Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:36 - ಕನ್ನಡ ಸಮಕಾಲಿಕ ಅನುವಾದ

36 ಆದರೆ ಮಹಾಶಕ್ತಿಯಿಂದಲೂ, ಚಾಚಿದ ಭುಜಪರಾಕ್ರಮದಿಂದಲೂ ಈಜಿಪ್ಟ್ ದೇಶದಿಂದ ನಿಮ್ಮನ್ನು ಬರಮಾಡಿದ ಯೆಹೋವ ದೇವರಿಗೆ ನೀವು ಭಯಪಟ್ಟು, ಅವರೊಬ್ಬರಿಗೇ ಅಡ್ಡಬಿದ್ದು, ಬಲಿ ಅರ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನಿಮ್ಮನ್ನು ಮಹಾಶಕ್ತಿ, ಭುಜಬಲಪರಾಕ್ರಮ ಇವುಗಳ ಮೂಲಕವಾಗಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನಗೊಬ್ಬನಿಗೇ ಕೈಮುಗಿದು ಯಜ್ಞವರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನಿಮ್ಮನ್ನು ಮಹಾಶಕ್ತಿ ಹಾಗು ಭುಜಪರಾಕ್ರಮಗಳ ಮೂಲಕ ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ಸರ್ವೇಶ್ವರನಾದ ನನ್ನಲ್ಲೇ ಭಯಭಕ್ತಿಯುಳ್ಳವರಾಗಿ ನನಗೊಬ್ಬನಿಗೇ ಕೈಮುಗಿದು ಬಲಿಯರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನಿಮ್ಮನ್ನು ಮಹಾಶಕ್ತಿ ಭುಜಪರಾಕ್ರಮ ಇವುಗಳ ಮೂಲಕವಾಗಿ ಐಗುಪ್ತದೇಶದಿಂದ ಕರಕೊಂಡುಬಂದ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ ನನಗೊಬ್ಬನಿಗೇ ಕೈ ಮುಗಿದು ಯಜ್ಞವರ್ಪಿಸಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆದರೆ ನೀವು ಯೆಹೋವನನ್ನು ಅನುಸರಿಸಲೇಬೇಕು. ನಿಮ್ಮನ್ನು ಈಜಿಪ್ಟಿನಿಂದ ಹೊರಗೆತಂದ ದೇವರೇ ನಿಮ್ಮ ಯೆಹೋವ. ಯೆಹೋವನು ನಿಮ್ಮನ್ನು ರಕ್ಷಿಸಲು ತನ್ನ ಮಹಾಶಕ್ತಿಯನ್ನು ಬಳಸಿದನು. ನೀವು ಯೆಹೋವನನ್ನು ಗೌರವಿಸಿ ಆರಾಧಿಸಬೇಕು ಮತ್ತು ಆತನಿಗೆ ಯಜ್ಞಗಳನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:36
17 ತಿಳಿವುಗಳ ಹೋಲಿಕೆ  

“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.


ನಿಮ್ಮ ದೇವರಾದ ಯೆಹೋವ ದೇವರಿಗೆ ನೀವು ಭಯಪಡಬೇಕು. ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು ಮತ್ತು ಅವರ ಹೆಸರಿನಲ್ಲಿ ಆಣೆಯಿಟ್ಟುಕೊಳ್ಳಬೇಕು.


“ ‘ತಲೆ ನೆರೆತ ವೃದ್ಧರ ಮುಂದೆ ಎದ್ದು ನಿಂತುಕೊಳ್ಳಬೇಕು, ಅವರ ಸಮ್ಮುಖವನ್ನು ಗೌರವಿಸು. ನಿನ್ನ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.


ಈಗ ನನ್ನ ಕೈಚಾಚಿ ನಿನ್ನನ್ನೂ, ನಿನ್ನ ಜನರನ್ನೂ ಉಪದ್ರವದಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು.


ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,” ಎಂದು ಹೇಳಿದರು.


ನಿಮ್ಮ ಪವಿತ್ರ ಸೇವಕ ಯೇಸುವಿನ ನಾಮದ ಮೂಲಕವಾಗಿ ಗುಣಪಡಿಸಲು, ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಮಾಡಲು ದೇವರೇ, ನಿಮ್ಮ ಹಸ್ತವನ್ನು ಚಾಚಿರಿ.”


ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.


ನಿಮ್ಮ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ, ಲಕ್ಷಣಗಳಿಂದಲೂ, ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದಿದ್ದೀರಿ.


ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡಬೇಕು. ಅವರ ಸೇವೆಮಾಡಿ ಅವರಿಗೆ ಅಂಟಿಕೊಂಡು, ಅವರ ಹೆಸರಿನಲ್ಲಿ ಪ್ರಮಾಣಮಾಡಬೇಕು.


ನೀನು ಈಜಿಪ್ಟ್ ದೇಶದಲ್ಲಿ ದಾಸನಾಗಿದ್ದಿಯೆಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ಬಲವಾದ ಹಸ್ತದಿಂದಲೂ ಚಾಚಿದ ಭುಜದಿಂದಲೂ ಹೊರಗೆ ಬರಮಾಡಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಯೆಹೋವ ದೇವರು ನಿನಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾರೆ.


ಆಗ ಯೆಹೋವ ದೇವರು ಮೋಶೆಗೆ, “ನೀನು ನನಗೆ ಮೊರೆಯಿಡುವುದೇನು? ಇಸ್ರಾಯೇಲರಿಗೆ ಮುಂದಕ್ಕೆ ಹೊರಡಬೇಕೆಂದು ಹೇಳು.


ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ ಅವರನ್ನು ಹೊರತಂದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ಯೆಹೋವ ದೇವರನ್ನು ಮರೆಯದ ಹಾಗೆ ನೋಡಿಕೊಳ್ಳಿರಿ.


ಜನರು ನಿಮ್ಮ ಮಹಾನಾಮವನ್ನೂ, ನಿಮ್ಮ ಬಲವಾದ ಕೈ, ನಿಮ್ಮ ಚಾಚಿದ ತೋಳು ಇವುಗಳ ಕುರಿತು ಕೇಳಿ, ಅವರು ಈ ಆಲಯದ ಕಡೆಗೆ ಬಂದು ಪ್ರಾರ್ಥನೆಮಾಡಿದರೆ,


ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಭಯಪಡಿರಿ. ಆಗ ಅವರು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವರು,” ಎಂದು ಹೇಳಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು