2 ಅರಸುಗಳು 17:32 - ಕನ್ನಡ ಸಮಕಾಲಿಕ ಅನುವಾದ32 ಅವರು ಯೆಹೋವ ದೇವರಿಗೆ ಆರಾಧನೆ ಸಲ್ಲಿಸಿದರು. ಆದರೂ ತಮ್ಮಲ್ಲಿರುವ ಪೂಜಾಸ್ಥಳಗಳ ಯಾಜಕರನ್ನು ನೇಮಿಸಿಕೊಂಡರು. ಇವರು ಪೂಜಾಸ್ಥಳಗಳ ಮೇಲಿರುವ ಮಂದಿರಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವರು ಯೆಹೋವನ ಭಕ್ತರಾಗಿದ್ದರೂ ಮನಸ್ಸಿಗೆ ಬಂದವರನ್ನು ಉನ್ನತ ಪೂಜಾಸ್ಥಳಗಳ ಯಾಜಕರನ್ನಾಗಿ ನೇಮಿಸಿಕೊಂಡು ಅವರ ಮುಖಾಂತರವಾಗಿ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅವರು ಸರ್ವೇಶ್ವರನ ಭಕ್ತರಾಗಿದ್ದರೂ ತಮ್ಮಲ್ಲೆ ಯಾರ್ಯಾರನ್ನೋ ಉನ್ನತ ಪೂಜಾಸ್ಥಳಗಳ ಯಾಜಕರನ್ನಾಗಿ ನೇಮಿಸಿಕೊಂಡು, ಅವರ ಮುಖಾಂತರ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡೆಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅವರು ಯೆಹೋವನ ಭಕ್ತರಾಗಿ ಕನಿಷ್ಠಜನರಲ್ಲಿ ಕೆಲವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ನೇವಿುಸಿಕೊಂಡು ಅವರ ಮುಖಾಂತರವಾಗಿ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆದರೆ ಅವರು ಯೆಹೋವನಲ್ಲಿಯೂ ಭಕ್ತಿಯನ್ನಿಟ್ಟಿದ್ದರು. ಅವರು ಉನ್ನತಸ್ಥಳಗಳಿಗೆ ಯಾಜಕರನ್ನು ಜನರಲ್ಲಿಯೇ ಆಯ್ಕೆ ಮಾಡಿಕೊಂಡರು. ಆ ಯಾಜಕರು ಜನರಿಗಾಗಿ ಉನ್ನತಸ್ಥಳಗಳಲ್ಲಿನ ದೇವಾಲಯಗಳಲ್ಲಿ ಯಜ್ಞವನ್ನು ಅರ್ಪಿಸಿದರು. ಅಧ್ಯಾಯವನ್ನು ನೋಡಿ |