Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 18:8 - ಕನ್ನಡ ಸಮಕಾಲಿಕ ಅನುವಾದ

8 ಅವರು ಕಾವಲು ಗೋಪುರದಿಂದ ಕೋಟೆಯುಳ್ಳ ಪಟ್ಟಣಗಳವರೆಗೂ ಫಿಲಿಷ್ಟಿಯರನ್ನು ಗಾಜಪ್ರಾಂತ್ಯದವರೆಗೆ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಗಾಜ ಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ, ಕಾವಲುಗಾರರ ಗೋಪುರ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಚಿಕ್ಕಗ್ರಾಮ ಮೊದಲುಗೊಂಡು ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಗಾಜಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ ಕಾವಲುಗಾರರ ಗೋಪುರವಿದ್ದ ಚಿಕ್ಕ ಹಳ್ಳಿ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಗಾಜಪ್ರಾಂತದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ ಕಾವಲುಗಾರರ ಬುರುಜಿರುವ ಚಿಕ್ಕ ಹಳ್ಳಿ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹಿಜ್ಕೀಯನು ಗಾಜಾ ಪ್ರಾಂತ್ಯದವರೆಗಿದ್ದ ಮತ್ತು ಅದರ ಸುತ್ತಲಿನ ಪ್ರದೇಶದಲ್ಲಿದ್ದ ಫಿಲಿಷ್ಟಿಯರನ್ನು ಸೋಲಿಸಿದನು. ಅವನು ಫಿಲಿಷ್ಟಿಯರ ಚಿಕ್ಕ ಊರಿನಿಂದಿಡಿದು ದೊಡ್ಡ ನಗರಗಳನ್ನೆಲ್ಲಾ ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 18:8
9 ತಿಳಿವುಗಳ ಹೋಲಿಕೆ  

ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದು ಹೋಯಿತೆಂದು ನೀವು ಉಲ್ಲಾಸಿಸಬೇಡಿರಿ. ಏಕೆಂದರೆ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಫಲವು ಹಾರುವ ವಿಷಸರ್ಪವೇ.


ಇಸ್ರಾಯೇಲರು ರಹಸ್ಯವಾಗಿ ತಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಯುಕ್ತವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲುಗೊಂಡು ಕೋಟೆಯುಳ್ಳ ಪಟ್ಟಣಗಳವರೆಗೂ, ತಮ್ಮ ಸಮಸ್ತ ಪಟ್ಟಣಗಳಲ್ಲಿ ತಮಗೆ ಪೂಜಾಸ್ಥಳಗಳನ್ನು ಕಟ್ಟಿಸಿಕೊಂಡಿದ್ದರು.


ಇದಲ್ಲದೆ ಫಿಲಿಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ, ಯೆಹೂದದ ದಕ್ಷಿಣ ಪ್ರಾಂತದಲ್ಲಿಯೂ ನುಗ್ಗಿ, ಬೇತ್ ಷೆಮೆಷ್, ಅಯ್ಯಾಲೋನ್, ಗೆದೇರೋತ್, ಸೋಕೋ ಅದರ ಗ್ರಾಮಗಳನ್ನೂ, ತಿಮ್ನಾ ಅದರ ಗ್ರಾಮಗಳನ್ನೂ, ಗಿಮ್ಜೋ ಅದರ ಗ್ರಾಮಗಳನ್ನೂ ತೆಗೆದುಕೊಂಡು ಅಲ್ಲಿ ವಾಸವಾಗಿದ್ದರು.


ಅವನು ಅದಕ್ಕೆ ಬೇಲಿಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿ ಸಸಿಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷಿ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ದ್ರಾಕ್ಷಿಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಬಿಟ್ಟಿತು.


ತಗ್ಗಿನ ದೇಶದಲ್ಲಿಯೂ, ಬಯಲು ದೇಶದಲ್ಲಿಯೂ ಅವನಿಗೆ ಬಹು ಪಶುಗಳಿದ್ದವು. ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಹಾಗೆಯೇ ಪರ್ವತಗಳಲ್ಲಿಯೂ, ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿಗರೂ, ದ್ರಾಕ್ಷಿ ವ್ಯವಸಾಯದವರೂ ಇದ್ದರು. ಏಕೆಂದರೆ ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.


ಹೆಸರು ಹೆಸರಾಗಿ ಬರೆದಿರುವವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಅಲ್ಲಿಗೆ ಹೋಗಿ ಹಾಮ್ಯರ ಡೇರೆಗಳನ್ನೂ ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವುದರಿಂದ ಇಂದಿನವರೆಗೂ ಅವರ ಸ್ಥಳದಲ್ಲಿ ವಾಸಿಸಿದರು.


ಹಾಗೆ ಗಾಜಾ ಪಟ್ಟಣದವರೆಗೂ ವಾಸವಾಗಿದ್ದ ಅವ್ವೀಯರನ್ನು ಕಫ್ತೋರಿಂದ ಬಂದ ಕಫ್ತೋರ್ಯರು ನಾಶಮಾಡಿ, ಅವರ ಬದಲಾಗಿ ವಾಸಿಸಿದರು.


ಅಷ್ಡೋದ್ ಪಟ್ಟಣ ಮತ್ತು ಅದರ ಸುತ್ತಲಿನ ಪಟ್ಟಣಗಳೂ ಗ್ರಾಮಗಳೂ, ಗಾಜಾ, ಅದರ ಪಟ್ಟಣಗಳು, ಅದರ ಗ್ರಾಮಗಳು. ಈಜಿಪ್ಟಿನ ಕಲ್ಲಿನ ನಾಲೆ, ಮೆಡಿಟೆರಿಯನ್ ಸಮುದ್ರ, ಅದರ ಮೇರೆ ಇವುಗಳವರೆಗೂ ಇತ್ತು.


ಆದರೆ ಈಗ ನನ್ನ ದೇವರಾದ ಯೆಹೋವ ದೇವರು, ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ, ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು