Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:19 - ಕನ್ನಡ ಸಮಕಾಲಿಕ ಅನುವಾದ

19 ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಈ ಅಸ್ಸೀರಿಯನ ಕೈಯಿಂದ ಬಿಡಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಮ್ಮ ದೇವರಾದ ಯೆಹೋವನೇ, ಅಶ್ಶೂರದ ರಾಜನಿಂದ ನಮ್ಮನ್ನು ರಕ್ಷಿಸು. ಭೂಲೋಕದ ರಾಜ್ಯಗಳೆಲ್ಲ ನೀನೊಬ್ಬನೇ ದೇವರಾದ ಯೆಹೋವನೆಂದು ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:19
17 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಎಂಬ ಹೆಸರುಳ್ಳ ನೀವು ಮಾತ್ರವೇ ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ ಎಂದು ಅವರು ತಿಳಿದುಕೊಳ್ಳಲಿ.


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.


ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾಯೇಲಿನ ಅರಸನಿಗೆ, “ಯೆಹೋವ ದೇವರು ತಗ್ಗುಗಳ ದೇವರಾಗಿರದೆ ಪರ್ವತಗಳ ದೇವರಾಗಿದ್ದನೆಂಬುದಾಗಿ ಅರಾಮ್ಯರು ಹೇಳಿದ್ದರಿಂದ, ‘ನಾನು ಯೆಹೋವ ದೇವರಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಕಾನಾನ್ಯರೂ ದೇಶವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದುಬಿಡುವರು, ಆಗ ನಿಮ್ಮ ಮಹತ್ತಾದ ಹೆಸರಿಗೆ ಏನು ಮಾಡುವಿರಿ?” ಎಂದನು.


ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.


ಭೂಮಿಯ ಜನರೆಲ್ಲಾ ಯೆಹೋವ ದೇವರ ಹಸ್ತವು ಬಲವುಳ್ಳದ್ದೆಂದು ತಿಳಿಯುವಂತೆಯೂ ನೀವು ನಿರಂತರವೂ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವಂತೆಯೂ ದೇವರಾದ ಯೆಹೋವ ದೇವರು ಹೀಗೆ ಮಾಡಿದರು,’ ಎಂದು ನೀವು ಹೇಳಬೇಕು,” ಎಂದನು.


ಜನರು ನಿಮ್ಮ ಮಹಾನಾಮವನ್ನೂ, ನಿಮ್ಮ ಬಲವಾದ ಕೈ, ನಿಮ್ಮ ಚಾಚಿದ ತೋಳು ಇವುಗಳ ಕುರಿತು ಕೇಳಿ, ಅವರು ಈ ಆಲಯದ ಕಡೆಗೆ ಬಂದು ಪ್ರಾರ್ಥನೆಮಾಡಿದರೆ,


ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ, ಜನರಲ್ಲಿ ದೇವರ ಕ್ರಿಯೆಗಳನ್ನು ತಿಳಿಯಪಡಿಸಿರಿ.


ಆದುದರಿಂದ ಯೆಹೋವ ದೇವರು ಮತ್ತೆ ನಿನಗೆ ಹೇಳುವುದೇನೆಂದರೆ: ನಾನೇ ಯೆಹೋವ ದೇವರೆಂದು ನೀನು ಇದರಿಂದ ತಿಳಿದುಕೊಳ್ಳುವೆ. ನನ್ನ ಕೈಯಲ್ಲಿರುವ ಕೋಲಿನಿಂದ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯುವೆನು, ಆಗ ಅದು ರಕ್ತವಾಗುವುದು.


ಆಗ ನಾಮಾನನೂ, ಅವನ ಸಮಸ್ತ ಸೈನ್ಯವೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ಬಂದು ನಿಂತು, “ಇಸ್ರಾಯೇಲಿನಲ್ಲಿರುವ ದೇವರ ಹೊರತು ಭೂಮಿಯಲ್ಲೆಲ್ಲೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು. ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತೆಗೆದುಕೋ,” ಎಂದನು.


ಹಿಜ್ಕೀಯನು ಇಷ್ಟು ನಂಬಿಗಸ್ತಿಕೆಯಿಂದ ಎಲ್ಲವನ್ನೂ ಮಾಡಿದ ತರುವಾಯ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿಸಿ, ಅವುಗಳನ್ನು ತನಗಾಗಿ ಜಯಿಸಬೇಕೆಂದು ಮುತ್ತಿಗೆಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು