Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:5 - ಕನ್ನಡ ಸಮಕಾಲಿಕ ಅನುವಾದ

5 ಆಗ ಅಸ್ಸೀರಿಯದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು, ಸಮಾರ್ಯಕ್ಕೆ ವಿರೋಧವಾಗಿ ಬಂದು ಅದನ್ನು ಮೂರು ವರ್ಷಗಳವರೆಗೂ ಮುತ್ತಿಗೆಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ, ಅಶ್ಶೂರದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರ್ಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದಲ್ಲದೆ, ಈ ಅಸ್ಸೀರಿಯದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರಿಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಅವನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರ್ಯಕ್ಕೆ ಬಂದು ಮೂರು ವರುಷಗಳವರೆಗೂ ಅದಕ್ಕೆ ಮುತ್ತಿಗೆಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಂತರ ಅಶ್ಶೂರದ ರಾಜನು ಇಸ್ರೇಲಿನಲ್ಲೆಲ್ಲಾ ಸಂಚರಿಸಿ ಸಮಾರ್ಯಕ್ಕೆ ಬಂದನು. ಅವನು ಸಮಾರ್ಯವನ್ನು ಮೂರು ವರ್ಷ ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:5
6 ತಿಳಿವುಗಳ ಹೋಲಿಕೆ  

ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ, ತನ್ನ ದೋಷಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು, ವೈರಿಗಳು ಅವಳ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.”


ಇಸ್ರಾಯೇಲಿನ ಅರಸನಾದ ಏಲನ ಮಗ ಹೋಶೇಯನ ಆಳ್ವಿಕೆಯ ಏಳನೆಯ ವರ್ಷ, ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಅದಕ್ಕೆ ಮುತ್ತಿಗೆಹಾಕಿದನು.


ಆದರೆ ಅಸ್ಸೀರಿಯದ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನೆಂದರೆ, ಹೋಶೇಯನು ಅಸ್ಸೀರಿಯದ ಅರಸನಿಗೆ ವರ್ಷ ವರ್ಷಕ್ಕೂ ಕೊಡುವ ಕಪ್ಪವನ್ನು ಕೊಡದೆ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ದೂತರನ್ನು ಕಳುಹಿಸಿದನು. ಆದ್ದರಿಂದ ಅಸ್ಸೀರಿಯದ ಅರಸನು ಅವನನ್ನು ಕಟ್ಟಿ, ಸೆರೆಮನೆಯಲ್ಲಿ ಬಂಧಿಸಿದನು.


ಸ್ವಲ್ಪ ಸಮಯದ ನಂತರ, ಅರಾಮಿನ ಅರಸ ಬೆನ್ಹದದನು ತನ್ನ ಸಮಸ್ತ ಸೈನ್ಯವನ್ನು ಕೂಡಿಸಿಕೊಂಡು ಹೊರಟುಹೋಗಿ, ಸಮಾರ್ಯವನ್ನು ಮುತ್ತಿಗೆಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು