7 ಇಸ್ರಾಯೇಲರನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ ಇದೆಲ್ಲವೂ ಆಯಿತು. ಅವರು ಬೇರೆ ದೇವರುಗಳನ್ನು ಆರಾಧಿಸಿದರು.
7 ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.
7 ಇಸ್ರಯೇಲರ ಈ ದುರ್ಗತಿಗೆ ಅವರ ದುರ್ನಡತೆಯೇ ಕಾರಣ: ಹೇಗೆಂದರೆ, ಅವರು ತಮ್ಮನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಅವನ ರಾಜ್ಯದಿಂದ ಹೊರತಂದ ದೇವರಾದ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿ ಅನ್ಯದೇವತೆಗಳನ್ನು ಪೂಜಿಸಿದರು.
7 ಇಸ್ರಾಯೇಲ್ಯರ ಈ ದುರ್ಗತಿಗೆ ಅವರ ದುರ್ನಡತೆಯೇ ಕಾರಣ; ಹೇಗಂದರೆ - ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.
7 ಇಸ್ರೇಲರು ತಮ್ಮ ದೇವರಾದ ಯೆಹೋವನ ವಿರುದ್ಧ ಪಾಪಗಳನ್ನು ಮಾಡಿದ್ದರಿಂದ ಇವೆಲ್ಲವೂ ಸಂಭವಿಸಿದವು. ಈಜಿಪ್ಟಿನ ರಾಜನಾದ ಫರೋಹನ ಆಳ್ವಿಕೆಯಿಂದ ಇಸ್ರೇಲರನ್ನು ತಪ್ಪಿಸಿ ಯೆಹೋವನು ಅವರನ್ನು ಈಜಿಪ್ಟ್ ದೇಶದಿಂದ ಹೊರತಂದಿದ್ದನು. ಆದರೆ ಇಸ್ರೇಲರು ಬೇರೆ ದೇವರುಗಳನ್ನು ಪೂಜಿಸಲು ಆರಂಭಿಸಿ
ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯನ್ನು ನೀವು ಉಲ್ಲಂಘಿಸಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಅವರು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವರು. ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯುವುದು. ಅವರು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ನೀವು ಬೇಗನೆ ನಾಶವಾಗಿಹೋಗುವಿರಿ,” ಎಂದನು.
ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಅವರ ವಿಗ್ರಹಗಳು ಮಾತನಾಡುವುದಿಲ್ಲ. ಅವುಗಳನ್ನು ಹೊತ್ತುಕೊಳ್ಳತಕ್ಕದ್ದು, ಏಕೆಂದರೆ ಅವು ನಡೆಯಲಾರವು. ಅವುಗಳಿಗೆ ಭಯಪಡಬೇಡಿರಿ. ಏಕೆಂದರೆ, ಅವು ಕೆಟ್ಟದ್ದನ್ನು ಮಾಡಲಾರವು. ಒಳ್ಳೆಯದನ್ನು ಮಾಡುವುದೂ ಸಹ ಅವುಗಳಲ್ಲಿ ಇಲ್ಲ.
“ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.
ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಆದರೆ ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ, “ನೀವು ಇತರ ದೇವರುಗಳಿಗೆ ಭಯಪಡದೆ ಅವುಗಳಿಗೆ ಅಡ್ಡಬೀಳದೆ, ಅವುಗಳನ್ನು ಸೇವಿಸದೆ, ಅವುಗಳಿಗೆ ಬಲಿಯನ್ನು ಅರ್ಪಿಸದೆ ಇರಬೇಕು.
ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಆದರೆ ಅವನು ತನ್ನ ತಂದೆಯಾದ ದಾವೀದನ ಹಾಗೆ ನಡೆಯದೆ, ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಲಿಲ್ಲ,
ಅಬಿಯಾಮನು, ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ, ಅವನ ಹೃದಯವು ತನ್ನ ದೇವರಾದ ಯೆಹೋವ ದೇವರ ಮುಂದೆ ಪೂರ್ಣವಾಗಿರದೆ, ತನಗೆ ಮುಂಚೆ ಇದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.
ಸೊಲೊಮೋನನು ಮುದುಕನಾದ ಕಾಲದಲ್ಲಿ ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗಿಸಿದರು. ಅವನ ಹೃದಯವು ತನ್ನ ತಂದೆ ದಾವೀದನ ಹೃದಯದ ಹಾಗೆ ತನ್ನ ದೇವರಾದ ಯೆಹೋವ ದೇವರ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.
‘ನಾನೇ ನಿಮ್ಮ ದೇವರಾದ ಯೆಹೋವ ದೇವರು. ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡಬೇಡಿರಿ,’ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಸ್ವರವನ್ನು ಕೇಳದೆ ಹೋದಿರಿ,” ಎಂದು ಹೇಳಿದನು.
ಏಕೆಂದರೆ ನಾನು ಸತ್ತಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವೇ ಕೆಡಿಸಿಕೊಂಡು, ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು. ನೀವು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ನಿಮ್ಮ ಕ್ರಿಯೆಗಳಿಂದ ಅವರಿಗೆ ಕೋಪವನ್ನೆಬ್ಬಿಸುವದರಿಂದ ನಿಮಗೆ ಕೇಡು ಸಂಭವಿಸುವುದು,” ಎಂದು ಹೇಳಿದನು.
ಆದರೂ ಎಫ್ರಾಯೀಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದ್ದರಿಂದ ಯೆಹೋವ ದೇವರು ಅದರ ರಕ್ತಾಪರಾಧವನ್ನು ಅದರ ಮೇಲೆ ಬರಮಾಡುವರು. ಅವನ ನಿಂದೆಯನ್ನು ಯೆಹೋವ ದೇವರು ಅವನ ಮೇಲೆ ಬರಮಾಡುವರು.
ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ.
ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸುತ್ತಾರೆ. ಗುಡ್ಡಗಳ ಮೇಲೆ ಏಲಾ, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ದಟ್ಟವಾಗಿರುವುದರಿಂದ ಧೂಪವನ್ನು ಸುಡುತ್ತಾರೆ. ಆದ್ದರಿಂದ ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವರು. ನಿಮ್ಮ ಸೊಸೆಯಂದಿರು ವ್ಯಭಿಚಾರಿಣಿಗಳಾಗುವರು.