Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:9 - ಕನ್ನಡ ಸಮಕಾಲಿಕ ಅನುವಾದ

9 ಇಸ್ರಾಯೇಲರು ರಹಸ್ಯವಾಗಿ ತಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಯುಕ್ತವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲುಗೊಂಡು ಕೋಟೆಯುಳ್ಳ ಪಟ್ಟಣಗಳವರೆಗೂ, ತಮ್ಮ ಸಮಸ್ತ ಪಟ್ಟಣಗಳಲ್ಲಿ ತಮಗೆ ಪೂಜಾಸ್ಥಳಗಳನ್ನು ಕಟ್ಟಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಸ್ರಾಯೇಲರು ತಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದ ಗುಪ್ತವಾದ ದುಷ್ಟ ಕೃತ್ಯಗಳನ್ನು ನಡಿಸಿದರು. ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ತಮ್ಮ ದೇವರಾದ ಆ ಸರ್ವೇಶ್ವರನಿಗೆ ವಿರೋಧವಾದ ಕೃತ್ಯಗಳನ್ನು ಗುಪ್ತವಾಗಿ ನಡೆಸಿದರು; ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಗುಪ್ತವಾಗಿ ತಮ್ಮ ದೇವರಾದ ಯೆಹೋವನಿಗೆ ವಿರೋಧವಾದ ಕೃತ್ಯಗಳನ್ನು ನಡಿಸಿದರು; ಕಾವಲುಗಾರರ ಬುರುಜುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಸ್ರೇಲರು ತಮ್ಮ ದೇವರಾದ ಯೆಹೋವನ ವಿರುದ್ಧ ರಹಸ್ಯವಾದ ಕೆಟ್ಟಕಾರ್ಯಗಳನ್ನು ಮಾಡಿದರು. ಇಸ್ರೇಲರು ಚಿಕ್ಕ ಊರಿನಿಂದಿಡಿದು ದೊಡ್ಡ ನಗರದವರೆಗೂ ತಮ್ಮ ಎಲ್ಲಾ ನಗರಗಳಲ್ಲಿ ಉನ್ನತಸ್ಥಳಗಳನ್ನು ನಿರ್ಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:9
10 ತಿಳಿವುಗಳ ಹೋಲಿಕೆ  

ಅವರು ಕಾವಲು ಗೋಪುರದಿಂದ ಕೋಟೆಯುಳ್ಳ ಪಟ್ಟಣಗಳವರೆಗೂ ಫಿಲಿಷ್ಟಿಯರನ್ನು ಗಾಜಪ್ರಾಂತ್ಯದವರೆಗೆ ಸಂಹರಿಸಿದನು.


ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ಅಲ್ಲಿನ ಜನರು ಅಯೋಗ್ಯರೇ? ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆಯೇ? ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲು ಕುಪ್ಪೆಯ ಹಾಗಿವೆ, ಎಂದು ಹೇಳಿದನು.


ಆಗ ದೇವರು ನನಗೆ, “ಮನುಷ್ಯಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವ ದೇವರು ನಾಡನ್ನು ತೊರೆದುಬಿಟ್ಟಿದ್ದಾರೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.


ನನ್ನ ಹೃದಯವು ಮರುಳುಗೊಂಡು, ನನ್ನ ಕೈ ಅವುಗಳನ್ನು ನನ್ನ ಬಾಯಿಂದ ಗೌರವದಿಂದ ಮುಗಿದಿದ್ದರೆ,


“ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ನಿನ್ನ ಸಹೋದರನಾಗಲಿ, ಮಗನಾಗಲಿ, ಮಗಳಾಗಲಿ, ಪ್ರೀತಿಯ ಹೆಂಡತಿಯಾಗಲಿ, ಪ್ರಾಣ ಸ್ನೇಹಿತನಾಗಲಿ, “ನೀವೂ, ನಿಮ್ಮ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು


ಆಗ ಜನರು, “ಇಸ್ರಾಯೇಲರು ತಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ.


ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು. ತಮ್ಮ ಮೂರ್ತಿಗಳಿಂದ ದೇವರಿಗೆ ದುಃಖಪಡಿಸಿದರು.


ತಮ್ಮ ಆಲೋಚನೆಗಳನ್ನು ಯೆಹೋವ ದೇವರಿಗೆ ಮರೆಮಾಡುವುದಕ್ಕೆ ಅಗಾಧದಲ್ಲಿ ಹೋಗಿ, ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು? ಎಂದುಕೊಂಡು, ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸುವವರಿಗೆ ಕಷ್ಟ!


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು