Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:27 - ಕನ್ನಡ ಸಮಕಾಲಿಕ ಅನುವಾದ

27 ಆದರೆ ರಬ್ಷಾಕೆಯು ಅವರಿಗೆ, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಯಜಮಾನನ ಸಂಗಡವಾಗಲಿ ಮಾತ್ರ ಈ ಮಾತುಗಳನ್ನು ಹೇಳುವುದಕ್ಕೆ ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಿಮ್ಮ ಸಂಗಡ ಇದ್ದರೆ ನಿಮ್ಮ ಹಾಗೆ ಇವರೂ ಸಹ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಪೌಳಿಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನರು, ನಿಮ್ಮ ಸಂಗಡವಾಗಲಿ ಮತ್ತು ನಿಮ್ಮ ಒಡೆಯರ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕಾಗಿಯೇ ಕಳುಹಿಸಿದ್ದಾರೆ. ಈ ಜನರು ನಿಮ್ಮೊಡನೆ ಇದ್ದರೆ ನಿಮ್ಮ ಹಾಗೆ ಇವರು ಕೂಡ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅದಕ್ಕೆ ರಬ್ಷಾಕೆಯು - ನನ್ನ ಯಜಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಒಡೆಯನ ಸಂಗಡವಾಗಲಿ ಮಾತಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕೂತಿರುವ ಜನರ ಸಂಗಡ ಮಾತಾಡುವದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವದು ಎಂದು ಉತ್ತರಕೊಟ್ಟು ಎದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ರಬ್ಷಾಕೆಯು ಅವರಿಗೆ, “ನನ್ನ ಒಡೆಯನು ನನ್ನನ್ನು ಕಳುಹಿಸಿದ್ದು ನಾನು ನಿಮ್ಮೊಂದಿಗೆ ಮತ್ತು ನಿಮ್ಮ ರಾಜನೊಂದಿಗೆ ಮಾತ್ರ ಮಾತಾಡುವುದಕ್ಕಲ್ಲ. ಗೋಡೆಯ ಮೇಲೆ ಕುಳಿತಿರುವ ಇತರ ಜನರೊಂದಿಗೂ ನಾನು ಮಾತನಾಡುತ್ತೇನೆ! ಅವರು ನಿಮ್ಮೊಂದಿಗಿದ್ದರೆ ತಮ್ಮ ಮಲವನ್ನು ತಾವೇ ತಿನ್ನಬೇಕಾಗುತ್ತದೆ ಮತ್ತು ತಮ್ಮ ಮೂತ್ರವನ್ನು ತಾವೇ ಕುಡಿಯಬೇಕಾಗುತ್ತದೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:27
11 ತಿಳಿವುಗಳ ಹೋಲಿಕೆ  

ಆಗ ಅವರು ನನಗೆ, “ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ಬಳಸಲು ನಿನಗೆ ಅನುಮತಿಸಿದ್ದೇನೆ. ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು,” ಎಂದನು.


ಯೆಹೋವ ದೇವರು ಹೇಳಿದ್ದೇನೆಂದರೆ, “ಈ ರೀತಿಯಾಗಿ ಇಸ್ರಾಯೇಲಿನ ಜನರು ನಾನು ಅವರನ್ನು ಓಡಿಸುವ ಜನಾಂಗಗಳ ನಡುವೆ ಅಶುದ್ಧ ಆಹಾರವನ್ನು ತಿನ್ನುವರು.”


ರುಚಿಯಾದವುಗಳನ್ನು ಒಮ್ಮೆ ತಿಂದವರು ಬೀದಿಗಳಲ್ಲಿ ಹಾಳಾಗಿದ್ದಾರೆ. ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ತೊಡುತ್ತಿದ್ದವರು, ತಿಪ್ಪೆಗಳಲ್ಲಿ ಬಿದ್ದುಕೊಂಡಿದ್ದಾರೆ.


ಅವರು ಹಾಸ್ಯಮಾಡುವವರಾಗಿ ಕೇಡನ್ನೇ ಮಾತನಾಡುತ್ತಾರೆ ದಬ್ಬಾಳಿಕೆ ಮಾಡಲು ಗರ್ವದಿಂದ ಅವರು ಬೆದರಿಕೆ ಹಾಕುತ್ತಾರೆ.


ಆಗ ಸಮಾರ್ಯದಲ್ಲಿ ದೊಡ್ಡ ಬರವಿತ್ತು. ಒಂದು ಕತ್ತೆಯ ತಲೆಯು ಎಂಬತ್ತು ಶೆಕೆಲ್ ಬೆಳ್ಳಿಗೆ, ಸುಮಾರು ನೂರು ಗ್ರಾಂ ಪಾರಿವಾಳದ ಗೊಬ್ಬರವನ್ನು ಐದು ಶೆಕೆಲ್ ಬೆಳ್ಳಿಗೆ ಮಾರಲಾಗುವವರೆಗೂ ಅದನ್ನು ಮುತ್ತಿಗೆಹಾಕಿದನು.


ಅಸ್ಸೀರಿಯದ ಅರಸನು ತನ್ನ ಅತಿ ಪ್ರಮುಖ ಅಧಿಕಾರಿಯನ್ನೂ, ಮುಖ್ಯ ನಾಯಕರನ್ನೂ, ಸೈನ್ಯಾಧಿಕಾರಿಯನ್ನೂ ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನೂ ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡರು.


ಆಗ ಹಿಲ್ಕೀಯನ ಮಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವರು ರಬ್ಷಾಕೆಗೆ, “ನೀನು ಮಾತನಾಡುವುದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ ಆದ್ದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು: ಅದು ನಮಗೆ ತಿಳಿಯುತ್ತದೆ ಆದರೆ ಹಿಬ್ರಿಯ ಭಾಷೆಯಲ್ಲಿ ಮಾತನಾಡಬೇಡ,” ಎಂದು ಹೇಳಿದರು.


ಆಗ ರಬ್ಷಾಕೆ ನಿಂತುಕೊಂಡು ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನೆಂದರೆ, “ನೀವು ಅಸ್ಸೀರಿಯದ ಮಹಾರಾಜನ ಮಾತನ್ನು ಕೇಳಿರಿ.


ಆದರೆ ರಬ್ಷಾಕೆಯು ಅವರಿಗೆ, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಯಜಮಾನನ ಸಂಗಡವಾಗಲಿ ಮಾತ್ರ ಈ ಮಾತುಗಳನ್ನು ಹೇಳುವುದಕ್ಕೆ ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಿಮ್ಮ ಸಂಗಡ ಇದ್ದರೆ ನಿಮ್ಮ ಹಾಗೆ ಇವರೂ ಸಹ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಹೇಳಿದನು.


ಹಸುಳೆಗಳ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ. ಎಳೆಯ ಕೂಸುಗಳು ಅನ್ನ ಕೇಳುತ್ತವೆ. ಆದರೆ ಅವರಿಗೆ ಯಾರೂ ಅದನ್ನು ಕೊಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು