Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:25 - ಕನ್ನಡ ಸಮಕಾಲಿಕ ಅನುವಾದ

25 ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ, ಯೆಹೋವ ದೇವರಿಗೆ ಭಯಪಡದ ಕಾರಣ, ಯೆಹೋವ ದೇವರು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದರು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲ. ಆದುದರಿಂದ ಆತನು ಸಿಂಹಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರಿಗೆ ಆರಂಭದಲ್ಲಿ ಸರ್ವೇಶ್ವರನಲ್ಲಿ ಭಯಭಕ್ತಿ ಇರಲಿಲ್ಲ. ಆದ್ದರಿಂದ ಸರ್ವೇಶ್ವರ ಸಿಂಹಗಳನ್ನು ಕಳುಹಿಸಿದರು; ಅವು ಅವರಲ್ಲಿ ಅನೇಕರನ್ನು ಕೊಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲವಾದದರಿಂದ ಆತನು ಸಿಂಹಗಳನ್ನು ಕಳುಹಿಸಿದನು; ಅವು ಅವರಲ್ಲಿ ಅನೇಕರನ್ನು ಕೊಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ಅವರು ಯೆಹೋವನನ್ನು ಗೌರವಿಸಲಿಲ್ಲ. ಆದ್ದರಿಂದ ಅವರ ಮೇಲೆ ಆಕ್ರಮಣಮಾಡಲು ಯೆಹೋವನು ಸಿಂಹಗಳನ್ನು ಕಳುಹಿಸಿದನು. ಈ ಸಿಂಹಗಳು ಆ ಜನರಲ್ಲಿ ಕೆಲವರನ್ನು ಕೊಂದುಹಾಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:25
18 ತಿಳಿವುಗಳ ಹೋಲಿಕೆ  

ಇವರು ಯೆಹೋವ ದೇವರಿಗೆ ಇಂದಿನವರೆಗೂ ಭಯಪಡದೆ, ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು. ಇವರ ಪಿತೃಗಳು ಮಾಡಿದ ಹಾಗೆ, ಇವರೂ, ಇವರ ಮಕ್ಕಳೂ, ಇವರ ಮೊಮ್ಮಕ್ಕಳೂ ಮಾಡುತ್ತಿದ್ದಾರೆ.


ಈ ದಿವಸದವರೆಗೂ ಅವರು ತಮ್ಮ ಪೂರ್ವದ ಪದ್ಧತಿಯ ಪ್ರಕಾರ ಮಾಡುತ್ತಾರೆ. ಅವರು ಯೆಹೋವ ದೇವರಿಗೆ ಭಯಪಡದೆ, ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ, ತಮ್ಮ ನೀತಿಗಳ ಪ್ರಕಾರವಾಗಿಯೂ, ನಿಯಮದ ಪ್ರಕಾರವಾಗಿಯೂ ಯೆಹೋವ ದೇವರು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.


ಅವರು ಯೆಹೋವ ದೇವರಿಗೆ ಆರಾಧನೆ ಸಲ್ಲಿಸಿದರು. ಆದರೂ ತಮ್ಮಲ್ಲಿರುವ ಪೂಜಾಸ್ಥಳಗಳ ಯಾಜಕರನ್ನು ನೇಮಿಸಿಕೊಂಡರು. ಇವರು ಪೂಜಾಸ್ಥಳಗಳ ಮೇಲಿರುವ ಮಂದಿರಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.


ಅವನು ಅವರಿಗೆ, “ನಾನು ಹಿಬ್ರಿಯನು. ಸಮುದ್ರವನ್ನೂ, ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರಲೋಕದ ದೇವರಾದ ಯೆಹೋವ ದೇವರಿಗೆ ನಾನು ಆರಾಧಿಸುವವನಾಗಿದ್ದೇನೆ,” ಎಂದು ಹೇಳಿದನು.


“ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ. “ಅವರೇ ಜೀವವುಳ್ಳ ದೇವರಾಗಿದ್ದು, ಎಂದೆಂದಿಗೂ ಸ್ಥಿರವಾಗಿರುವವರಾಗಿದ್ದಾರೆ. ಅವರ ರಾಜ್ಯವು ನಾಶವಾಗದೆ, ಅವರ ಆಳ್ವಿಕೆ ಶಾಶ್ವತವಾಗಿ ನಿಲ್ಲುವುದು.


“ನಾನು ಖಡ್ಗ, ಬರಗಾಲ ಕ್ಷಾಮ, ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ, ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವುದು?


