Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:9 - ಕನ್ನಡ ಸಮಕಾಲಿಕ ಅನುವಾದ

9 ಆಗ ಅಸ್ಸೀರಿಯದ ಅರಸನು ಅವನ ಮಾತು ಕೇಳಿ, ದಮಸ್ಕಕ್ಕೆ ಹೋಗಿ, ಅದನ್ನು ಮುತ್ತಿಗೆ ಹಾಕಿ, ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು, ರೆಚೀನನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ಮುತ್ತಿಗೆ ಹಾಕಿ, ರೆಚೀನನನ್ನು ಕೊಂದು, ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತ್ಯಕ್ಕೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನು ಇವನ ಮಾತಿಗೆ ಒಪ್ಪಿ ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತಕ್ಕೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್‌ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:9
12 ತಿಳಿವುಗಳ ಹೋಲಿಕೆ  

“ಇಸ್ರಾಯೇಲರೇ, ನೀವು ನನಗೆ ಕೂಷ್ಯರ ಮಕ್ಕಳ ಹಾಗಲ್ಲವೇ? ನಾನು ನಿಮ್ಮನ್ನು ಈಜಿಪ್ಟಿನಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ತರಲಿಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.


ಏಲಾಮಿನವರು ಕುದುರೆಗಳ, ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆರೆದರು.


ಹೀಗಿರುವುದರಿಂದ ಯೆಹೋವ ದೇವರು ರೆಚೀನನ ವೈರಿಗಳನ್ನು ಅವನಿಗೆ ವಿರೋಧವಾಗಿ ಎಬ್ಬಿಸಿ,


ಹೌದು, ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮುಂಚೆಯೇ, ನೀನು ಭಯಪಡುವ ಆ ಅರಸರುಗಳ ದೇಶ ನಿರ್ಜನವಾಗುವುದು.


ಆಹಾಜನು ಯೆಹೋವ ದೇವರ ಆಲಯದಿಂದಲೂ, ಅರಮನೆಯಿಂದಲೂ, ಪ್ರಧಾನರಿಂದಲೂ ಆಸ್ತಿಯ ಒಂದು ಪಾಲನ್ನು ತೆಗೆದುಕೊಂಡು, ಅಸ್ಸೀರಿಯದ ಅರಸನಿಗೆ ಕಾಣಿಕೆಯಾಗಿ ಕೊಟ್ಟನು, ಆದರೂ ಅವನು ಆಹಾಜನಿಗೆ ಸಹಾಯ ಮಾಡಲಿಲ್ಲ.


ಆದ್ದರಿಂದ ಆಹಾಜನ ದೇವರಾದ ಯೆಹೋವ ದೇವರು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದರು. ಅರಾಮ್ಯರು ಅವನನ್ನು ಹೊಡೆದು, ಅವರಲ್ಲಿ ಅನೇಕರನ್ನು ಸೆರೆಹಿಡಿದು, ದಮಸ್ಕಕ್ಕೆ ತೆಗೆದುಕೊಂಡು ಹೋದರು. ಇದಲ್ಲದೆ ಆಹಾಜನು ಇಸ್ರಾಯೇಲಿನ ಅರಸನ ಕೈವಶವಾಗಿ, ಅವನಿಂದಲೂ ಕಠಿಣವಾಗಿ ಸೋತು ಹೋದನು.


ಕಲ್ನೋ, ಕರ್ಕೆಮೀಷಿನ ಹಾಗಲ್ಲವೋ? ಹಮಾತ್ ಅರ್ಪಾದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗಲ್ಲವೋ?


ದಮಸ್ಕದ ವಿಷಯವಾದ ಪ್ರವಾದನೆ: ಇಗೋ, ದಮಸ್ಕವು ಇನ್ನು ಪಟ್ಟಣವಾಗಿರದೆ ಅದು ಹಾಳು ದಿಬ್ಬವಾಗಿರುವುದು.


“ಯೆಹೋವ ದೇವರೇ, ಅಸ್ಸೀರಿಯದ ಅರಸರು ಸಕಲ ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ, ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ.


ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಅವರು ಇಯ್ಯೋನ್, ದಾನ್ ಆಬೇಲ್ಮಯಿಮ್, ನಫ್ತಾಲ್ಯರ ಸಮಸ್ತ ಉಗ್ರಾಣಗಳ ಪಟ್ಟಣಗಳನ್ನು ವಶಪಡಿಸಿಕೊಂಡರು.


“ಇಟ್ಟಿಗೆಗಳು ಬಿದ್ದು ಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿಮರಗಳನ್ನು ಕಡಿದಿದ್ದರೂ ಅಲ್ಲಿಯೇ ನಾವು ದೇವದಾರು ವೃಕ್ಷಗಳನ್ನು ನೆಡುವೆವು,”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು