Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:28 - ಕನ್ನಡ ಸಮಕಾಲಿಕ ಅನುವಾದ

28 ಆಗ ಅವರು ಸಮಾರ್ಯದಿಂದ ಕರೆತಂದ ಯಾಜಕರಲ್ಲಿ, ಒಬ್ಬನು ಬಂದು ಬೇತೇಲಿನಲ್ಲಿ ವಾಸವಾಗಿದ್ದು, ಅವರು ಯೆಹೋವ ದೇವರಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವರು ಸಮಾರ್ಯದಿಂದ ಸೆರೆಯವನಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು ಜನರಿಗೆ ಯೆಹೋವನ ಭಕ್ತಿಯನ್ನು ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವರು ಸಮಾರಿಯಾದಿಂದ ಸೆರೆಯವರಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು, ಜನರಿಗೆ ಸರ್ವೇಶ್ವರನ ಭಕ್ತಿಯನ್ನು ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವರು ಸಮಾರ್ಯದಿಂದ ಸೆರೆಯವನಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು ಜನರಿಗೆ ಯೆಹೋವಭಕ್ತಿಯನ್ನು ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಹೀಗೆ ಅಶ್ಶೂರದವರು ಸಮಾರ್ಯದಿಂದ ಕರೆದೊಯ್ದಿದ್ದ ಯಾಜಕರಲ್ಲೊಬ್ಬನು ಬೇತೇಲಿನಲ್ಲಿ ವಾಸಿಸಲು ಬಂದನು. ಈ ಯಾಜಕನು ಜನರಿಗೆ, ಯೆಹೋವ ಭಕ್ತಿಯನ್ನು ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:28
7 ತಿಳಿವುಗಳ ಹೋಲಿಕೆ  

ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿತೋರಿಸುವ ಕುರುಡರು. ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಹಳ್ಳಕ್ಕೆ ಬೀಳುವರು,” ಎಂದು ಹೇಳಿದರು.


ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ನೀವು ಸಮಾರ್ಯದವರು ಅರಿಯದೆ ಇರುವುದನ್ನು ಆರಾಧಿಸುತ್ತೀರಿ. ನಾವು ಅರಿತಿರುವುದನ್ನೇ ಆರಾಧಿಸುವವರು. ಏಕೆಂದರೆ ರಕ್ಷಣೆಯು ಯೆಹೂದ್ಯರಿಂದಲೇ.


ಆಗ ಅಸ್ಸೀರಿಯದ ಅರಸನು, “ನೀವು ಅಲ್ಲಿಂದ ತೆಗೆದುಕೊಂಡು ಬಂದ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ. ಅವನು ಅಲ್ಲಿ ವಾಸವಾಗಿರಲಿ. ಅವನೇ ಅವರಿಗೆ ಆ ದೇಶದ ದೇವರು ಅಪೇಕ್ಷಿಸುವುದನ್ನು ಬೋಧಿಸಲಿ,” ಎಂದು ಆಜ್ಞಾಪಿಸಿದನು.


ಆದರೆ ಪ್ರತಿ ಜನಾಂಗದವರೂ, ತಾವು ವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ, ಸಮಾರ್ಯದವರು ಮಾಡಿದ ಪೂಜಾಸ್ಥಳಗಳ ಮಂದಿರಗಳಲ್ಲಿ ಅವುಗಳನ್ನು ಇರಿಸಿದರು.


ಅವನು ಅವರಿಗೆ, “ನಾನು ಹಿಬ್ರಿಯನು. ಸಮುದ್ರವನ್ನೂ, ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರಲೋಕದ ದೇವರಾದ ಯೆಹೋವ ದೇವರಿಗೆ ನಾನು ಆರಾಧಿಸುವವನಾಗಿದ್ದೇನೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು