Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:7 - ಕನ್ನಡ ಸಮಕಾಲಿಕ ಅನುವಾದ

7 ಆಹಾಜನು ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನಿಗೆ, “ನಾನು ನಿನ್ನ ಸೇವಕನೂ, ನಿನ್ನ ಮಗನೂ ಆಗಿದ್ದೇನೆ. ನನಗೆ ವಿರೋಧವಾಗಿ ಎದ್ದ ಅರಾಮಿನ ಅರಸನ ಕೈಗೂ, ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ, ರಕ್ಷಿಸುವುದಕ್ಕೆ ಬರಬೇಕು,” ಎಂದು ಹೇಳಿ ಸೇವಕರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಹಾಜನು ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಹಾಜನು ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪೆಲೆಸರನ ಬಳಿಗೆ ದೂತರನ್ನು ಕಳುಹಿಸಿ, “ನಾನು ನಿಮ್ಮ ಸೇವಕ ಹಾಗು ಕುವರ; ನೀವು ಬಂದು ನನ್ನನ್ನು, ನನಗೆ ವಿರುದ್ಧ ದಂಡೆತ್ತಿ ಬಂದಿರುವ ಸಿರಿಯಾದವರ ಮತ್ತು ಇಸ್ರಯೇಲರ ಅರಸುಗಳ ಕೈಗೆ ಸಿಕ್ಕದಂತೆ, ಕಾಪಾಡಿ,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಹಾಜನು ಅಶ್ಶೂರ್‍ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ನಿನ್ನ ದಾಸನೂ ಮಗನೂ ಆಗಿದ್ದೇನೆ; ನೀನು ಬಂದು ನನ್ನನ್ನು ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲ್ಯರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಆ ಸಂದೇಶವೇನೆಂದರೆ: “ನಾನು ನಿನ್ನ ಸೇವಕ. ನಾನು ನಿನಗೆ ಮಗನಂತಿದ್ದೇನೆ. ನೀನು ಬಂದು, ಅರಾಮ್ಯರ ರಾಜನಿಂದ ಮತ್ತು ಇಸ್ರೇಲಿನ ರಾಜನಿಂದ ನನ್ನನ್ನು ರಕ್ಷಿಸು. ಅವರು ನನ್ನ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:7
17 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.


ಅಸ್ಸೀರಿಯ ನಮ್ಮನ್ನು ರಕ್ಷಿಸುವುದಿಲ್ಲ. ನಾವು ಕುದುರೆಗಳ ಮೇಲೆ ಸವಾರಿ ಮಾಡುವುದಿಲ್ಲ. ನಮ್ಮ ಕೈಗಳಿಂದ ಉಂಟು ಮಾಡಿದವುಗಳಿಗೆ, ‘ನೀವು ನಮ್ಮ ದೇವರುಗಳೇ,’ ಎಂದು ನಾವು ಇನ್ನು ಮುಂದೆ ಹೇಳುವುದೇ ಇಲ್ಲ. ಏಕೆಂದರೆ ನಿಮ್ಮಲ್ಲಿ ದಿಕ್ಕಿಲ್ಲದವರಿಗೆ ಅನುಕಂಪ ದೊರೆಯುತ್ತದೆ.”


ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು. ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾನವನ ಸಾಮರ್ಥ್ಯಗಳನ್ನು ತನ್ನ ಆಧಾರವಾಗಿ ಮಾಡಿಕೊಂಡ ವ್ಯಕ್ತಿ ಶಾಪಗ್ರಸ್ತ, ಅವನು ಮನುಷ್ಯನ ಶಕ್ತಿಯ ಮೇಲೆ ಭರವಸೆ ಇಡುವನು. ಯೆಹೋವ ದೇವರ ಕಡೆಯಿಂದ ಯಾವನ ಹೃದಯವು ತೊಲಗುವುದೋ, ಅವನು ಶಾಪಗ್ರಸ್ತನು.


ಆಗ ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು, ಅವನಿಗೆ ನೆರವಾಗುವುದಕ್ಕೆ ಬದಲಾಗಿ ಬಾಧೆಪಡಿಸಿದನು.


ಅದೇ ಕಾಲದಲ್ಲಿ ಅರಸನಾದ ಆಹಾಜನು ಅಸ್ಸೀರಿಯದ ಅರಸರ ಬಳಿಗೆ ಕಳುಹಿಸಿ ಸಹಾಯ ಬೇಡಿಕೊಂಡನು.


ಆದಕಾರಣ ಇಸ್ರಾಯೇಲಿನ ದೇವರು ಅಸ್ಸೀರಿಯದ ಅರಸನಾದ ಪೂಲನ ಆತ್ಮವನ್ನೂ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ, ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ, ಗಾದ್ಯರನ್ನೂ, ಮನಸ್ಸೆಯ ಅರ್ಧ ಗೋತ್ರದವರನ್ನೂ ಹಲಹ, ಹಾಬೋರ್, ಹಾರ, ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ತೆಗೆದುಕೊಂಡು ಹೋದರು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ಇಸ್ರಾಯೇಲಿನ ಅರಸನು ಉತ್ತರವಾಗಿ, “ಅರಸನಾದ ನನ್ನ ಒಡೆಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು, ನನಗುಂಟಾದ ಸಮಸ್ತವೂ ನಿನ್ನದು,” ಎಂದನು.


ಯೆಹೋವ ದೇವರು ಅವನ ಸಂಗಡ ಇದ್ದರು. ಹಿಜ್ಕೀಯನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಯಿತು. ಅವನು ಅಸ್ಸೀರಿಯದ ಅರಸನನ್ನು ಸೇವಿಸದೆ, ಅವನ ಮೇಲೆ ತಿರುಗಿಬಿದ್ದನು.


ಯಾಕೋಬಿನ ಮನೆತನದವರು ಪೂರ್ವದೇಶಗಳ ಮಂತ್ರತಂತ್ರಗಳಲ್ಲಿ ಮಗ್ನರಾಗಿ, ಫಿಲಿಷ್ಟಿಯರಂತೆ ಕಣಿ ಹೇಳುವವರಾಗಿಯೂ, ಬೇರೆ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆಯುಳ್ಳವರಾಗಿಯೂ ಇರುವುದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀರಿ.


ಇದಲ್ಲದೆ ಅಸ್ಸೀರಿಯರೊಂದಿಗೂ ವ್ಯಭಿಚಾರ ಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀಯೆ; ಆದರೂ ತೃಪ್ತಿಯಾಗಲಿಲ್ಲ.


“ಒಹೊಲಳು ಇನ್ನು ನನ್ನ ವಶವಾಗಿರುವಾಗಲೇ ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು ತನ್ನ ನೆರೆಯವರಾದ ಅಸ್ಸೀರಿಯದವರನ್ನು,


ಅವಳು ಯೋಧರಾದ ಅಸ್ಸೀರಿಯರನ್ನೂ, ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಉಡುಪು ಧರಿಸಿ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರಾಗಿಯೂ, ಅಪೇಕ್ಷಿಸತಕ್ಕ ಯೌವನಸ್ಥರಾಗಿಯೂ ಇರುವಂಥವರನ್ನು ಮೋಹಿಸಿದಳು.


ನಿಮ್ಮ ವಿಶೇಷ ಮಿತ್ರರಾಗಿ ನೀವು ಬೆಳೆಸಿದವರನ್ನು ಯೆಹೋವ ದೇವರು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳೋ ಎಂಬಂತೆ ಹಿಡಿಯುವುದಲ್ಲವೆ?


“ಎಫ್ರಾಯೀಮು ಸಹ ಸುಲಭವಾಗಿ ಮೋಸಕ್ಕೆ ಒಳಗಾಗುವ ಪಾರಿವಾಳದ ಹಾಗಿದ್ದಾನೆ. ಈಗ ಅವರು ಈಜಿಪ್ಟನ್ನು ಕರೆಯುತ್ತಾರೆ. ಈಗ ಅವರು ಅಸ್ಸೀರಿಯದ ಆಶ್ರಯಕ್ಕೆ ಹೋಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು