2 ಅರಸುಗಳು 17:15 - ಕನ್ನಡ ಸಮಕಾಲಿಕ ಅನುವಾದ15 ದೇವರ ಕಟ್ಟಳೆಗಳನ್ನೂ, ದೇವರು ತಮ್ಮ ಪಿತೃಗಳ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಅವರಿಗೆ ಹೇಳಿದ ಎಚ್ಚರಿಕೆಯನ್ನೂ ತಿರಸ್ಕರಿಸಿದರು. ಅವರು ವ್ಯರ್ಥವಾದ ವಿಗ್ರಹಗಳನ್ನು ಹಿಂಬಾಲಿಸಿ, ನಿಷ್ಪ್ರಯೋಜಕರಾದರು. “ನೀವು ಅವರ ಹಾಗೆ ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ್ದರೂ, ಅವರು ತಮ್ಮ ಸುತ್ತಲಿನ ಜನರನ್ನೇ ಅನುಸರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆತನು ತಮ್ಮ ಪೂರ್ವಿಕರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ, ತಮಗೆ ಹೇಳಿಸಿದ ಒಡಂಬಡಿಕೆಯನ್ನು ತಿರಸ್ಕರಿಸಿ, ವ್ಯರ್ಥವಾದ ದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ, ಅವರನ್ನು ಅನುಸರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆತನು ತಮ್ಮ ಪಿತೃಗಳಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿ ವಾಕ್ಯಗಳನ್ನೂ ತಿರಸ್ಕರಿಸಿ ವಿುಥ್ಯಾದೇವತೆಗಳನ್ನು ಸೇವಿಸಿ ನಿಷ್ಪ್ರಯೋಜಕರಾದರು; ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಯೆಹೋವನು ಆಜ್ಞಾಪಿಸಿದರೂ ಅವರು ಕೇಳದೆ ಅವರನ್ನು ಅನುಸರಿಸಿದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು. ಅಧ್ಯಾಯವನ್ನು ನೋಡಿ |