Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:21 - ಕನ್ನಡ ಸಮಕಾಲಿಕ ಅನುವಾದ

21 ಇಗೋ, ನೀನು ಜಜ್ಜಿದ ದಂಟಿಗೆ ಸಮಾನವಾಗಿರುವ ಈಜಿಪ್ಟಿನ ಮೇಲೆ ಭರವಸೆ ಇಟ್ಟಿರುವಿಯಷ್ಟೆ, ಅದರ ಮೇಲೆ ಮನುಷ್ಯನು ಊರಿಕೊಂಡರೆ ಅದು ಅವನ ಕೈಯನ್ನೇ ಚುಚ್ಚಿ ಗಾಯ ಮಾಡುವುದು! ಈಜಿಪ್ಟಿನ ಅರಸನಾದ ಫರೋಹನಲ್ಲಿ ಭರವಸೆ ಇಟ್ಟವರೆಲ್ಲರಿಗೂ ಇದೇ ಗತಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುವೆಯೋ? ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ; ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಇದೇ ಗತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಅಂಥ ಜೊಂಡನ್ನು ಊರಿಕೊಳ್ಳುವವನ ಕೈಯನ್ನೇ ಚುಚ್ಚಿ ತಿವಿಯುವ ಕೋಲು ಅದು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಜಜ್ಜಿದ ದಂಟಿಗೆ ಸಮಾನವಾಗಿರುವ ಐಗುಪ್ತದಲ್ಲಿ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ದಂಟಿನ ಮೇಲೆ ಕೈಯೂರಿಕೊಳ್ಳುವದಾದರೆ ಅದು ಅವನ ಕೈಯನ್ನು ತಿವಿದು ಒಳಗೆ ಹೋಗುತ್ತದಲ್ಲವೇ! ಐಗುಪ್ತದ ಅರಸನಾದ ಫರೋಹನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀನು ಮುರಿದುಬಿದ್ದಿರುವ ದಂಟನ್ನು ಊರುಗೋಲೆಂದು ನಂಬಿ ಭರವಸೆಯಿಟ್ಟಿರುವೆ! ಈಜಿಪ್ಟ್ ಊರುಗೋಲಾಗಿದೆ. ಒಬ್ಬ ಮನುಷ್ಯನು ಈ ಊರುಗೋಲಿನ ಮೇಲೆ ಭರವಸೆಯಿಟ್ಟರೆ ಅದು ಮುರಿದು ಬೀಳುತ್ತದೆ ಮತ್ತು ಅವನ ಕೈಯನ್ನೇ ಚುಚ್ಚಿ ಅವನಿಗೆ ನೋವನ್ನು ಉಂಟುಮಾಡುತ್ತದೆ! ಈಜಿಪ್ಟಿನ ರಾಜನು ತನ್ನನ್ನು ನಂಬಿದ ಜನರೆಲ್ಲರಿಗೂ ಇದೇ ರೀತಿಯಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:21
12 ತಿಳಿವುಗಳ ಹೋಲಿಕೆ  

ಏಕೆಂದರೆ ಈಜಿಪ್ಟಿನವರ ಸಹಾಯವು ವ್ಯರ್ಥವೇ ವ್ಯರ್ಥ. ಆದ್ದರಿಂದ ನಾನು ಅವಳಿಗೆ ಇದನ್ನು ಕುರಿತು ಅವರ ಬಲವು ನಿಂತು ಹೋಗಿದೆ ಎಂದು ನಾನು ಕೂಗಿದ್ದೇನೆ.


ಈಜಿಪ್ಟಿನ ಅರಸನಾದ ಫರೋಹನು ನಾಶವಾದನು; ಸಮಯವನ್ನು ತಪ್ಪಿಸಿದ್ದಾನೆಂದು ಅಲ್ಲಿ ಕೂಗುತ್ತಾರೆ.


ಇಗೋ! ನೀನು ಜಜ್ಜಿದ ದಂಟಿಗೆ ಸಮಾನವಾಗಿರುವ ಈಜಿಪ್ಟಿನ ಮೇಲೆ ಭರವಸೆ ಇಟ್ಟಿರುವಿಯಷ್ಟೆ, ಅದರ ಮೇಲೆ ಮನುಷ್ಯನು ಊರಿಕೊಂಡರೆ ಅದು ಅವನ ಕೈಯನ್ನೇ ಚುಚ್ಚಿ ಗಾಯ ಮಾಡುವುದು. ಈಜಿಪ್ಟಿನ ಅರಸನಾದ ಫರೋಹನಲ್ಲಿ ಭರವಸೆ ಇಟ್ಟವರೆಲ್ಲರಿಗೂ ಇದೇ ಗತಿಯಾಗುವದು.


ಆದರೆ ಅಸ್ಸೀರಿಯದ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನೆಂದರೆ, ಹೋಶೇಯನು ಅಸ್ಸೀರಿಯದ ಅರಸನಿಗೆ ವರ್ಷ ವರ್ಷಕ್ಕೂ ಕೊಡುವ ಕಪ್ಪವನ್ನು ಕೊಡದೆ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ದೂತರನ್ನು ಕಳುಹಿಸಿದನು. ಆದ್ದರಿಂದ ಅಸ್ಸೀರಿಯದ ಅರಸನು ಅವನನ್ನು ಕಟ್ಟಿ, ಸೆರೆಮನೆಯಲ್ಲಿ ಬಂಧಿಸಿದನು.


ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.


ಆಗ ನನ್ನ ಜನರು ಅವನು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಳ್ಳುತ್ತಿದ್ದ ಈಜಿಪ್ಟಿನ ವಿಷಯವಾಗಿಯೂ, ನಿರಾಶರಾಗಿ ನಾಚಿಕೆಪಡುವರು.


ಈಜಿಪ್ಟನ್ನು ಕುರಿತದ್ದು: ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿಯಿರುವ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಆ ಸೈನ್ಯದ ಮೇಲೆ ದಾಳಿಮಾಡಿದ್ದರ ವಿಷಯ:


ಯೆಹೂದದ ಅರಸರಾದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗ ಹೋಶೇಯನಿಗೆ ಯೆಹೋವ ದೇವರ ವಾಕ್ಯವು ಬಂದಿತು.


“ದ್ರೋಹಿಗಳಾದ ಮಕ್ಕಳಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ. ಅವರು ಆಲೋಚನೆಯನ್ನು ಮಾಡುತ್ತಾರೆ ಆದರೆ ನನ್ನಿಂದಲ್ಲ. ನನ್ನ ಆತ್ಮ ಪ್ರೇರಿತರಾಗದೆ ಉಪಾಯಗಳನ್ನು ಮಾಡುತ್ತಾರೆ, ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು