2 ಅರಸುಗಳು 19:26 - ಕನ್ನಡ ಸಮಕಾಲಿಕ ಅನುವಾದ26 ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಹೆದರಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಗಿಡಕ್ಕೂ ಕಾಯಿ ಪಲ್ಯಕ್ಕೂ ಹಸಿರು ಹುಲ್ಲಿಗೂ, ಮನೆಯ ಮೇಲೆ ಬೆಳೆಯುವ ಹಾಗೂ, ಹೊಲದ ಹುಲ್ಲಿನ ಹಾಗೆ ಬೆಳೆಯುವುದಕ್ಕಿಂತ ಮೊದಲೇ ಸುಟ್ಟುಹೋದ ಪೈರಿಗೆ ಸಮಾನರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಬಲವಿಲ್ಲದವರಾದರು ಆ ನಗರವಾಸಿಗಳು ನನ್ನ ನಿಮಿತ್ತವೆ, ಸಮಾನರಾದರು ಹೊಲದ ಸಸಿಗೆ, ಎಳೆಗರಿಕೆಗೆ, ಮಾಳಿಗೆ ಮೇಲಿನ ಹುಲ್ಲಿಗೆ; ಬೆಳೆಯುವುದಕ್ಕೆ ಮೊದಲೆ ತುತ್ತಾದರು ಬಿರುಗಾಳಿಯ ಹೊಡೆತಕ್ಕೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಕಾಯಿಪಲ್ಯಕ್ಕೂ ಎಳೆಗರಿಕೆಗೂ ಮಾಳಿಗೆಯ ಮೇಲಣ ಹುಲ್ಲಿಗೂ ಹೊಡೆಹಾಯುವದಕ್ಕಿಂತ ಮೊದಲೇ ಒಣಗಿಹೋದ ಪೈರಿಗೂ ಸಮಾನರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಗರಗಳಲ್ಲಿ ವಾಸಿಸುವ ಜನರು ಬಲವಿಲ್ಲದವರಾಗಿ ನಿರಾಶೆಯಿಂದ ಗಲಿಬಿಲಿಗೊಂಡರು. ಜನರು ಹೊಲಗಳಲ್ಲಿನ ಹುಲ್ಲಿನಂತೆಯೂ ಹಸಿರುಗಿಡಗಳಂತೆಯೂ ಮಾಳಿಗೆಯ ಮೇಲೆ ಒಣಗಿ ಹಾಳಾಗುವ ಹುಲ್ಲಿನಂತೆಯೂ ಇದ್ದರು. ಅಧ್ಯಾಯವನ್ನು ನೋಡಿ |