Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:10 - ಕನ್ನಡ ಸಮಕಾಲಿಕ ಅನುವಾದ

10 “ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನೆಂದರೆ: ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರ ಮುಖಾಂತರ, “ಯೆಹೂದದ ಅರಸನಾದ ಹಿಜ್ಕೀಯನಿಗೆ, ‘ಯೆರೂಸಲೇಮನ್ನು ಅಶ್ಶೂರದ ಅರಸನಿಗೆ ಒಪ್ಪಿಸುವುದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸದಿರಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ನಿನಗೆ ಹೇಳಿ ನಿನ್ನನ್ನು ಮೋಸಗೊಳಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರ ಮುಖಾಂತರವಾಗಿ ಅವನಿಗೆ - ನೀನು ನಂಬುವ ದೇವರು - ನಾನು ಯೆರೂಸಲೇಮನ್ನು ಅಶ್ಶೂರದ ಅರಸನ ಕೈಗೆ ಒಪ್ಪಿಸುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೂದದ ರಾಜನಾದ ಹಿಜ್ಕೀಯನಿಗೆ ಇದನ್ನು ಹೇಳಿ: “ನೀನು ನಂಬುವ ದೇವರು ನಿನ್ನನ್ನು ಮೋಸಗೊಳಿಸಲು ಅವಕಾಶ ನೀಡಬೇಡ. ಅಶ್ಶೂರದ ರಾಜ ಜೆರುಸಲೇಮನ್ನು ಸೋಲಿಸುವುದಿಲ್ಲ ಎಂಬ ನಿನ್ನ ದೇವರ ಮಾತನ್ನು ನಂಬಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:10
7 ತಿಳಿವುಗಳ ಹೋಲಿಕೆ  

ಹಿಜ್ಕೀಯನು ಇಸ್ರಾಯೇಲಿನ ಯೆಹೋವ ದೇವರಲ್ಲಿ ಭರವಸೆವುಳ್ಳವನಾಗಿದ್ದನು. ಅವನಿಗೆ ಮುಂಚೆ ಇದ್ದವರಲ್ಲಿಯೂ, ಅವನ ತರುವಾಯ ಯೆಹೂದದ ಸಮಸ್ತ ಅರಸುಗಳಲ್ಲಿಯೂ ಅವನ ಹಾಗೆ ಒಬ್ಬರೂ ಇರಲಿಲ್ಲ.


ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ, ಹಿಜ್ಕೀಯನ ಬಳಿಗೆ ತಿರಿಗಿ ದೂತರನ್ನು ಕಳುಹಿಸಿ ಅವರಿಗೆ,


ಇಗೋ, ಅಸ್ಸೀರಿಯದ ಅರಸರು ಸಮಸ್ತ ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ನೀನು ಕೇಳಿದಿಯಲ್ಲಾ. ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವೆಯೋ?


ಸ್ವಲ್ಪ ಕಾಲವಾದ ನಂತರ ನಾನು ಬಂದು, ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಎಣ್ಣೆಮರಗಳು, ಜೇನು ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ಜೀವವನ್ನು ಆಯ್ದುಕೊಳ್ಳಿರಿ, ಮರಣವನ್ನಲ್ಲ. “ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸಿ ತಪ್ಪು ಮಾರ್ಗದಲ್ಲಿ ನಡೆಸುವಾಗ, ಅವನ ಮಾತನ್ನು ಕೇಳಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು