2 ಅರಸುಗಳು 17:20 - ಕನ್ನಡ ಸಮಕಾಲಿಕ ಅನುವಾದ20 ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಸಂತತಿಯನ್ನೆಲ್ಲಾ ಅಲಕ್ಷ್ಯಮಾಡಿ, ಅವರನ್ನು ಕುಂದಿಸಿ, ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಡುವವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೆಹೋವನು ಇಸ್ರಾಯೇಲರ ಕುಲಗಳಲ್ಲಿ ಉಳಿದಿದ್ದವರನ್ನೂ ಅಲಕ್ಷ್ಯಮಾಡಿ, ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ ಅವರನ್ನು ಬಾಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇಸ್ರಯೇಲ್ ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ, ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ, ಶಿಕ್ಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆತನು ಇಸ್ರಾಯೇಲ್‍ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟು ಸೂರೆಮಾಡುವವರಿಗೆ ಒಪ್ಪಿಸಿ ಬಾಧಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋವನು ಇಸ್ರೇಲಿನ ಜನರೆಲ್ಲರನ್ನೂ ತಿರಸ್ಕರಿಸಿದನು. ಅವನು ಅವರಿಗೆ ಅನೇಕ ತೊಂದರೆಗಳನ್ನು ಉಂಟುಮಾಡಿದನು. ಅವರನ್ನು ನಾಶಗೊಳಿಸಲು ನಾಶಕರಿಗೆ ಆತನು ಅವಕಾಶ ನೀಡಿದನು. ಕೊನೆಗೆ, ಆತನು ಅವರನ್ನು ದೂರತಳ್ಳಿ, ತನ್ನ ದೃಷ್ಟಿಯಿಂದ ಅವರನ್ನೂ ದೂರಮಾಡಿದನು. ಅಧ್ಯಾಯವನ್ನು ನೋಡಿ |
ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿ ಓಡಿಸಿದೆನೋ, ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ಮುಗಿಸಿಬಿಡುತ್ತೇನೆ; ಆದರೆ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದರೂ ನಿನ್ನನ್ನು ಶಿಕ್ಷಿಸದೆ ಬಿಡುವುದಿಲ್ಲ.”
ನಿಮ್ಮ ದೇವರಾದ ಯೆಹೋವ ದೇವರು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿಬಿಡುವುದಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನೊಳಗಿಂದ ನೀವು ನಾಶವಾಗುವವರೆಗೂ ಅವರು ನಿಮಗೆ ಉರುಲೂ ಬೋನೂ ಆಗಿರುವರು. ಇದಲ್ಲದೆ ದೇವರು ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯವಾಗಿ ತಿಳಿದುಕೊಳ್ಳುವಿರಿ.