Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:33 - ಕನ್ನಡ ಸಮಕಾಲಿಕ ಅನುವಾದ

33 ಅವರು ಯೆಹೋವ ದೇವರಿಗೆ ಆರಾಧನೆ ಮಾಡಿದರು. ಆದರೂ ಅವರು ಬಿಟ್ಟುಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳನ್ನು ಸಹ ಸೇವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯೆಹೋವನ ಭಕ್ತರಾಗಿದ್ದರೂ ತಾವು ಬಿಟ್ಟು ಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಸರ್ವೇಶ್ವರನ ಭಕ್ತರಾಗಿದ್ದ ಅವರು ತಾವು ಬಿಟ್ಟುಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯೆಹೋವನ ಭಕ್ತರಾಗಿದ್ದರೂ ತಾವು ಬಿಟ್ಟುಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅವರು ಯೆಹೋವನಲ್ಲಿ ಭಕ್ತಿಯಿಟ್ಟಿದ್ದರು, ಆದರೆ ತಮ್ಮ ಸ್ವಂತ ದೇವರುಗಳ ಸೇವೆಯನ್ನೂ ಮಾಡಿದರು. ಅವರು ತಮ್ಮನ್ನು ತೆಗೆದುಕೊಂಡುಬಂದ ದೇಶಗಳಲ್ಲಿ ಮಾಡುತ್ತಿದ್ದಂತೆ ತಮ್ಮ ದೇವರುಗಳ ಸೇವೆಯನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:33
8 ತಿಳಿವುಗಳ ಹೋಲಿಕೆ  

“ಯಾವ ಸೇವಕನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು. ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ,” ಎಂದರು.


“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.


ಇವರು ಯೆಹೋವ ದೇವರಿಗೆ ಇಂದಿನವರೆಗೂ ಭಯಪಡದೆ, ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು. ಇವರ ಪಿತೃಗಳು ಮಾಡಿದ ಹಾಗೆ, ಇವರೂ, ಇವರ ಮಕ್ಕಳೂ, ಇವರ ಮೊಮ್ಮಕ್ಕಳೂ ಮಾಡುತ್ತಿದ್ದಾರೆ.


ಮಾಳಿಗೆಗಳ ಮೇಲೆ ತಲೆಬಾಗಿಸಿ ಆಕಾಶದ ನಕ್ಷತ್ರಗಣಕ್ಕೆ ಆರಾಧಿಸುವವರನ್ನೂ ಯೆಹೋವ ದೇವರ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ


ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.


ಅವರ ಹೃದಯವು ವಂಚಕವಾದದ್ದು. ಈಗ ಅವರು ಅಪರಾಧಗಳನ್ನು ಹೊರಬೇಕು. ಯೆಹೋವ ದೇವರು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವರು.


ಅವರು ಯೆಹೋವ ದೇವರಿಗೆ ಆರಾಧನೆ ಸಲ್ಲಿಸಿದರು. ಆದರೂ ತಮ್ಮಲ್ಲಿರುವ ಪೂಜಾಸ್ಥಳಗಳ ಯಾಜಕರನ್ನು ನೇಮಿಸಿಕೊಂಡರು. ಇವರು ಪೂಜಾಸ್ಥಳಗಳ ಮೇಲಿರುವ ಮಂದಿರಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.


ಈ ದಿವಸದವರೆಗೂ ಅವರು ತಮ್ಮ ಪೂರ್ವದ ಪದ್ಧತಿಯ ಪ್ರಕಾರ ಮಾಡುತ್ತಾರೆ. ಅವರು ಯೆಹೋವ ದೇವರಿಗೆ ಭಯಪಡದೆ, ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ, ತಮ್ಮ ನೀತಿಗಳ ಪ್ರಕಾರವಾಗಿಯೂ, ನಿಯಮದ ಪ್ರಕಾರವಾಗಿಯೂ ಯೆಹೋವ ದೇವರು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು