2 ಅರಸುಗಳು 18:5 - ಕನ್ನಡ ಸಮಕಾಲಿಕ ಅನುವಾದ5 ಹಿಜ್ಕೀಯನು ಇಸ್ರಾಯೇಲಿನ ಯೆಹೋವ ದೇವರಲ್ಲಿ ಭರವಸೆವುಳ್ಳವನಾಗಿದ್ದನು. ಅವನಿಗೆ ಮುಂಚೆ ಇದ್ದವರಲ್ಲಿಯೂ, ಅವನ ತರುವಾಯ ಯೆಹೂದದ ಸಮಸ್ತ ಅರಸುಗಳಲ್ಲಿಯೂ ಅವನ ಹಾಗೆ ಒಬ್ಬರೂ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹಿಜ್ಕೀಯನು ಇಸ್ರಾಯೇಲರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಇರಲಿಲ್ಲ, ಆಮೇಲೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇವನು ಇಸ್ರಯೇಲ್ ದೇವರಾದ ಸರ್ವೇಶ್ವರಸ್ವಾಮಿಯಲ್ಲೆ ಭರವಸೆಯಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇವನು ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಮುಂಚೆಯೂ ತರುವಾಯವೂ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಹಿಜ್ಕೀಯನು ಇಸ್ರೇಲಿನ ದೇವರಾದ ಯೆಹೋವನಲ್ಲಿ ನಂಬಿಕೆಯಿಟ್ಟನು. ಯೆಹೂದದ ರಾಜರುಗಳಲ್ಲೆಲ್ಲಾ ಹಿಜ್ಕೀಯನಂಥವರು ಅವನ ಮುಂಚೆಯಾಗಲಿ ಅವನ ನಂತರವಾಗಲಿ ಇರಲಿಲ್ಲ. ಅಧ್ಯಾಯವನ್ನು ನೋಡಿ |
ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.