“ನಾನು ದುಷ್ಟಮೃಗಗಳನ್ನು ದೇಶದಲ್ಲಿ ಹಾದುಹೋಗುವಂತೆ ಮಾಡಿ, ಅದನ್ನು ನಿರ್ಜನಪಡಿಸಿ, ಹಾಳು ಮಾಡಿ, ಯಾರೂ ಮೃಗಗಳ ನಿಮಿತ್ತ ಹಾದುಹೋಗದಂತೆ ಮಾಡಿದರೆ,


“ನಾನು ಅವರಿಗೆ ವಿರೋಧವಾಗಿ ನಾಲ್ಕು ವಿಧವಾದ ವಿನಾಶಗಳನ್ನು ಎಂದರೆ, ಕೊಲ್ಲುವುದಕ್ಕೆ ಖಡ್ಗವನ್ನೂ, ಹರಿಯುವುದಕ್ಕೆ ನಾಯಿಗಳನ್ನು, ನುಂಗುವುದಕ್ಕೂ ನಾಶಮಾಡುವುದಕ್ಕೂ ಆಕಾಶದ ಪಕ್ಷಿಗಳನ್ನೂ, ಕಾಡುಮೃಗಗಳನ್ನೂ ನೇಮಿಸುತ್ತೇನೆ ಎಂಬುದು ಯೆಹೋವ ದೇವರಾದ ನನ್ನ ಮಾತು.


ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ.


ಹೀಗಿರುವುದರಿಂದ ಅಡವಿಯ ಸಿಂಹವು ಅವರನ್ನು ದಾಳಿಮಾಡುವುದು. ಕಾಡಿನ ತೋಳವು ಅವರನ್ನು ಸೂರೆಮಾಡುವುದು. ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವುದು. ಅಲ್ಲಿಂದ ಹೊರಗೆ ಬರುವವರೆಲ್ಲರೂ ಸೀಳಲಾಗುವರು. ಏಕೆಂದರೆ, ಅವರ ದ್ರೋಹಗಳು ಬಹಳವಾಗಿವೆ. ಅವರ ಹಿಂಜಾರುವಿಕೆಯು ಹೆಚ್ಚಾಗಿವೆ.


ಆಗ ಅವರು ಸಮಾರ್ಯದಿಂದ ಕರೆತಂದ ಯಾಜಕರಲ್ಲಿ, ಒಬ್ಬನು ಬಂದು ಬೇತೇಲಿನಲ್ಲಿ ವಾಸವಾಗಿದ್ದು, ಅವರು ಯೆಹೋವ ದೇವರಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು.


ಅವನು ಹಿಂದಿರುಗಿ ಅವರನ್ನು ನೋಡಿ, ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯಿಂದ ಎರಡು ಕರಡಿಗಳು ಹೊರಟು, ಅವರಲ್ಲಿ ನಾಲ್ವತ್ತೆರಡು ಹುಡುಗರನ್ನು ಸೀಳಿಬಿಟ್ಟವು.


ಆಗ ಪ್ರವಾದಿಯು ಇವನಿಗೆ, “ನೀನು ಯೆಹೋವ ದೇವರ ಮಾತನ್ನು ಕೇಳದೆ ಹೋದದ್ದರಿಂದ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲುವುದು,” ಎಂದನು. ಅವನು ಪ್ರವಾದಿಯನ್ನು ಬಿಟ್ಟು ಹೋದಾಗಲೇ ಸಿಂಹವು ಅವನನ್ನು ಕಂಡು ಕೊಂದುಹಾಕಿತು.


ಅವನು ಹೋದ ತರುವಾಯ, ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಬಿದ್ದಿತ್ತು. ಕತ್ತೆಯೂ ಮತ್ತು ಸಿಂಹವೂ ಹೆಣದ ಬಳಿಯಲ್ಲಿ ನಿಂತಿದ್ದವು.


ರೂಬೇನ್ಯರೇ, ಗಾದ್ಯರೇ ಯೆಹೋವ ದೇವರು ನಿಮಗೂ ನಮಗೂ ನಡುವೆ ಯೊರ್ದನ್ ನದಿಯನ್ನು ಮೇರೆಯಾಗಿ ಇಟ್ಟಿದ್ದರಿಂದ ಯೆಹೋವ ದೇವರ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲ,’ ಎಂದು ಹೇಳಿ, ನಮ್ಮ ಮಕ್ಕಳನ್ನು ಯೆಹೋವ ದೇವರಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು.


ಕಾಡುಮೃಗಗಳು ನಿಮ್ಮ ಮೇಲೆ ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದವರನ್ನಾಗಿ ಮಾಡಿ, ನಿಮ್ಮ ದನಗಳನ್ನು ತಿಂದುಬಿಡುವವು. ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವುವು. ನಿಮ್ಮ ಮಾರ್ಗಗಳು ಹಾಳಾಗಿ ಹೋಗುವುವು.


ಆದಕಾರಣ ಸೇವಕರು ಅಸ್ಸೀರಿಯದ ಅರಸನಿಗೆ, “ನೀನು ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನರು ಆ ದೇಶದ ದೇವರು ಅಪೇಕ್ಷಿಸುವುದನ್ನು ತಿಳಿಯದೆ ಇದ್ದಾರೆ. ಆದುದರಿಂದ, ದೇವರು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾರೆ. ಅವು ಅವರನ್ನು ಕೊಂದುಹಾಕುತ್ತವೆ,” ಎಂದು ತಿಳಿಸಿದರು.


ದೀಮೋನ್ ನದಿಯ ನೀರೆಲ್ಲಾ ರಕ್ತವಾಯಿತು. ದೀಮೋನಿನ ಮೇಲೆ ಹೆಚ್ಚಾದ ಹಾನಿಯನ್ನು ತರುವೆನು. ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ, ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು