2 ಅರಸುಗಳು 17:11 - ಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರು ತಮ್ಮ ಮುಂದೆ ಓಡಿಸಿಬಿಟ್ಟ ಇತರ ಜನರಂತೆ ಅವರು ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪವನ್ನು ಸುಟ್ಟು ಯೆಹೋವ ದೇವರನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಲ್ಲಿ ಅವರು ಯೆಹೋವನು ತಮ್ಮ ಎದುರಿನಿಂದ ಹೊರಡಿಸಿ ಜಡಿಸಿದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಹಾಕಿ, ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ಅವರನ್ನು ರೇಗಿಸಿದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನು ತಮ್ಮ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪಸುಟ್ಟು ತಮ್ಮ ದುಷ್ಕೃತ್ಯಗಳಿಂದ ಆತನನ್ನು ರೇಗಿಸಿದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇಸ್ರೇಲರು ಪೂಜಾಸ್ಥಳಗಳಲ್ಲೆಲ್ಲಾ ಧೂಪವನ್ನು ಸುಡುತ್ತಿದ್ದರು. ಯೆಹೋವನು ಆ ದೇಶದಿಂದ ಬಲವಂತವಾಗಿ ಹೊರಗಟ್ಟಿದ ಆ ಮೊದಲಿನ ಜನಾಂಗಗಳಂತೆ ಇಸ್ರೇಲರು ಮಾಡಿದರು. ಇಸ್ರೇಲರು ಮಾಡಿದ ದುಷ್ಕೃತ್ಯಗಳಿಂದ ಯೆಹೋವನು ಕೋಪಗೊಂಡನು. ಅಧ್ಯಾಯವನ್ನು ನೋಡಿ |
ಈಗಲೇ ಏನು ಆಗುವುದು? ನೀರಿನಲ್ಲಿರುವ ಆಪು ಹುಲ್ಲು ಅಲ್ಲಾಡುವ ಹಾಗೆ ಯೆಹೋವ ದೇವರು ಇಸ್ರಾಯೇಲನ್ನು ಹೊಡೆಯುವರು. ಇಸ್ರಾಯೇಲರು ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಲು, ತಮ್ಮ ವಿಗ್ರಹಾರಾಧನೆಗೋಸ್ಕರ ಅಶೇರ ಸ್ತಂಭಗಳನ್ನು ನಿಲ್ಲಿಸಿಕೊಂಡದ್ದರಿಂದ, ಯೆಹೋವ ದೇವರು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವರು.