Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:31 - ಕನ್ನಡ ಸಮಕಾಲಿಕ ಅನುವಾದ

31 ಅವ್ವೀಯರು ನಿಭಜ್, ತರ್ತಕ್ ಎಂಬ ದೇವತೆಗಳನ್ನು ಮಾಡಿದರು. ಸೆಫರ್ವಯಿಮಿನವರು ತಮ್ಮ ಕುಲದೇವತೆಗಳಾದ ಅದ್ರಮ್ಮೆಲೆಕ್, ಅನಮ್ಮೇಲೆಕ್ ಎಂಬುವುಗಳಿಗಾಗಿ ತಮ್ಮ ಮಕ್ಕಳನ್ನು ಅಗ್ನಿಬಲಿ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವ್ವಿಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಮಾಡಿ ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ಅದ್ರಮ್ಮೆಲೆಕ್, ಅನಮ್ಮೆಲೆಕ್ ಎಂಬ ತಮ್ಮ ಕುಲ ದೇವತೆಗಳನ್ನಾಗಿ ಪೂಜಿಸುತ್ತಾ ತಮ್ಮ ಮಕ್ಕಳನ್ನು ಬಲಿ ಅಗ್ನಿಪ್ರವೇಶ ಮಾಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹಮಾತಿನವರು ಅಷೀಮಾ, ಅವ್ವೀಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ತಮ್ಮ ಕುಲದೇವತೆಗಳಾಗಿರುವ ಅದ್ರೆಮ್ಮೆಲೆಕ್ ಹಾಗು ಅನಮೆಲೆಕ್ ಎಂಬುವುಗಳಿಗಾಗಿ ತಮ್ಮ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹಮಾತಿನವರು ಅಷೀಮಾ, ಅವ್ವೀಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಪೂಜಿಸುತ್ತಿದ್ದರು. ಸೆಫರ್ವಯಿವಿುನವರು ತಮ್ಮ ಕುಲದೇವತೆಗಳಾಗಿರುವ ಅದ್ರಮ್ಮೆಲೆಕ್, ಅನಮ್ಮೆಲೆಕ್ ಎಂಬವುಗಳಿಗೋಸ್ಕರ ತಮ್ಮ ಮಕ್ಕಳನ್ನು ಆಹುತಿಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅವ್ವೀಯರು ಸುಳ್ಳುದೇವತೆಯಾದ ನಿಭಜ್ ಮತ್ತು ತರ್ತಕ್‌ಗಳನ್ನು ಮಾಡಿದರು. ಸೆಫರ್ವಯಿಮಿನವರು ತಮ್ಮ ದೇವರುಗಳಾದ ಅದ್ರಮ್ಮೆಲೆಕ್ ಮತ್ತು ಅನ್ನಮ್ಮೆಲೆಕ್‌ಗಳನ್ನು ಗೌರವಿಸಲು ತಮ್ಮ ಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:31
8 ತಿಳಿವುಗಳ ಹೋಲಿಕೆ  

ಅಸ್ಸೀರಿಯದ ಅರಸನು ಬಾಬಿಲೋನ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಊರುಗಳ ಜನರನ್ನು ಬರಮಾಡಿ, ಅವರನ್ನು ಇಸ್ರಾಯೇಲರಿಗೆ ಬದಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಅವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು, ಅದರ ಪಟ್ಟಣಗಳಲ್ಲಿ ವಾಸಿಸಿದರು.


ಕಣಿಗಳನ್ನೂ, ಶಕುನಗಳನ್ನೂ ಬಳಸಿ, ಯೆಹೋವ ದೇವರಿಗೆ ಕೋಪ ಬರುವಂತೆ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.


ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.


ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ, ಪರ್ಷಿಯಾ, ಯೆರೆಕ್ ಹಾಗೂ ಬಾಬೆಲಿನವರು, ಶೂಷನಿನವರ ಮತ್ತು ಏಲಾಮ್ಯರ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ಆಡಳಿತಗಾರರು,


ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಯೆಹೋವ ದೇವರಿಗೆ ಅಸಹ್ಯವಾದ ಅನೇಕ ಸಂಗತಿಗಳನ್ನು ಮಾಡುತ್ತಾರೆ. ಅಂದರೆ, ಅವರು ತಮ್ಮ ಗಂಡು ಮಕ್ಕಳನ್ನು, ಹೆಣ್ಣು ಮಕ್ಕಳನ್ನು ತಮ್ಮ ದೇವರುಗಳಿಗೆ ಬಲಿಯಾಗಿ ಬೆಂಕಿಯಲ್ಲಿ ಸುಡುತ್ತಾರೆ. ಆದ್ದರಿಂದ ನೀವು ನಿಮ್ಮ ಯೆಹೋವ ದೇವರನ್ನು ಆ ರೀತಿಯಲ್ಲಿ ಆರಾಧಿಸಬಾರದು.


ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಒಳ್ಳೆಯದನ್ನೂ, ಸರಿಯಾದದ್ದನ್ನೂ ಮಾಡುವುದರಿಂದ ನಿಮಗೂ ನಿಮ್ಮ ಮುಂದೆ ಇರುವ ನಿಮ್ಮ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವ ಹಾಗೆ ನಾನು ನಿಮಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡಿರಿ.


“ ‘ನಿನ್ನ ಮಕ್ಕಳಲ್ಲಿ ಯಾರನ್ನೂ ಮೋಲೆಕ್ ದೇವತೆಗೆ ಸಮರ್ಪಿಸಿ, ನಿನ್ನ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು. ನಾನು ಯೆಹೋವ ದೇವರು.


ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು