿಧೇಯನಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:2
14 ತಿಳಿವುಗಳ ಹೋಲಿಕೆ  

ಅವನು ತನ್ನ ತಂದೆ ದಾವೀದನು ಮಾಡಿದ ಪ್ರಕಾರ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.


ಯೆಹೋಷಾಫಾಟನು ಬಾಳ್ ದೇವರುಗಳನ್ನು ಅನುಸರಿಸದೆ, ತನ್ನ ತಂದೆ ದಾವೀದನ ಮೊದಲಿನ ಮಾರ್ಗದಲ್ಲಿ ನಡೆದದ್ದರಿಂದ, ಯೆಹೋವ ದೇವರು ಅವನ ಸಂಗಡ ಇದ್ದರು.


ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.


ಹಿಜ್ಕೀಯನು ತನ್ನ ತಂದೆ ದಾವೀದನು ಮಾಡಿದ ಪ್ರಕಾರ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.


ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.


ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.


ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ. ತನ್ನ ತಂದೆ ಯೋವಾಷನು ಮಾಡಿದ ಹಾಗೆ ಸಮಸ್ತವನ್ನು ಮಾಡಿದನು.


ಅಬಿಯಾಮನು, ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ, ಅವನ ಹೃದಯವು ತನ್ನ ದೇವರಾದ ಯೆಹೋವ ದೇವರ ಮುಂದೆ ಪೂರ್ಣವಾಗಿರದೆ, ತನಗೆ ಮುಂಚೆ ಇದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.


“ನೀನು ನಿನ್ನ ತಂದೆಯಾದ ದಾವೀದನಂತೆ ಸಂಪೂರ್ಣ ಹೃದಯದಿಂದಲೂ, ಯಥಾರ್ಥತೆಯಿಂದಲೂ ನಾನು ನಿನಗೆ ಆಜ್ಞಾಪಿಸಿದ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಿಷ್ಠೆಯಿಂದ ಕೈಗೊಂಡು ನಡೆದರೆ,


ನೀನು, ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು, ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಕೈಗೊಂಡರೆ, ನಿನ್ನ ದಿವಸಗಳನ್ನು ಹೆಚ್ಚಿಸುವೆನು,” ಎಂದರು.


ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದದ ಅರಸನಾಗಿದ್ದ ಆಹಾಜನ ಮಗ ಹಿಜ್ಕೀಯನು ಆಳಲು ಆರಂಭಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು