Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:29 - ಕನ್ನಡ ಸಮಕಾಲಿಕ ಅನುವಾದ

29 ಆದರೆ ಪ್ರತಿ ಜನಾಂಗದವರೂ, ತಾವು ವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ, ಸಮಾರ್ಯದವರು ಮಾಡಿದ ಪೂಜಾಸ್ಥಳಗಳ ಮಂದಿರಗಳಲ್ಲಿ ಅವುಗಳನ್ನು ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೂ ಆ ಜನಾಂಗಗಳವರು ತಮ್ಮ ದೇವತೆಯ ವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳಲ್ಲಿ ಸಮಾರ್ಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪ್ರತಿಷ್ಠಿಸಿ ಪೂಜಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆದರೂ ಆ ಜನಾಂಗಗಳವರು ತಮ್ಮ ದೇವತೆವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳೊಳಗೆ ಸಮಾರಿಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪೂಜಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದರೂ ಆ ಜನಾಂಗಗಳವರು ತಮ್ಮ ದೇವತೆವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳೊಳಗೆ ಸಮಾರ್ಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪೂಜಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದರೆ ಅವರೆಲ್ಲರೂ ತಮ್ಮ ಸ್ವಂತ ದೇವರುಗಳನ್ನು ನಿರ್ಮಿಸಿ, ಅವುಗಳನ್ನು ಸಮಾರ್ಯದವರು ನಿರ್ಮಿಸಿದ್ದ ಉನ್ನತಸ್ಥಳಗಳಲ್ಲಿನ ಆಲಯಗಳಲ್ಲಿ ಇರಿಸಿದರು. ಅವರು ಎಲ್ಲೆಲ್ಲಿ ವಾಸಿಸುತ್ತಿದ್ದರೋ ಅಲ್ಲೆಲ್ಲಾ ಹೀಗೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:29
10 ತಿಳಿವುಗಳ ಹೋಲಿಕೆ  

ಎಲ್ಲಾ ಜನಾಂಗಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆಯುವನು. ಆದರೆ ನಾವು ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.


ಅವನು ಉನ್ನತ ಸ್ಥಳಗಳಲ್ಲಿ ಪೂಜಾಸ್ಥಳಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.


ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಶು, ಪಕ್ಷಿ, ಸರ್ಪಾದಿಗಳ ಮೂರ್ತಿಗಳೊಂದಿಗೆ ಬದಲಿಸಿಕೊಂಡರು.


ಏಕೆಂದರೆ ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ, ಸಮಾರ್ಯ ಪಟ್ಟಣಗಳಲ್ಲಿರುವ ಪೂಜಾಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ, ಯೆಹೋವ ದೇವರ ಮಾತಿನಿಂದ ಕೂಗಿದ ಮಾತು ನಿಶ್ಚಯವಾಗಿ ಆಗುವುದು,” ಎಂದನು.


ಆಗ ಅವರು ಸಮಾರ್ಯದಿಂದ ಕರೆತಂದ ಯಾಜಕರಲ್ಲಿ, ಒಬ್ಬನು ಬಂದು ಬೇತೇಲಿನಲ್ಲಿ ವಾಸವಾಗಿದ್ದು, ಅವರು ಯೆಹೋವ ದೇವರಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು