Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:2 - ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯೂ, ಲೇಖಕನಾದ ಶೆಬ್ನ, ವೃದ್ಧ ಯಾಜಕರು ಇವರನ್ನು ಕರೆಯಿಸಿ ಅವರಿಗೆ ಆಜ್ಞಾಪಿಸಿದ್ದೇನೆಂದರೆ, ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ, ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು, ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ವೃದ್ಧಯಾಜಕರು ಇವರನ್ನು ಕರಿಸಿ ಅವರಿಗೆ ಆಜ್ಞಾಪಿಸಿದ್ದೇನಂದರೆ - ನೀವು ಗೋಣೀತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿ ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹಿಜ್ಕೀಯನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಹಿರಿಯರಾದ ಯಾಜಕರನ್ನು ಆಮೋಚನ ಮಗನೂ ಪ್ರವಾದಿಯೂ ಆಗಿದ್ದ ಯೆಶಾಯನ ಬಳಿಗೆ ಕಳುಹಿಸಿದನು. ಅವರು ತಮ್ಮ ದುಃಖವನ್ನೂ ಕಳವಳವನ್ನೂ ತೋರ್ಪಡಿಸುವಂತೆ ಗೋಣಿತಟ್ಟನ್ನು ಧರಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:2
13 ತಿಳಿವುಗಳ ಹೋಲಿಕೆ  

ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.


ಆಮೋಚನ ಮಗ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ:


ಇದರ ಬಗ್ಗೆ ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿ ಹೀಗೆಂದು ಬರೆದಿದೆ: “ಅರಣ್ಯದಲ್ಲಿ ಕೂಗುವವನ ಸ್ವರವು, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ.


ಹೀಗೆ ಪ್ರವಾದಿ ಯೆಶಾಯನ ಮುಖಾಂತರ ಹೇಳಿಸಿರುವ ಈ ಮಾತು ನೆರವೇರಿತು. ಅದೇನೆಂದರೆ:


ಉಜ್ಜೀಯನ ಇತರ ಕ್ರಿಯೆಗಳನ್ನು, ಮೊದಲನೆಯದಿಂದ ಕಡೆಯವರೆಗೆ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದನು.


ಅವರು ಅರಸನನ್ನು ಕರೆಕಳುಹಿಸಿದರು. ಅರಮನೆಯ ಕಾರ್ಯನಿರ್ವಾಹಕನಾದ ಹಿಲ್ಕೀಯನ ಮಗ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬುವರು ಅವರ ಬಳಿಗೆ ಬಂದರು.


ದಾವೀದನು ಯೋವಾಬನಿಗೂ, ಅವನ ಸಂಗಡವಿದ್ದ ಸಮಸ್ತ ಜನರಿಗೂ, “ನೀವು ನಿಮ್ಮ ವಸ್ತ್ರಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಉಟ್ಟುಕೊಂಡು, ಅಬ್ನೇರನ ಮುಂದೆ ಗೋಳಾಡಿರಿ,” ಎಂದನು. ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.


ಪೆಟ್ಟಿಗೆಯಲ್ಲಿ ಬಹಳ ಹಣ ಉಂಟೆಂದು ಅವರು ಕಂಡಾಗಲೆಲ್ಲಾ ಅರಸನ ಲೇಖಕನೂ, ಮಹಾಯಾಜಕನೂ ಬಂದು, ಯೆಹೋವ ದೇವರ ಆಲಯದಲ್ಲಿ ತಂದಿದ್ದ ಹಣವನ್ನು ಎಣಿಸಿ, ಚೀಲಗಳಲ್ಲಿ ಹಾಕಿದರು.


ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ: ‘ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.


ಯೆಹೋವ ದೇವರು ನನಗೆ ಹೀಗೆಂದನು: “ಹೋಗಿ, ಕುಂಬಾರನ ಮಣ್ಣಿನ ಮಡಕೆಯನ್ನು ತೆಗೆದುಕೊಂಡು, ಜನರ ಹಿರಿಯರಿಂದಲೂ, ಯಾಜಕರ ಹಿರಿಯರಿಂದಲೂ ಕೆಲವರನ್ನು ಕರೆದುಕೊಂಡು,


ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ, ಅವರ ಸೇವಕರಾದ ಒಬ್ಬರಾದರೂ ಹೆದರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು