Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:1 - ಕನ್ನಡ ಸಮಕಾಲಿಕ ಅನುವಾದ

1 ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನಾದ ಹಿಜ್ಕೀಯನು ಅದನ್ನು ಕೇಳಿ, ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಈ ವರದಿಯನ್ನು ಕೇಳಿದ ಹಿಜ್ಕೀಯನು ಕೋಪದಿಂದ ತನ್ನ ಬಟ್ಟೆಯನ್ನು ಹರಿದುಕೊಂಡು, ಗೋಣಿತಟ್ಟನ್ನು ಕಟ್ಟಿಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹಿಜ್ಕೀಯನು ಅದನ್ನು ಕೇಳಿ ಬಟ್ಟೆಗಳನ್ನು ಹರಿದುಕೊಂಡು ಗೋಣೀತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ರಾಜನಾದ ಹಿಜ್ಕೀಯನು ಅವುಗಳನ್ನೆಲ್ಲ ಕೇಳಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಯೆಹೋವನ ಆಲಯದೊಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:1
21 ತಿಳಿವುಗಳ ಹೋಲಿಕೆ  

ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ, ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.


ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ, ಅವನು ತನ್ನ ವಸ್ತ್ರಗಳನ್ನು ಹರಿದು, ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನತೆಯಿಂದ ನಡೆದನು.


ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.


“ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.


ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ.


ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ, ಅವರ ಸೇವಕರಾದ ಒಬ್ಬರಾದರೂ ಹೆದರಲಿಲ್ಲ.


ನಾನಾದರೋ ಅವರು ಅಸ್ವಸ್ಥರಾದಾಗ ಗೋಣಿತಟ್ಟು ಹೊದ್ದುಕೊಂಡು ಉಪವಾಸದಿಂದ ತಗ್ಗಿಸಿಕೊಂಡೆನು; ನನ್ನ ಪ್ರಾರ್ಥನೆಗಳಿಗೆ ಉತ್ತರ ದೊರೆಯಲಿಲ್ಲ.


ನಾನು ಇದನ್ನು ಕೇಳಿದಾಗ ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು, ಸ್ತಬ್ಧನಾಗಿ ಕುಳಿತುಕೊಂಡೆನು.


ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ಕಂಡಾಗ ಅವನ ಮೈಮೇಲೆ ಗೋಣಿತಟ್ಟು ಇತ್ತು.


ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು.


“ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ಜೀವಮಾನದಲ್ಲಿ ಆ ಕೇಡನ್ನು ಬರಮಾಡದೆ, ಅವನ ಮಗನ ಕಾಲದಲ್ಲಿ ಅವನ ಮನೆಯ ಮೇಲೆ ಬರಮಾಡುವೆನು,” ಎಂದನು.


ಅದೇ ದಿವಸದಲ್ಲಿ ಬೆನ್ಯಾಮೀನನಾದ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಯುದ್ಧರಂಗದಿಂದ ಶೀಲೋವಿಗೆ ಓಡಿಬಂದನು.


ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈತನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಏತಕ್ಕೆ? ನೋಡಿ, ಈಗ ಈತನ ದೇವದೂಷಣೆಯನ್ನು ನೀವೇ ಕೇಳಿದ್ದೀರಲ್ಲಾ


ನನ್ನ ಇಬ್ಬರು ಸಾಕ್ಷಿಗಳಿಗೆ ಗೋಣಿತಟ್ಟುಗಳನ್ನು ಹೊದ್ದುಕೊಂಡು, ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವಂತೆ ಮಾಡುವೆನು,”


ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.


ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು