2 ಅರಸುಗಳು 16:4 - ಕನ್ನಡ ಸಮಕಾಲಿಕ ಅನುವಾದ4 ಇದಲ್ಲದೆ ಅವನು ಪೂಜಾಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಎಲ್ಲಾ ಹಸಿರಾದ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಪೂಜಾಸ್ಥಳಗಳಲ್ಲಿಯೂ, ದಿನ್ನೆಗಳ ಮೇಲೆಯೂ, ಎಲ್ಲಾ ಹಸಿರು ಮರಗಳ ಕೆಳಗಡೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪೂಜಾಸ್ಥಳಗಳಲ್ಲೂ ದಿಣ್ಣೆಗಳ ಮೇಲೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಧೂಪಗಳನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಪೂಜಾಸ್ಥಳಗಳಲ್ಲಿಯೂ ದಿನ್ನೆಗಳ ಮೇಲೆಯೂ ಎಲ್ಲಾ ಹಸುರು ಮರಗಳ ಕೆಳಗೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅಹಾಜನು ಉನ್ನತಸ್ಥಳಗಳಲ್ಲಿ ಮತ್ತು ಬೆಟ್ಟಗಳ ಮೇಲೆ ಮತ್ತು ಹಸಿರು ಮರಗಳ ಕೆಳಗೆ ಯಜ್ಞಗಳನ್ನು ಅರ್ಪಿಸಿದನು ಮತ್ತು ಧೂಪವನ್ನು ಸುಟ್ಟನು. ಅಧ್ಯಾಯವನ್ನು ನೋಡಿ |
ಅವರು ನನಗೆ, “ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ನನ್ನ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲರ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಎಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರದಿಂದಲೂ ಅವರ ಅರಸರ ಮರಣದ ಸಮಯದಲ್ಲಿ ಅವರ ಅಂತ್ಯಕ್ರಿಯೆಯ ವಿಧಿಗಳ ಅರ್ಪಣೆಯಿಂದ ಅಪವಿತ್ರಗೊಳಿಸುವುದಿಲ್ಲ.