Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:18 - ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಬಹುಕೋಪಗೊಂಡು, ಅವರನ್ನು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಸ್ರಾಯೇಲರು ಈ ಪ್ರಕಾರ ನಡೆದುಕೊಂಡುದರಿಂದ, ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು, ಯೆಹೂದ ಕುಲದವರ ಹೊರತು ಎಲ್ಲ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ಈ ಪ್ರಕಾರ ನಡೆದದರಿಂದ ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು ಯೆಹೂದಕುಲದವರ ಹೊರತು ಉಳಿದ ಎಲ್ಲಾ ಕುಲಗಳವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ಯೆಹೋವನು ಇಸ್ರೇಲಿನ ಬಗ್ಗೆ ಉಗ್ರಕೋಪಿಯಾಗಿ, ಅವರನ್ನು ತನ್ನ ದೃಷ್ಟಿಯಿಂದ ದೂರಮಾಡಿದನು. ಯೆಹೂದಕುಲದವರ ಹೊರತಾಗಿ ಇಸ್ರೇಲರಲ್ಲಿ ಯಾರೂ ಉಳಿಯಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:18
23 ತಿಳಿವುಗಳ ಹೋಲಿಕೆ  

ಆದರೆ, ನನ್ನ ಸೇವಕ ದಾವೀದನಿಗೋಸ್ಕರವೂ, ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವುದು.


ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಿದುಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ, ನಾನು ಆಯ್ದುಕೊಂಡ ಯೆರೂಸಲೇಮಿಗೋಸ್ಕರವೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು,” ಎಂದರು.


ಎಫ್ರಾಯೀಮು ಸುಳ್ಳಿನಿಂದ ಮತ್ತು ಇಸ್ರಾಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ. ಯೆಹೂದ ಕೂಡ ಪರಿಶುದ್ಧರೂ ನಂಬಿಗಸ್ತರೂ ಆದ ದೇವರ ವಿರುದ್ಧ ಅಶಿಸ್ತಿನಿಂದ ಇದೆ.


ಇಸ್ರಾಯೇಲರು ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ, ಅವರು ಸಭೆಗೆ ಅವನನ್ನು ಕರೆಕಳುಹಿಸಿ, ಸಮಸ್ತ ಇಸ್ರಾಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.


ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಎಂದಿಗೂ ಬೆಳಕು ಆರಿಹೋಗದ ಹಾಗೆ, ಅವನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು.


ಅವರು ಯೆಹೋವ ದೇವರ ದೇಶದಲ್ಲಿ ನೆಲೆಸುವುದಿಲ್ಲ. ಆದರೆ ಎಫ್ರಾಯೀಮು ಈಜಿಪ್ಟಿಗೆ ಹಿಂದಿರುಗುವುದು. ಅವರು ಅಸ್ಸೀರಿಯದಲ್ಲಿ ಅಶುದ್ಧವಾದವುಗಳನ್ನು ತಿನ್ನುವರು.


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.


ಯೆಹೋವ ದೇವರು, “ನಾನು ಇಸ್ರಾಯೇಲನ್ನು ತೆಗೆದುಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು. ಇದಲ್ಲದೆ ನಾನು ಆಯ್ದುಕೊಂಡ ಯೆರೂಸಲೇಮ್ ಪಟ್ಟಣವನ್ನೂ, ‘ನನ್ನ ಹೆಸರು ಅಲ್ಲಿರುವುದು,’ ಎಂದು ನಾನು ಹೇಳಿದ ಆಲಯವನ್ನೂ ತೆಗೆದುಬಿಡುವೆನು,” ಎಂದು ಹೇಳಿದರು.


ಆದರೆ ಯೆಹೋವ ದೇವರು ಅಬ್ರಹಾಮನ, ಇಸಾಕನ, ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಇಸ್ರಾಯೇಲರಿಗೆ ಕೃಪೆತೋರಿಸಿ ಅವರ ಮೇಲೆ ಅನುಕಂಪಗೊಂಡರು. ಅವರನ್ನು ನಾಶಮಾಡಲು, ಆತನು ಅವರನ್ನು ತನ್ನಿಂದ ತೊರೆದುಬಿಡಲು ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲು ಮನಸ್ಸು ಮಾಡಲಿಲ್ಲ.


ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಒಳ್ಳೆಯ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ


ನಿಮ್ಮ ದೇವರಾದ ಯೆಹೋವ ದೇವರು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿಬಿಡುವುದಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನೊಳಗಿಂದ ನೀವು ನಾಶವಾಗುವವರೆಗೂ ಅವರು ನಿಮಗೆ ಉರುಲೂ ಬೋನೂ ಆಗಿರುವರು. ಇದಲ್ಲದೆ ದೇವರು ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯವಾಗಿ ತಿಳಿದುಕೊಳ್ಳುವಿರಿ.


“ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ,


ಹೋಶೇಯನ ಒಂಬತ್ತನೆಯ ವರ್ಷದಲ್ಲಿ ಅಸ್ಸೀರಿಯದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡನು. ಅವನು ಇಸ್ರಾಯೇಲನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ದೇವರು, “ನನ್ನ ಮುಖವನ್ನು ಅವರಿಗೆ ಮರೆಮಾಡುವೆನು, ಅವರ ಅಂತ್ಯವು ಏನೆಂದು ನೋಡುವೆನು. ಅವರು ಮೂರ್ಖ ಸಂತತಿಯೇ. ನಂಬಿಕೆಯಿಲ್ಲದ ಮಕ್ಕಳೇ.


ಅಲ್ಲಿ ದಾನ್ಯರು ಕೆತ್ತಿದ ವಿಗ್ರಹವನ್ನು ತಮಗಾಗಿ ಸ್ಥಾಪಿಸಿಕೊಂಡರು. ಇಸ್ರಾಯೇಲರು ಸೆರೆಯಾಗಿ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ಅವನ ಮಕ್ಕಳೂ ದಾನನ ಗೋತ್ರದವರಿಗೆ ಯಾಜಕರಾಗಿದ್ದರು.


ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವುದನ್ನು ಬಿಟ್ಟುಬಿಟ್ಟು, ಅವರನ್ನು ಅವರ ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ, ಸೂರೆಯೂ ಆಗಿ ಹೋಗುವರು.


ನಿಶ್ಚಯವಾಗಿ ಯೆಹೋವ ದೇವರ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಮನಸ್ಸೆಯು ತನ್ನ ಸಮಸ್ತ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ, ಯೆಹೂದವನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕುವಂತೆ ಇದಾಯಿತು.


ಆಗ ನಾನು ಅತಿಕ್ರಮಿಸಿದವರಿಗೆ ನಿಮ್ಮ ಮಾರ್ಗಗಳನ್ನು ಬೋಧಿಸುವೆನು; ಮತ್ತು ಪಾಪಿಗಳು ನಿಮ್ಮ ಕಡೆಗೆ ತಿರುಗಿಕೊಳ್ಳುವರು.


ನಿಮ್ಮ ಸಹೋದರರೆಲ್ಲರನ್ನೂ, ಎಫ್ರಾಯೀಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ, ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.’


ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.


ಗರ್ಭದಲ್ಲಿ ಅವನು ತನ್ನ ಸಹೋದರನನ್ನು ಹಿಮ್ಮಡಿಯಿಂದ ಹಿಡಿದು, ಮನುಷ್ಯನಾಗಿಯೇ ದೇವರೊಂದಿಗೆ ಹೋರಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು