Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:37 - ಕನ್ನಡ ಸಮಕಾಲಿಕ ಅನುವಾದ

37 ಇದಲ್ಲದೆ ದೇವರು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ, ನೀತಿಗಳನ್ನೂ, ನಿಯಮವನ್ನೂ, ಆಜ್ಞೆಯನ್ನೂ ನೀವು ನಿರಂತರವಾಗಿ ಕೈಗೊಳ್ಳಲು ಎಚ್ಚರಿಕೆಯಾಗಿರಬೇಕು. ಇತರ ದೇವರುಗಳಿಗೆ ಭಯಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನಾನು ನಿಮಗೆ ಬರೆಯಿಸಿಕೊಟ್ಟ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ತಪ್ಪದೆ ಕೈಗೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನಾನು ನಿಮಗೆ ಬರೆಯಿಸಿಕೊಟ್ಟ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ತಪ್ಪದೆ ಕೈಕೊಳ್ಳಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆತನು ನಿಮಗೆ ಬರೆಯಿಸಿಕೊಟ್ಟ ನಿಯಮಗಳಿಗೆ, ಶಾಸ್ತ್ರಗಳಿಗೆ, ಉಪದೇಶಗಳಿಗೆ ಮತ್ತು ಆಜ್ಞೆಗಳಿಗೆ ನೀವು ವಿಧೇಯರಾಗಿರಬೇಕು. ನೀವು ಎಲ್ಲಾ ಕಾಲದಲ್ಲೂ ಇವುಗಳಿಗೆ ವಿಧೇಯತೆಯಿಂದಿರಬೇಕು. ನೀವು ಅನ್ಯದೇವತೆಗಳನ್ನು ಪೂಜಿಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:37
16 ತಿಳಿವುಗಳ ಹೋಲಿಕೆ  

ನಾನು ನಿಮಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಕಾಪಾಡಿ ಕೈಗೊಳ್ಳಬೇಕು. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನನ್ನೂ ತೆಗೆದುಹಾಕಬಾರದು.


ನೀನಾದರೋ ಇಲ್ಲಿ ನನ್ನ ಸಂಗಡ ನಿಂತುಕೋ. ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸೊತ್ತಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞಾನಿಯಮ ಮತ್ತು ನ್ಯಾಯಗಳನ್ನು ನಿಮಗೆ ಹೇಳುವೆನು.”


“ ‘ಆದ್ದರಿಂದ ನನ್ನ ಎಲ್ಲಾ ಆಜ್ಞೆಗಳನ್ನೂ, ನನ್ನ ಎಲ್ಲಾ ನ್ಯಾಯಗಳನ್ನೂ ನೀವು ಅನುಸರಿಸಿ ನಡೆಯಬೇಕು. ನಾನೇ ಯೆಹೋವ ದೇವರು,’ ” ಎಂದು ಹೇಳಿದರು.


ಇದಲ್ಲದೆ ಮೋಶೆಯು ಈ ನಿಯಮವನ್ನು ಬರೆದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಪುತ್ರರಾದ ಯಾಜಕರಿಗೂ, ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.


ಇದಲ್ಲದೆ ನಿಮ್ಮ ಆಜ್ಞೆಗಳನ್ನೂ, ನಿಮ್ಮ ಸಾಕ್ಷಿಗಳನ್ನೂ, ನಿಮ್ಮ ಕಟ್ಟಳೆಗಳನ್ನೂ ಕೈಗೊಳ್ಳಲೂ, ಸಮಸ್ತವನ್ನು ಮಾಡಲೂ ನಾನು ಯಾವುದಕ್ಕೋಸ್ಕರ ಸಿದ್ಧ ಮಾಡಿದೆನೋ, ಆ ಮಹಾ ಕಟ್ಟಡವನ್ನು ಕಟ್ಟಿಸಲೂ, ನನ್ನ ಮಗನಾದ ಸೊಲೊಮೋನನಿಗೆ ಪೂರ್ಣ ಹೃದಯವನ್ನು ಕೊಡಿರಿ,” ಎಂದನು.


ಇಸ್ರಾಯೇಲಿನವರೆಲ್ಲರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ನೀವು ಈ ನಿಯಮವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಜನರು ಕೇಳುವ ಹಾಗೆ ಓದಬೇಕು.


ಹೀಗಿರುವುದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಅವುಗಳನ್ನು ಕೈಗೊಂಡು ನಡೆಯಬೇಕು. ಎಡಕ್ಕಾದರೂ, ಬಲಕ್ಕಾದರೂ ತಿರುಗಬೇಡಿರಿ.


ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ನೀವು ಮರೆಯದೆ, ಇತರ ದೇವರುಗಳಿಗೆ ಭಯಪಡದೆ,


ಈ ಮಾತುಗಳನ್ನು ಯೆಹೋವ ದೇವರು ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯದೊಳಗಿಂದ, ನಿಮ್ಮ ಸಭೆಗೆಲ್ಲಾ ಕೇಳಿಸುವಂತೆ ಮಹಾ ಸ್ವರದಿಂದ ನುಡಿದರು. ಅವರು ಹೆಚ್ಚೇನೂ ಕೂಡಿಸಲಿಲ್ಲ. ದೇವರು ಈ ಮಾತುಗಳನ್ನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು.


ನೀವು ಬದುಕುವ ಹಾಗೆಯೂ, ನಿಮಗೆ ಒಳ್ಳೆಯದಾಗುವ ಹಾಗೆಯೂ, ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗಗಳಲ್ಲೇ ನಡೆದುಕೊಳ್ಳಬೇಕು.


‘ನಾನೇ ನಿಮ್ಮ ದೇವರಾದ ಯೆಹೋವ ದೇವರು. ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡಬೇಡಿರಿ,’ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಸ್ವರವನ್ನು ಕೇಳದೆ ಹೋದಿರಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು