Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:4 - ಕನ್ನಡ ಸಮಕಾಲಿಕ ಅನುವಾದ

4 ಹಿಜ್ಕೀಯನು ಉನ್ನತ ಪೂಜಾಸ್ಥಳಗಳನ್ನು ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅಶೇರ ಸ್ತಂಭಗಳನ್ನು ಕಡಿದುಹಾಕಿದನು. ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಮುರಿದುಬಿಟ್ಟನು. ಏಕೆಂದರೆ ಆ ದಿವಸಗಳವರೆಗೂ ಇಸ್ರಾಯೇಲರು ಅದಕ್ಕೆ ಧೂಪ ಸುಡುತ್ತಿದ್ದರು. ಅದನ್ನು ನೆಹುಷ್ಟಾನ್ ಎಂದು ಕರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪೂಜಾಸ್ಥಳಗಳನ್ನು ಹಾಳುಮಾಡಿ, ಕಲ್ಲುಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕತ್ತರಿಸಿ ಹಾಕಿದನು. ಮೋಶೆಯು ಮಾಡಿಸಿದ ತಾಮ್ರದ ಸರ್ಪವನ್ನು ಚೂರು‍ಚೂರು ಮಾಡಿದನು. ಇಸ್ರಾಯೇಲರು ಅದಕ್ಕೆ ಆ ವರೆಗೂ ಧೂಪವನ್ನರ್ಪಿಸುತ್ತಿದ್ದರು. ಅದಕ್ಕೆ “ನೆಹುಷ್ಟಾನ್” ಎಂಬ ಹೆಸರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪೂಜಾಸ್ಥಳಗಳನ್ನು ಹಾಳುಮಾಡಿದನು. ಕಲ್ಲುಗಂಬಗಳನ್ನು ಒಡೆದುಹಾಕಿದನು. ಅಶೇರ ವಿಗ್ರಹಸ್ಥಂಭಗಳನ್ನು ಕೆಡವಿಬಿಟ್ಟನು. ಮೋಶೆ ಮಾಡಿಸಿದ ತಾಮ್ರಸರ್ಪವನ್ನು ಚೂರುಚೂರು ಮಾಡಿದನು. ಇಸ್ರಯೇಲರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ‘ನೆಹುಷ್ಟಾನ್’ ಎಂಬ ಹೆಸರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪೂಜಾಸ್ಥಳಗಳನ್ನು ಹಾಳುಮಾಡಿ ಕಲ್ಲುಕಂಬಗಳನ್ನು ಒಡೆದು ಅಶೇರವಿಗ್ರಹ ಸ್ತಂಭಗಳನ್ನು ಕಡಿದುಹಾಕಿದನು; ಮೋಶೆಯು ಮಾಡಿಸಿದ ತಾಮ್ರಸರ್ಪವನ್ನು ಚೂರು ಚೂರು ಮಾಡಿದನು. ಇಸ್ರಾಯೇಲ್ಯರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ನೆಹುಷ್ಟಾನ್ ಎಂಬ ಹೆಸರಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:4
30 ತಿಳಿವುಗಳ ಹೋಲಿಕೆ  

ಇದಾದನಂತರ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲರು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ, ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದು, ಸಮಸ್ತ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್, ಮನಸ್ಸೆ ದೇಶಗಳಲ್ಲಿ ಯಾವುದನ್ನೂ ಉಳಿಸಲಿಲ್ಲ, ಉನ್ನತ ಪೂಜಾಸ್ಥಳಗಳನ್ನು ಮತ್ತು ಬಲಿಪೀಠಗಳನ್ನು ಕೆಡವಿಹಾಕಿದರು. ಆಗ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಆಸ್ತಿಪಾಸ್ತಿಯಿರುವ ಪಟ್ಟಣಗಳಿಗೆ ತಿರುಗಿ ಹೋದರು.


ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು,” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?


ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.


ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು. ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.


ಆ ಊರಿನ ಮನುಷ್ಯರು ಬೆಳಿಗ್ಗೆ ಎದ್ದಾಗ, ಬಾಳನ ಬಲಿಪೀಠವು ಕೆಡವಲಾಗಿದ್ದನ್ನು ಮತ್ತು ಅದರ ಪಕ್ಕದಲ್ಲಿದ್ದ ಅಶೇರ ಸ್ತಂಭವನ್ನು ಕಡಿಯಲಾಗಿರುವುದನ್ನು ಕಂಡರು. ಹೊಸದಾಗಿ ಕಟ್ಟಿದ ಬಲಿಪೀಠದ ಮೇಲೆ ಆ ಎರಡನೆಯ ಹೋರಿಯ ಬಲಿ ಅರ್ಪಿಸಲಾಗಿತ್ತು.


ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ, “ನೀನು ನಿನ್ನ ತಂದೆಗಿರುವ ಎತ್ತುಗಳಲ್ಲಿ ಎಳೆಯದಾದ ಏಳು ವರ್ಷದ ಎರಡನೆಯ ಹೋರಿಯನ್ನು ತೆಗೆದುಕೊಂಡುಹೋಗಿ, ನಿನ್ನ ತಂದೆಗೆ ಇರುವ ಬಾಳನ ಬಲಿಪೀಠವನ್ನು ಕೆಡವಿ, ಅದರ ಸಮೀಪದಲ್ಲಿರುವ ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಿ,


ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. ಅವರ ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ನೀವು ಅವರಿಗೆ ಹೀಗೆ ಮಾಡತಕ್ಕದ್ದು.


ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.


ಅವರ ದೇವರುಗಳಿಗೆ ನೀವು ಅಡ್ಡಬೀಳಲೂಬಾರದು, ಅವುಗಳನ್ನು ಆರಾಧಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ, ಅವರನ್ನು ನಿರ್ಮೂಲ ಮಾಡಿಬಿಟ್ಟು, ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದುಹಾಕಬೇಕು.


ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು. ತಮ್ಮ ಮೂರ್ತಿಗಳಿಂದ ದೇವರಿಗೆ ದುಃಖಪಡಿಸಿದರು.


ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.


ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು.


ಆಗ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯದಲ್ಲಿ ದಹನಬಲಿಯನ್ನೂ, ಸಾಯಂಕಾಲದ ಧಾನ್ಯ ಸಮರ್ಪಣೆಯನ್ನೂ, ಪಾನದ್ರವ್ಯವನ್ನೂ ದೊಡ್ಡ ಹೊಸ ಬಲಿಪೀಠದ ಮೇಲೆ ಅರ್ಪಿಸಿ, ದಹನಬಲಿಯ ರಕ್ತವೆಲ್ಲವನ್ನೂ ಚಿಮುಕಿಸಿದನು. ಆದರೆ ಕಂಚಿನ ಬಲಿಪೀಠವನ್ನು ನಾನು ಮಾರ್ಗದರ್ಶನಕ್ಕಾಗಿ ಉಪಯೋಗಿಸುವೆನು,” ಎಂದು ಆಜ್ಞಾಪಿಸಿದನು.


ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು. ಯೋತಾಮನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿದನು.


ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.


ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.


ಅರಸನಾದ ಯೋಷೀಯನು ಬಾಳನಿಗೋಸ್ಕರವೂ, ಅಶೇರನಿಗೋಸ್ಕರವೂ, ಆಕಾಶದ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಸಮಸ್ತ ಸಲಕರಣೆಗಳನ್ನು ಯೆಹೋವ ದೇವರ ಆಲಯದಿಂದ ಹೊರಗೆ ತೆಗೆದುಕೊಂಡು ಬರಬೇಕೆಂದು ಮಹಾಯಾಜಕನಾದ ಹಿಲ್ಕೀಯನಿಗೂ, ಮುಖ್ಯಯಾಜಕರಿಗೂ, ದ್ವಾರಪಾಲಕರಿಗೂ ಆಜ್ಞಾಪಿಸಿದನು. ಅರಸನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಕಣಿವೆಯ ಬಯಲಿನಲ್ಲಿ ಸುಡಿಸಿ, ಅವುಗಳ ಬೂದಿಯನ್ನು ಬೇತೇಲಿಗೆ ತರುವಂತೆ ಮಾಡಿದನು.


ಆದರೆ ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.


ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.


ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?


ಆ ಕಾಲದಲ್ಲಿ ನಾನು ಯೆಹೋವ ದೇವರ ವಾಕ್ಯವನ್ನು ನಿಮಗೆ ತಿಳಿಸಿದ ಹಾಗೆ ಯೆಹೋವ ದೇವರಿಗೂ, ನಿಮಗೂ ನಡುವೆ ನಿಂತಿದ್ದೆನು. ಏಕೆಂದರೆ ನೀವು ಆ ಬೆಂಕಿಗೆ ಭಯಪಟ್ಟು, ಬೆಟ್ಟದ ಮೇಲೆ ಏರಲಿಲ್ಲ. ದೇವರು ಹೇಳಿದ್ದೇನೆಂದರೆ:


ಬಾಳನ ದೇವಸ್ಥಾನದಿಂದ ವಿಗ್ರಹಗಳನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.


ದೇಶದ ಜನರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಆಗ ಯಾಜಕನಾದ ಯೆಹೋಯಾದಾವನು ಯೆಹೋವ ದೇವರ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು.


ಇದಲ್ಲದೆ ಯೋಷೀಯನು ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದುಬಿಟ್ಟು, ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು