2 ಅರಸುಗಳು 18:9 - ಕನ್ನಡ ಸಮಕಾಲಿಕ ಅನುವಾದ9 ಇಸ್ರಾಯೇಲಿನ ಅರಸನಾದ ಏಲನ ಮಗ ಹೋಶೇಯನ ಆಳ್ವಿಕೆಯ ಏಳನೆಯ ವರ್ಷ, ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಅದಕ್ಕೆ ಮುತ್ತಿಗೆಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇಸ್ರಾಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಶಲ್ಮನೆಸರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿ ಅದನ್ನು ವಶಪಡಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇಸ್ರಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಸಮಾರಿಯಕ್ಕೆ ವಿರುದ್ಧ ದಂಡೆತ್ತಿಬಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇಸ್ರಾಯೇಲ್ಯರ ಅರಸನೂ ಏಲನ ಮಗನೂ ಆದ ಹೋಶೇಯನ ಆಳಿಕೆಯ ಏಳನೆಯ ವರುಷದಲ್ಲಿ ಅಂದರೆ ಹಿಜ್ಕೀಯನ ಆಳಿಕೆಯ ನಾಲ್ಕನೆಯ ವರುಷದಲ್ಲಿ ಅಶ್ಶೂರದ ಅರಸನಾದ ಶಲ್ಮನೆಸೆರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅಶ್ಶೂರದ ರಾಜನಾದ ಶಲ್ಮನೆಸರನು ಸಮಾರ್ಯದ ವಿರುದ್ಧ ಹೋರಾಡಲು ಹೋದನು. ಅವನ ಸೈನ್ಯವು ನಗರವನ್ನು ಸುತ್ತುವರಿಯಿತು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ನಾಲ್ಕನೆಯ ವರ್ಷದಲ್ಲಿ ಇದು ಸಂಭವಿಸಿತು. (ಅದು ಏಲನ ಮಗನಾದ ಹೋಶೇಯನು ಇಸ್ರೇಲಿನ ರಾಜನಾಗಿ ಆಳುತ್ತಿದ್ದ ಏಳನೆಯ ವರ್ಷದಲ್ಲಿ ಸಂಭವಿಸಿತು.) ಅಧ್ಯಾಯವನ್ನು ನೋಡಿ |