11 ಅಶ್ಶೂರದ ರಾಜನು ಇಸ್ರೇಲರನ್ನು, ಸೆರೆಯಾಳುಗಳನ್ನಾಗಿ ಅಶ್ಶೂರಿಗೆ ಒಯ್ದನು. ಅವನು ಅವರನ್ನು ಹಲಹು ಎಂಬ ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ನಗರಗಳಲ್ಲಿಯೂ ವಾಸಿಸುವಂತೆ ಮಾಡಿದನು.
ಆದಕಾರಣ ಇಸ್ರಾಯೇಲಿನ ದೇವರು ಅಸ್ಸೀರಿಯದ ಅರಸನಾದ ಪೂಲನ ಆತ್ಮವನ್ನೂ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ, ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ, ಗಾದ್ಯರನ್ನೂ, ಮನಸ್ಸೆಯ ಅರ್ಧ ಗೋತ್ರದವರನ್ನೂ ಹಲಹ, ಹಾಬೋರ್, ಹಾರ, ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ತೆಗೆದುಕೊಂಡು ಹೋದರು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.
ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?
ಮೊಲೋಖನ ಗುಡಾರವನ್ನೂ ರೊಂಫಾ ದೇವತೆಯ ನಕ್ಷತ್ರವನ್ನೂ ನೀವು ನಿರ್ಮಿಸಿಕೊಂಡ ವಿಗ್ರಹಗಳನ್ನೂ ಪೂಜಿಸಿದಿರಿ. ಆದ್ದರಿಂದ ಬಾಬಿಲೋನಿನ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ,’ ಎಂದು ಬರೆದಿರುವ ಪ್ರಕಾರ ಇದು ನೆರವೇರಿತು.
ನೀವು ಯೆಹೋವ ದೇವರನ್ನು ಹುಡುಕಿರಿ ಮತ್ತು ಬದುಕಿರಿ. ಇಲ್ಲದಿದ್ದರೆ, ಆತನು ಬೆಂಕಿಯಂತೆ ಯೋಸೇಫನ ಗೋತ್ರಗಳಲ್ಲಿ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವುದಿಲ್ಲ.
ಯೆಹೋವ ದೇವರು, “ನಾನು ಅವರಿಗೆ ಆಜ್ಞಾಪಿಸಿದ ಎಲ್ಲದರ ಪ್ರಕಾರ ಮತ್ತು ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಸಮಸ್ತ ನಿಯಮದ ಪ್ರಕಾರ ಕೈಗೊಂಡು ನಡೆಯುವುದರಲ್ಲಿ ಅವರು ಜಾಗರೂಕರಾಗಿದ್ದರೆ, ನಾನು ಅವರ ಪಿತೃಗಳಿಗೆ ಕೊಟ್ಟ ದೇಶದಿಂದ ಪುನಃ ಇಸ್ರಾಯೇಲರು ಅಲೆದಾಡುವಂತೆ ಮಾಡುವುದಿಲ್ಲ,” ಎಂದು ಹೇಳಿದ್ದರು.
ಯೆಹೋವ ದೇವರು, “ನಾನು ಇಸ್ರಾಯೇಲನ್ನು ತೆಗೆದುಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು. ಇದಲ್ಲದೆ ನಾನು ಆಯ್ದುಕೊಂಡ ಯೆರೂಸಲೇಮ್ ಪಟ್ಟಣವನ್ನೂ, ‘ನನ್ನ ಹೆಸರು ಅಲ್ಲಿರುವುದು,’ ಎಂದು ನಾನು ಹೇಳಿದ ಆಲಯವನ್ನೂ ತೆಗೆದುಬಿಡುವೆನು,” ಎಂದು ಹೇಳಿದರು.
ಆಗ ಅಸ್ಸೀರಿಯದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡನು.
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ನಿರಪರಾಧಿಗಳನ್ನು ಬೆಳ್ಳಿಗೆ ಮತ್ತು ಬಡವರನ್ನು ಒಂದು ಜೋಡಿ ಕೆರಗಳಿಗೆ ಮಾರಿದರು.
ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.
ನೀವು ಅನೇಕ ವರ್ಷ ಅವರನ್ನು ತಾಳಿಕೊಂಡಿರಿ. ನಿಮ್ಮ ಪ್ರವಾದಿಗಳ ಮುಖಾಂತರ ನಿಮ್ಮ ಆತ್ಮನಿಂದ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಕಿವಿಗೊಡದೆ ಇದ್ದುದರಿಂದ ನೀವು ಅವರನ್ನು ಅನ್ಯದೇಶದವರ ಕೈಯಲ್ಲಿ ಒಪ್ಪಿಸಿದಿರಿ.